ಬಹಳ ದೂರ ಸಾಗಲ್ಲ ಅನ್ಸುತ್ತೆ: ಪಾಕ್ ವಿರುದ್ಧ ಭಾರತದ ಭರ್ಜರಿ ಗೆಲುವಿನ ಬಳಿಕ ಆರ್. ಅಶ್ವಿನ್ ಭವಿಷ್ಯ!

Date:

2026ರ ಐಸಿಸಿ ಮಹಿಳಾ ಟಿ20 ವಿಶ್ವಕಪ್‌ ಟೂರ್ನಮೆಂಟ್‌ನ ಉದ್ಘಾಟನಾ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಮಹಿಳಾ ತಂಡ ಭರ್ಜರಿ ಜಯ ಸಾಧಿಸಿದೆ. ಆದರೆ ಭಾರತ “ಬಹಳ ದೂರ ಸಾಗಲ್ಲ ಅನ್ಸುತ್ತೆ” ಎಂದು ಭಾರತದ ಮಾಜಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಭವಿಷ್ಯ ನುಡಿದಿದ್ದಾರೆ.

- Advertisement -

ಬರ್ಮಿಂಗ್ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಗ್ರೂಪ್ ಎ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದೆ. ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಟೀಮ್ ಇಂಡಿಯಾ ಆರಂಭಿಕ ಹಿನ್ನಡೆಗಳಿಂದ ಚೇತರಿಸಿಕೊಂಡು 170/6 ಮೊತ್ತವನ್ನು ಗಳಿಸಿದೆ. ಅದಾದ ಬಳಿಕ ಬ್ಯಾಟಿಂಗ್ ಮಾಡಿದ ಪಾಕ್ 17 ಓವರ್‌ಗಳಲ್ಲಿ ಕೇವಲ 106 ರನ್‌ಗಳಿಗೆ ಆಲೌಟ್ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಇದನ್ನು ಓದಿದ್ದೀರಾ? ಟಿ20 ಆರ್ಭಟದಲ್ಲಿ ಮಂಕಾಗುತ್ತಿರುವ ‘ಏಕದಿನ’ದ ಅಸ್ತಿತ್ವ: ಕ್ರಿಕೆಟ್ ಜಗತ್ತಿನ ಮುಂದಿದೆ ಯಕ್ಷಪ್ರಶ್ನೆ

ಆದರೂ ಬಲಿಷ್ಠ ಎದುರಾಳಿಗಳ ವಿರುದ್ಧ, ವಿಶೇಷವಾಗಿ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್‌ನಂತಹ ಪ್ರಬಲ ತಂಡಗಳ ವಿರುದ್ಧ ಭಾರತಕ್ಕೆ ಸೆಣಸುವುದು ಕಷ್ಟವಾಗಬಹುದು ಎನ್ನುತ್ತಾರೆ ಅಶ್ವಿನ್.

ಯೂಟ್ಯೂಬ್ ಚಾನೆಲ್ ಆಶ್ ಕಿ ಬಾತ್‌ನಲ್ಲಿ ಮಾತನಾಡಿದ ಆರ್ ಅಶ್ವಿನ್, “ಈ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡವು ಹೆಚ್ಚು ದೂರ ಸಾಗುತ್ತದೆಯೇ ಎಂದು ನನಗೆ ಖಚಿತವಿಲ್ಲ. ಏಕೆಂದರೆ ತಂಡದಲ್ಲಿ ಬಲದ ಕೊರತೆಯಿದೆ. ಪಾಕಿಸ್ತಾನ ವಿರುದ್ಧ ಭಾರತ ಅತ್ಯುತ್ತಮ ಪ್ರದರ್ಶನ ನೀಡಿದೆ. ಅವರ ಸ್ಪಿನ್ ದಾಳಿ ಮತ್ತೊಮ್ಮೆ ನಿರ್ಣಾಯಕವೆಂದು ಸಾಬೀತಾಗಿದೆ. ಆದರೆ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾದಂತಹ ತಂಡಗಳು ಹೊಂದಿರುವ ಆಟಗಾರರನ್ನು ಭಾರತ ಹೊಂದಿಲ್ಲ” ಎಂದು ಹೇಳಿದ್ದಾರೆ.

“ಭಾರತ ತಂಡವು ಸ್ಪಿನ್ ದಾಳಿಯಲ್ಲಿ ಅತ್ಯುತ್ತಮವಾಗಿದ್ದರೂ, ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್‌ನಂತಹ ಬಲಿಷ್ಠ ತಂಡಗಳ ವಿರುದ್ಧ ಮುನ್ನಡೆಯಲು ತಂಡದಲ್ಲಿ ‘ಪವರ್-ಹಿಟ್ಟಿಂಗ್’ ಮತ್ತು ಒಟ್ಟಾರೆ ತಂಡದ ಆಳದ ಕೊರತೆಯಿದೆ. ಆದ್ದರಿಂದ ಟೂರ್ನಿಯಲ್ಲಿ ಭಾರತ ಬಹಳ ದೂರ ಸಾಗುವುದು ಅನುಮಾನ” ಎಂದು ಅಭಿಪ್ರಾಯಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ವಿರುದ್ಧ ಹೇಳಿಕೆ ಆರೋಪ; ಸಿಜೆಪಿ ನಾಯಕ ಸೌರವ್‌ ದಾಸ್‌ಗೆ ಮದ್ರಾಸ್ ಹೈಕೋರ್ಟ್ ನೋಟಿಸ್

ನ್ಯಾಯಾಂಗದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ CJP ವಕ್ತಾರ...

ಶಿಕಾರಿಪುರ | ಖಾಸಗಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಶಿಕಾರಿಪುರ ಪಟ್ಟಣದ ಗಬ್ಬೂರು ಸಮೀಪ ಗುರುವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ...

ಶಿವಮೊಗ್ಗ | ಸಾಮೂಹಿಕ ನಕಲಿಗೆ ಅವಕಾಶ! KSOU ಪ್ರಾದೇಶಿಕ ನಿರ್ದೇಶಕ ಬಿ.ಎಂ ಸ್ವಾಮಿ ವಿರುದ್ಧ ದೂರು

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ ನಡೆದ...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ, ಊರಲ್ಲಿ ಪಡಿತರವೂ ಇಲ್ಲ!

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು...