ಚಾಂಪಿಯನ್ಸ್ ಟ್ರೋಫಿಯ ಎ ಗುಂಪಿನ ನಡುವೆ ನಡೆಯುತ್ತಿರುವ ಮಹತ್ವದ ಭಾರತ – ಪಾಕ್ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ತಂಡದ ನಾಯಕ ಮೊಹಮ್ಮದ್ ರಿಜ್ವಾನ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದೆ.
ಸತತ 12ನೇ ಬಾರಿಗೆ ಟಾಸ್ ಸೋತ ಭಾರತ ಫೀಲ್ಡಿಂಗ್‌ಗೆ ಇಳಿಯಲು ಮುಂದಾಗಿದೆ. ಭಾರತ ಹಾಗೂ ಪಾಕ್ ಎರಡೂ ತಂಡಗಳಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.
ಮಿನಿ ವಿಶ್ವಕಪ್ ಖ್ಯಾತಿಯ ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಕ್ ಮೇಲುಗೈ ಸಾಧಿಸಿದೆ. ಇಲ್ಲಿಯವರೆಗೂ ಭಾರತ ಮತ್ತು ಪಾಕಿಸ್ತಾನ ತಂಡಗಳು 5 ಬಾರಿ ಮುಖಾಮುಖಿಯಾಗಿವೆ. ಅದರಲ್ಲಿ ಭಾರತ ತಂಡ 2 ಬಾರಿ ಗೆದ್ದಿದ್ದರೆ, 3 ಬಾರಿ ಪಾಕಿಸ್ತಾನದ್ದೇ ಜಯಗಳಿಸಿದೆ. ಅದರಲ್ಲೂ ಒಂದು ಬಾರಿ ಫೈನಲ್‌ನಲ್ಲೇ ಭಾರತವನ್ನು ಪಾಕ್ ತಂಡ ಸೋಲಿಸಿ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ.
ಒಟ್ಟಾರೆ ಇಲ್ಲಿಯವರೆಗೂ ಎರಡೂ ತಂಡಗಳು ಆಡಿರುವ 135 ಪಂದ್ಯಗಳಲ್ಲಿ ಟೀಮ್ ಇಂಡಿಯಾ ಕೇವಲ 57 ಪಂದ್ಯಗಳಲ್ಲಿ ಮಾತ್ರ ಗೆದ್ದರೆ, ಪಾಕಿಸ್ತಾನ 73 ಪಂದ್ಯಗಳಲ್ಲಿ ಭಾರತಕ್ಕೆ ಸೋಲಿನ ರುಚಿ ತೋರಿಸಿದೆ. ಇನ್ನು ಐದು ಪಂದ್ಯಗಳು ಫಲಿತಾಂಶ ರಹಿತವಾಗಿತ್ತು.
ಪಂದ್ಯವಾಡುವ ಉಭಯ ತಂಡಗಳು:
ಭಾರತ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ ಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ, ರವೀಂದ್ರ ಜಡೇಜಾ .
ಪಾಕಿಸ್ತಾನ: ಮೊಹಮ್ಮದ್ ರಿಜ್ವಾನ್ (ನಾಯಕ), ಬಾಬರ್ ಆಜಂ, ತಯ್ಯಬ್ ತಾಹಿರ್, ಖುಶ್ದಿಲ್ ಶಾ, ಸಲ್ಮಾನ್ ಅಲಿ ಅಘಾ, ಅಬ್ರಾರ್ ಅಹ್ಮದ್, ಹ್ಯಾರಿಸ್ ರೌಫ್, ನಸೀಮ್ ಶಾ, ಶಾಹಿನ್ ಶಾ ಅಫ್ರಿದಿ, ಇಮಾಮ್ ಉಲ್ ಹಕ್.
ಪಂದ್ಯ ಆರಂಭವಾಗುವ ಸಮಯ: ಮಧ್ಯಾಹ್ನ 2.30
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ಚಾನೆಲ್ಗಳಲ್ಲಿ ವೀಕ್ಷಿಸಬಹುದು. ಹಾಗೆಯೇ ಜಿಯೋ ಹಾಟ್ಸ್ಟಾರ್ ಆ್ಯಪ್ ಹಾಗೂ ವೈಬ್ಸೈಟ್ಗಳಲ್ಲಿ ಲೈವ್ ಸ್ಟ್ರೀಮಿಂಗ್ ಇರಲಿದೆ.
