ಪಾಕಿಸ್ತಾನ ವಿರುದ್ಧ ಚೊಚ್ಚಲ ಟಿ20 ಸರಣಿ ಗೆದ್ದ ಅಫ್ಘಾನಿಸ್ತಾನ

Date:

ಅಪ್ಘಾನಿಸ್ತಾನ ತಂಡ ಶಾರ್ಜಾ ಕ್ರಿಕೆಟ್‌ ಮೈದಾನದಲ್ಲಿ ಹೊಸ ಇತಿಹಾಸ ರಚಿಸಿದೆ. ಪಾಕಿಸ್ತಾನದ ವಿರುದ್ಧದ ಟಿ20 ಸರಣಿಯನ್ನು 2-1 ಅಂತರದಲ್ಲಿ ವಶಪಡಿಸಿಕೊಳ್ಳುವ ಮೂಲಕ ಅಪ್ಘಾನಿಸ್ತಾನ ಚೊಚ್ಚಲ ಸರಣಿ ಗೆಲುವಿನ ಸಂಭ್ರವನ್ನಾಚರಿಸಿದೆ.

- Advertisement -

ಪಾಕಿಸ್ತಾನ ಸೇರಿದಂತೆ ಐಸಿಸಿ ಶ್ರೇಯಾಂಕದ ಅಗ್ರ ಆರು ಸ್ಥಾನಗಳಲ್ಲಿರುವ ತಂಡಗಳ ವಿರುದ್ಧ ಅಪ್ಘಾನಿಸ್ತಾನ ಇದೇ ಮೊದಲ ಬಾರಿಗೆ ಕ್ರಿಕೆಟ್‌ ಸರಣಿ ಗೆದ್ದು ಬೀಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಟಿ20 ಸರಣಿಯ ಮೊದಲ ಎರಡು ಪಂದ್ಯಗಳನ್ನು ಗೆದ್ದು ಬೀಗಿದ್ದ ಅಫ್ಘಾನ್‌ ಪಡೆ, ಸೋಮವಾರ ನಡೆದ ಮೂರನೇ ಪಂದ್ಯದಲ್ಲಿ ಪಾಕ್‌ ತಂಡಕ್ಕೆ ತಲೆಬಾಗಿದೆ. ಆ ಮೂಲಕ ಕ್ಲೀನ್‌ ಸ್ವೀಪ್‌ ಅವಮಾನದಿಂದ ಪಾಕಿಸ್ತಾನ ಪಾರಾಗಿದೆ.

ಶಾರ್ಜಾ ಕ್ರಿಕೆಟ್‌ ಮೈದಾನದಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ ಯುವ ಆಟಗಾರರನ್ನು ಒಳಗೊಂಡ ಪಾಕಿಸ್ತಾನ 66 ರನ್‌ಗಳ ಜಯ ಸಾಧಿಸಿದೆ. ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ್ದ ಪಾಕ್‌, 7 ವಿಕೆಟ್‌ ನಷ್ಟದಲ್ಲಿ 182 ರನ್‌ ಗಳಿಸಿತ್ತು. ಕಠಿಣ ಗುರಿಯನ್ನು ಬೆನ್ನಟ್ಟುವ ವೇಳೆ ರಶೀದ್‌ ಖಾನ್‌ ಬಳಗ 18.4 ಓವರ್‌ಗಳಲ್ಲಿ 116 ರನ್‌ಗಳಿಗೆ ಸರ್ವಪತನ ಕಂಡಿತು. ಇಹ್ಸಾನುಲ್ಲಾ ಮತ್ತು ಶಾದಾಬ್‌ ಖಾನ್‌ ತಲಾ 3 ವಿಕೆಟ್‌ ಪಡೆಯುವ ಮೂಲಕ ಮಿಂಚಿದರು.

ಅಪ್ಘಾನಿಸ್ತಾನದ ಮುಹಮ್ಮದ್‌ ನಬಿ ಸರಣಿಶ್ರೇಷ್ಠ ಪ್ರಶಸ್ತಿ ಮತ್ತು ಪಾಕಿಸ್ತಾನದ ಶಾದಾಬ್‌ ಖಾನ್‌ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತಕ್ಕೆ ಚಿನ್ನ ತಂದ ಮಹಿಳೆಯರು: ಏಷ್ಯನ್‌ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್‌ ಕಲಿಗಳ ಸಾಧನೆ

ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ...

ಏಷ್ಯನ್ ಗೇಮ್ಸ್: ಸ್ಕೀಟ್ ಶೂಟಿಂಗ್, ಸಾಫ್ಟ್ ಟೆನಿಸ್‌ನಲ್ಲಿ ಭಾರತಕ್ಕೆ ಕಂಚು; ಪದಕದತ್ತ ಮೀರಾಬಾಯಿ ದಾಪುಗಾಲು

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ ನಾಲ್ಕನೇ ದಿನವಾದ ಬುಧವಾರ...

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...

ಸೋತರೂ ಎಲ್ಲರ ಹೃದಯ ಗೆದ್ದ ಸುಚಿಕಾ: 700 ಗ್ರಾಂ ಹಿನ್ನಡೆಯಿಂದ ತಪ್ಪಿದ ಚಿನ್ನ

ಮಹಿಳೆಯರ ಸಾಂಪ್ರದಾಯಿಕ 60 ಕೆ.ಜಿ ವಿಭಾಗದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ)...