ನಾನು ಫಾರ್ಮ್‌ ಕಳೆದುಕೊಂಡಿಲ್ಲ, ನೆಟ್ಸ್‌ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದೇನೆ; ಸೂರ್ಯಕುಮಾರ್ ಯಾದವ್

Date:

ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲೂ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಮುಗ್ಗರಿಸಿದ್ದಾರೆ. ಮೊದಲ ಪಂದ್ಯದಲ್ಲಿ 12 ರನ್ ಬಾರಿಸಿದ್ದ ಸೂರ್ಯ, ದ್ವಿತೀಯ ಪಂದ್ಯದಲ್ಲಿ 5 ರನ್​ಗಳಿಸಿ ಔಟಾಗಿದ್ದರು. ಇದೀಗ ಮೂರನೇ ಪಂದ್ಯದಲ್ಲಿ ಮತ್ತೊಮ್ಮೆ 12 ರನ್​ಗಳಿಸಿ ವಿಕೆಟ್ ಒಪ್ಪಿಸಿದ್ದಾರೆ. ಅಷ್ಟೇ ಅಲ್ಲದೆ ಸೂರ್ಯಕುಮಾರ್ ಯಾದವ್ ಟಿ20 ಕ್ರಿಕೆಟ್​ನಲ್ಲಿ ಅರ್ಧಶತಕ ಬಾರಿಸಿ ವರ್ಷಗಳೇ ಕಳೆದಿವೆ. ಹೀಗಾಗಿಯೇ ಟೀಮ್ ಇಂಡಿಯಾ ನಾಯಕನ ಫಾರ್ಮ್​ ಬಗ್ಗೆ ಪ್ರಶ್ನೆಗಳೆದ್ದಿವೆ.

- Advertisement -

ಇದೇ ಪ್ರಶ್ನೆಯನ್ನು ಮೂರನೇ ಪಂದ್ಯದ ಮುಕ್ತಾಯದ ಬಳಿಕ ಸೂರ್ಯಕುಮಾರ್ ಯಾದವ್ ಮುಂದೆ ಪತ್ರಕರ್ತರು ಕೇಳಿದ್ದರು. ಈ ವೇಳೆ ಅವರು ನೀಡಿದ ಉತ್ತರದಿಂದ ಇದೀಗ ಎಲ್ಲಡೆ ವೈರಲ್‌ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ದಕ್ಷಿಣ ಆಫ್ರಿಕಾ ವಿರುದ್ಧ ಪಂದ್ಯ ಗೆದ್ದ ಬಳಿಕ ಮಾತನಾಡಿದ ಸೂರ್ಯಕುಮಾರ್ ಯಾದವ್ ಅವರಿಗೆ, ಬ್ಯಾಟಿಂಗ್ ಲಯ ಕಳೆದುಕೊಂಡಿರುವ ಬಗ್ಗೆ ಪ್ರಶ್ನಿಸಲಾಗಿತ್ತು. ಈ ಪ್ರಶ್ನೆಗೆ ಉತ್ತರಿಸಿದ ಸೂರ್ಯ, ನಾನು ಫಾರ್ಮ್ ಕಳೆದುಕೊಂಡಿಲ್ಲ. ನೆಟ್ಸ್​ನಲ್ಲಿ ಅದ್ಭುತವಾಗಿ ಬ್ಯಾಟಿಂಗ್ ಮಾಡುತ್ತಿದ್ದೇನೆ. ನನ್ನ ನಿಯಂತ್ರಣದಲ್ಲಿರುವ ಎಲ್ಲವನ್ನೂ ನಾನು ಪ್ರಯತ್ನಿಸುತ್ತಿದ್ದೇನೆ. ರನ್‌ಗಳು ಬರಬೇಕಾದಾಗ ಸಂದರ್ಭದಲ್ಲಿ ಖಂಡಿತವಾಗಿಯೂ ರನ್ ಬರುತ್ತವೆ. ಸದ್ಯ ನಾನು ಫಾರ್ಮ್ ಕಳೆದುಕೊಂಡಿಲ್ಲ. ರನ್​ಗಳಿಸುತ್ತಿಲ್ಲ ಅಷ್ಟೇ ಎಂದಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕುಸ್ತಿ ಅಖಾಡಕ್ಕೆ ಮರಳುವ ವಿನೇಶ್‌ ಫೋಗಟ್‌ ನಿರ್ಧಾರಕ್ಕೆ ಸ್ವಾಗತ!

ಟೀಮ್ ಇಂಡಿಯಾ ನಾಯಕನ ಈ ಹೇಳಿಕೆಯು ಇದೀಗ ಟ್ರೋಲ್ ಆಗಿದೆ. ಏಕೆಂದರೆ ಅಭ್ಯಾಸದ ವೇಳೆ ರನ್​ಗಳಿಸಿ ಪ್ರಯೋಜನವೇನು? ಎಂದು ಹಲವರು ಸಾಮಾಜಿಕ ಮಾಧ್ಯಮದಲ್ಲಿ ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲದೆ ಕಳೆದೊಂದು ವರ್ಷದಿಂದ ಒಂದೇ ಒಂದು ಅರ್ಧಶತಕ ಬಾರಿಸದೇ ಫಾರ್ಮ್​ ಕಳೆದುಕೊಂಡಿಲ್ಲ ಎಂದು ಹೇಳುವುದರಲ್ಲಿ ಅರ್ಥವೇ ಇಲ್ಲ ಎಂದು ಅನೇಕರು ಟೀಕಿಸಿದ್ದಾರೆ.

ಇನ್ನು ಸೂರ್ಯಕುಮಾರ್ ಯಾದವ್ ಅವರ ಕಳೆದ 20 ಇನಿಂಗ್ಸ್​ಗಳ ಒಟ್ಟು ಸ್ಕೋರ್ 218 ರನ್​ಗಳು ಮಾತ್ರ. ಈ 218 ರನ್​ಗಳಿಸಲು ಅವರು ಬರೋಬ್ಬರಿ 183 ಎಸೆತಗಳನ್ನು ತೆಗೆದುಕೊಂಡಿದ್ದರು. ಅಂದರೆ 119ರ ಸ್ಟ್ರೈಕ್​ ರೇಟ್​ನಲ್ಲಿ 12.82 ಸರಾಸರಿಯಲ್ಲಿ ಮಾತ್ರ ರನ್​ ಗಳಿಸಿದ್ದಾರೆ.

ಅಷ್ಟೇ ಅಲ್ಲದೆ 2024ರ ಟಿ20 ವಿಶ್ವಕಪ್​ ಬಳಿಕ ಸೂರ್ಯಕುಮಾರ್ ಯಾದವ್ ಅವರ ಬ್ಯಾಟ್​ನಿಂದ ಮೂಡಿಬಂದಿರುವುದು ಕೇವಲ 2 ಅರ್ಧಶತಕಗಳು ಮಾತ್ರ. ಅಲ್ಲದೆ ಒಂದು ವರ್ಷದಿಂದ ಅರ್ಧ ಶತಕವನ್ನು ಸಹ ಬಾರಿಸಲು ಸಾಧ್ಯವಾಗಿಲ್ಲ. ಹೀಗಾಗಿಯೇ ಸೂರ್ಯಕುಮಾರ್ ಯಾದವ್ ಅವರ ಫಾರ್ಮ್​ ಬಗ್ಗೆ ಪ್ರಶ್ನೆಗಳೆದ್ದಿವೆ. ಆದರೆ ಸೂರ್ಯಕುಮಾರ್ ಯಾದವ್ ಪ್ರಕಾರ ಫಾರ್ಮ್​ ಕಳೆದುಕೊಂಡಿಲ್ಲ, ಬದಲಾಗಿ ರನ್​ಗಳಿಸುತ್ತಿಲ್ಲ ಅಷ್ಟೇ…!

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

3 ಗಂಟೆಗಳ ರೋಚಕ ಹೋರಾಟ: ಯುಎಸ್ ಓಪನ್ ಮೊದಲ ಸುತ್ತಿನಲ್ಲೇ ವಿಲಿಯಮ್ಸ್ ಸಹೋದರಿಯರಿಗೆ ಸೋಲು

ಅಮೆರಿಕನ್ ಓಪನ್ ಟೆನಿಸ್ ಟೂರ್ನಿಯಲ್ಲಿ ವಿಸ್ಮಯಕಾರಿ ಪುನರಾಗಮನದ ನಿರೀಕ್ಷೆಯಲ್ಲಿದ್ದ ಲೆಜೆಂಡರಿ ಜೋಡಿ...

75ನೇ ವರ್ಷದ ಬಾಂಧವ್ಯ: ಭಾರತ-ಜಪಾನ್ ನಡುವೆ ಚೊಚ್ಚಲ ಟಿ20 ಕ್ರಿಕೆಟ್

ಭಾರತ ಹಾಗೂ ಜಪಾನ್ ನಡುವಿನ 75ನೇ ವರ್ಷದ ರಾಜತಾಂತ್ರಿಕ ಬಾಂಧವ್ಯದ ಸಂಭ್ರಮಾಚರಣೆಯ...

ಏಷ್ಯನ್ ಗೇಮ್ಸ್ | ಟೀಂ ಇಂಡಿಯಾಗೆ ‘ವೆರಿ ವೆರಿ ಸ್ಪೆಷಲ್’; ವಿವಿಎಸ್‌ ಲಕ್ಷ್ಮಣ್ ಹೆಡ್‌ ಕೋಚ್!

ಜಪಾನ್‌ನಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್‌ನಲ್ಲಿ ಜಸ್‌ಪ್ರೀತ್ ಬೂಮ್ರಾ, ಶ್ರೇಯಸ್ ಅಯ್ಯರ್ ಹಾಗೂ...

ನೂರಾರು ವಿವಾದ, ಅದಕ್ಕೂ ಮೀರಿದ ಮನುಷ್ಯತ್ವ: ಮೆಸ್ಸಿಯ 21 ವರ್ಷದ ಪಯಣದತ್ತ ಒಂದು ಹಿನ್ನೋಟ

ಲಿಯೋನೆಲ್ ಮೆಸ್ಸಿ ಎಂಬ ದಂತಕಥೆಯನ್ನು ನಾವು ಅತ್ಯಂತ ಸಮತೋಲಿತ ದೃಷ್ಟಿಕೋನದಿಂದ ನೋಡಬೇಕಾಗಿದೆ....