ಏಕದಿನ ವಿಶ್ವಕಪ್​ | ಅಕ್ಟೋಬರ್ 15ರಂದು ಅಹಮದಾಬಾದ್‌ನಲ್ಲಿ ಭಾರತ- ಪಾಕಿಸ್ತಾನ ಮುಖಾಮುಖಿ?

Date:

ಭಾರತದಲ್ಲಿ ಈ ವರ್ಷಾಂತ್ಯ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್‌ನ ತಾತ್ಕಲಿಕ ವೇಳಾಪಟ್ಟಿ ಬಿಡುಗಡೆಯಾಗಿದೆ.

- Advertisement -

ʻಇಎಸ್‌ಪಿಎನ್‌ ಕ್ರಿಕ್‌ಇನ್ಫೊʼ ಸಂಭಾವ್ಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ವರದಿಯ ಪ್ರಕಾರ, ಅಕ್ಟೋಬರ್ 15ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಸಾಂಪ್ರದಾಯಿಕ ಬದ್ಧ ವೈರಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

2023ರ ಅಕ್ಟೋಬರ್ ಮತ್ತು ನವೆಂಬರ್‌ನಲ್ಲಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯು ಭಾರತದಲ್ಲಿ ನಡೆಯಲಿದೆ. ಮಹತ್ವದ ಟೂರ್ನಿಯ ಅಧಿಕೃತ ಮತ್ತು ಅಂತಿಮ ವೇಳಾಪಟ್ಟಿಯನ್ನು ಐಸಿಸಿ ಇನ್ನೂ ಬಿಡುಗಡೆ ಮಾಡಿಲ್ಲ

ಬಿಸಿಸಿಐ ಸಿದ್ಧ ಪಡಿಸಿರುವ ಕರಡು ವೇಳಾಪಟ್ಟಿಯನ್ನು ಈಗಾಗಲೇ ಐಸಿಸಿಗೆ ಕಳುಹಿಸಲಾಗಿದೆ. ಈ ಕರಡನ್ನು ಅಂತಾರಾಷ್ಟ್ರೀಯ ಕ್ರಿಕೆಟ್‌ ಮಂಡಳಿಯು ವಿಶ್ವಕಪ್‌ನಲ್ಲಿ ಭಾಗವಹಿಸುವ ಎಲ್ಲಾ ದೇಶಗಳಿಗೆ  ರವಾನಿಸಲಿದ್ದು, ಪಾಲ್ಗೊಳ್ಳುವ ರಾಷ್ಟ್ರಗಳ ಪ್ರತಿಕ್ರಿಯೆ  ಪಡೆದ ಬಳಿಕ ಐಸಿಸಿ, ವೇಳಾಪಟ್ಟಿಯನ್ನು ಅಂತಿಮಗೊಳಿಸಲಿದೆ. ಹೀಗಾಗಿ ಅಧಿಕೃತ ವೇಳಾಪಟ್ಟಿಯು ಮುಂದಿನ ವಾರದಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ.

ತಾತ್ಕಲಿಕ ವೇಳಾಪಟ್ಟಿ ಪ್ರಕಾರ, ಕಳೆದ ಬಾರಿಯ (2019) ವಿಶ್ವಕಪ್‌ ಫೈನಲ್‌ನಲ್ಲಿ ಮುಖಾಮುಖಿಯಾಗಿದ್ದ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ, ಅಕ್ಟೋಬರ್ 5ರಂದು ಟೂರ್ನಿಯ ಉದ್ಘಾಟನಾ ಪಂದ್ಯವು ಅಹಮದಾಬಾದ್‌ನಲ್ಲಿ ನಡೆಯಲಿದೆ. ಅಕ್ಟೋಬರ್ 8 ರಂದು ಚೆನ್ನೈನಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಮ್‌ ಇಂಡಿಯಾ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ.

ಆತಿಥೇಯ ಭಾರತವು, ಲೀಗ್ ಹಂತದ 9 ಪಂದ್ಯಗಳನ್ನು ಬೆಂಗಳೂರು ಸೇರಿದಂತೆ ಒಂಬತ್ತು ನಗರಗಳಲ್ಲಿ ಆಡಲಿದೆ.

  • ಅಕ್ಟೋಬರ್ 8: ಭಾರತ vs ಆಸ್ಟ್ರೇಲಿಯಾ, ಚೆನ್ನೈ
  • ಅಕ್ಟೋಬರ್ 11: ಭಾರತ vs ಅಫ್ಘಾನಿಸ್ತಾನ, ದೆಹಲಿ
  • ಅಕ್ಟೋಬರ್ 15: ಭಾರತ vs ಪಾಕಿಸ್ತಾನ, ಅಹಮದಾಬಾದ್
  • ಅಕ್ಟೋಬರ್ 19: ಭಾರತ vs ಬಾಂಗ್ಲಾದೇಶ, ಪುಣೆ
  • ಅಕ್ಟೋಬರ್ 22: ಭಾರತ vs ನ್ಯೂಜಿಲ್ಯಾಂಡ್, ಧರ್ಮಶಾಲಾ
  • ಅಕ್ಟೋಬರ್ 29: ಭಾರತ vs ಇಂಗ್ಲೆಂಡ್, ಲಖನೌ
  • ನವೆಂಬರ್ 2: ಭಾರತ vs ( ಕ್ವಾಲಿಫೈಯರ್ ತಂಡ), ಮುಂಬೈ
  • ನವೆಂಬರ್ 5: ಭಾರತ vs ದಕ್ಷಿಣ ಆಫ್ರಿಕಾ, ಕೋಲ್ಕತ್ತಾ
  • ನವೆಂಬರ್ 11: ಭಾರತ vs ( ಅರ್ಹತಾ ಸುತ್ತಿನಲ್ಲಿ ಗೆದ್ದು ಬಂದ ಎರಡನೇ ತಂಡ), ಬೆಂಗಳೂರು

ಸೆಮಿಫೈನಲ್ ಮತ್ತು ಫೈನಲ್‌ ಪಂದ್ಯಗಳು ನಡೆಯಲಿರುವ ಕ್ರೀಡಾಂಗಣಗಳು ಇನ್ನೂ ಅಂತಿಮಗೊಂಡಿಲ್ಲ. ಸದ್ಯದ ಮಾಹಿತಿಯ ಪ್ರಕಾರ, ನವೆಂಬರ್ 15 ಮತ್ತು 16ರಂದು ಸೆಮಿಫೈನಲ್‌ ಮತ್ತು ಫೈನಲ್‌ ಪಂದ್ಯವು ನವೆಂಬರ್ 19ರಂದು ನಡೆಯಲಿದೆ. ಭಾರತದ ಅತಿ ದೊಡ್ಡ ಕ್ರೀಡಾಂಗಣ, ಅಹಮದಾಬಾದ್ ನರೇಂದ್ರ ಮೋದಿ ಸ್ಟೇಡಿಯಂ ಫೈನಲ್‌ ಪಂದ್ಯಕ್ಕೆ ಆತಿಥ್ಯ ವಹಿಸಲಿದೆ ಎಂದು ʻಇಎಸ್‌ಪಿಎನ್‌ ಕ್ರಿಕ್‌ಇನ್ಫೊʼ ತಿಳಿಸಿದೆ.

ಪಾಕಿಸ್ತಾನವು ಅಹಮದಾಬಾದ್ (ಭಾರತದ ವಿರುದ್ಧ), ಬೆಂಗಳೂರು (ಆಸ್ಟ್ರೇಲಿಯಾ/ನ್ಯೂಜಿಲೆಂಡ್ ವಿರುದ್ಧ ), ಚೆನ್ನೈ (ಅಫ್ಘಾನಿಸ್ತಾನ/ದಕ್ಷಿಣ ಆಫ್ರಿಕಾ ವಿರುದ್ಧ ), ಕೋಲ್ಕತ್ತಾ (ಬಾಂಗ್ಲಾದೇಶ ವಿರುದ್ಧ) ಮತ್ತು ಹೈದರಾಬಾದ್ ಸೇರಿದಂತೆ  5 ಮೈದಾನಗಳಲ್ಲಿ ಆಡಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...

ಏಷ್ಯನ್ ಗೇಮ್ಸ್: ಬಿಲ್ಲುಗಾರಿಕೆಯಲ್ಲಿ ಇತಿಹಾಸ ಬರೆದ 17 ವರ್ಷದ ಕುಂಕುಮ್‌ಗೆ ಬಂಗಾರ!

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನ 15ನೇ ದಿನ...