ಟಿ20 ವಿಶ್ವಕಪ್ | ಟೀಮ್ ಇಂಡಿಯಾ ವಿರುದ್ಧ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಪಾಕಿಸ್ತಾನ

Date:

ಇಂದು 2024ರ ಟಿ20 ವಿಶ್ವಕಪ್‌ನ 19 ನೇ ಪಂದ್ಯದಲ್ಲಿ ಭಾರತವು ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸುತ್ತಿದೆ. ಈ ಪಂದ್ಯ ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಇಂಟರ್‌ನ್ಯಾಶನಲ್ ಸ್ಟೇಡಿಯಂನಲ್ಲಿ ನಡೆಯುತ್ತಿದೆ.

ಮಳೆಯಿಂದಾಗಿ ಟಾಸ್ ವಿಳಂಬಗೊಂಡಿತ್ತು. ಮಳೆ ನಿಂತ ಬಳಿಕ ಟಾಸ್ ನಡೆದಿದ್ದು, ಟೀಮ್ ಇಂಡಿಯಾ ವಿರುದ್ಧ ಟಾಸ್ ಗೆದ್ದ ಬಾಬರ್ ಆಝಂ ನೇತೃತ್ವದ ಪಾಕಿಸ್ತಾನ ತಂಡ, ಬೌಲಿಂಗ್ ಆಯ್ದುಕೊಂಡಿದೆ.

ಪಾಕಿಸ್ತಾನವು ತಂಡದಲ್ಲಿ ಒಂದು ಬದಲಾವಣೆ ಮಾಡಿದೆ. ಪಾಕ್ ತಂಡದಲ್ಲಿ ದಢೂತಿ ದೇಹ ಹೊಂದಿ ಸುದ್ದಿಯಲ್ಲಿರುವ ಆಝಂ ಖಾನ್ ಅವರಿಗೆ ವಿಶ್ರಾಂತಿ ನೀಡಿದೆ. ಅವರ ಬದಲಿಗೆ ಇಮಾದ್ ವಾಸೀಮ್ ಅವರಿಗೆ ಅವಕಾಶ ನೀಡಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪಾಕಿಸ್ತಾನವು ತಮ್ಮ ಆರಂಭಿಕ ಪಂದ್ಯದಲ್ಲಿ ಕ್ರಿಕೆಟ್ ಶಿಶು ಹಾಗೂ ಟಿ20 ವಿಶ್ವಕಪ್‌ನ ಆತಿಥ್ಯ ವಹಿಸಿಕೊಂಡಿರುವ ಅಮೆರಿಕ(USA) ವಿರುದ್ಧ ಸೋತಿತ್ತು. ಈ ಹಿನ್ನೆಲೆಯಲ್ಲಿ ಸೂಪರ್ 8ರ ಘಟ್ಟಕ್ಕೆ ತಲುಪಬೇಕಾದರೆ ಟೀಮ್ ಇಂಡಿಯಾ ವಿರುದ್ಧ ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಟೀಮ್ ಇಂಡಿಯಾವು ತಮ್ಮ ಮೊದಲ ಪಂದ್ಯದಲ್ಲಿ ಐರ್ಲ್ಯಾಂಡ್ ತಂಡವನ್ನು ಸೋಲಿಸಿತ್ತು.

ಟಾಸ್ ವೇಳೆ ಗಲಿಬಿಲಿಗೊಂಡ ರೋಹಿತ್ ಶರ್ಮಾ!

ಟಾಸ್ ವೇಳೆ ಟೀಮ್ ಇಂಡಿಯಾ ಕಪ್ತಾನ ರೋಹಿತ್ ಶರ್ಮಾ ಗಲಿಬಿಲಿಗೊಂಡ ಪ್ರಸಂಗ ನಡೆಯಿತು.

ಕಮೆಂಟರಿ ಮಾಡುತ್ತಿದ್ದ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ, ಈಗ ರೋಹಿತ್ ಶರ್ಮಾ ಟಾಸ್ ಮಾಡಲಿದ್ದಾರೆ ಎಂದರು. ಆಗ ಕಾಯಿನ್ ತನ್ನ ಕಿಸೆಯಲ್ಲಿದ್ದುದನ್ನು ಮರೆತಿದ್ದ ರೋಹಿತ್ ಶರ್ಮಾ, ಒಮ್ಮೆಗೇ ಗಲಿಬಿಲಿಗೊಂಡರು. ಬಳಿಕ ನೆನಪಾಗಿ ಕಿಸೆಯಿಂದ ಕಾಯಿನ್ ತೆಗೆದು, ಚಿಮ್ಮಿಸಿದರು. ಈ ಬೆಳವಣಿಗೆ ಪಾಕ್ ನಾಯಕ ಬಾಬರ್ ಆಝಂ ಹಾಗೂ ನೆರೆದಿದ್ದವರು ನಗುವಂತೆ ಮಾಡಿತು.

ಟೀಮ್ ಇಂಡಿಯಾ ತಂಡ

ರೋಹಿತ್ ಶರ್ಮಾ(ನಾಯಕ), ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕೆಟ್ ಕೀಪರ್), ಸೂರ್ಯ ಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಅರ್ಷ್‌ದೀಪ್ ಸಿಂಗ್

ಪಾಕಿಸ್ತಾನ ಪ್ಲೇಯಿಂಗ್ XI:

ಬಾಬರ್ ಆಝಂ(ನಾಯಕ), ಮೊಹಮ್ಮದ್ ರಿಝ್ವಾನ್ (ವಿಕೆಟ್ ಕೀಪರ್), ಫಖರ್ ಝಮಾನ್, ಹಾರಿಸ್ ರೌಫ್, ಇಫ್ತಿಕಾರ್ ಅಹ್ಮದ್, ಇಮಾದ್ ವಾಸೀಮ್, ಮೊಹಮ್ಮದ್ ಆಮಿರ್, ನಸೀಮ್ ಶಾ, ಶಾದಾಬ್ ಖಾನ್, ಶಾಹೀನ್ ಶಾಹ್ ಅಫ್ರೀದಿ, ಉಸ್ಮಾನ್ ಖಾನ್

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟಿ20 ವಿಶ್ವಕಪ್‌ | ಭಾರತಕ್ಕೆ ಗೆಲ್ಲಲು 111 ರನ್‌ಗಳ ಗುರಿ ನೀಡಿದ ಆತಿಥೇಯ ಅಮೆರಿಕ: ಮಿಂಚಿದ ಅರ್ಷ್‌ದೀಪ್ ಸಿಂಗ್

ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಐಸಿಸಿ...

ಟಿ20 ವಿಶ್ವಕಪ್ | ಟೀಮ್ ಇಂಡಿಯಾ-ಅಮೆರಿಕ ಮೊದಲ ಮುಖಾಮುಖಿ: ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿದ ರೋಹಿತ್ ಶರ್ಮಾ

ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ 2024ರ ಐಸಿಸಿ...

2026ರ ಫಿಫಾ ವಿಶ್ವಕಪ್​ ಅರ್ಹತಾ ಟೂರ್ನಿ | ಕತಾರ್​ ಮೋಸದಾಟಕ್ಕೆ ಭಾರತ ಫುಟ್ಬಾಲ್​ ತಂಡ ‘ಔಟ್’; ವ್ಯಾಪಕ ಆಕ್ರೋಶ

ಕ್ರಿಕೆಟ್​​ನಂತೆ ಫುಟ್ಬಾಲ್​ನಲ್ಲಿ ಮಹತ್ತರ ಬದಲಾವಣೆ ತರಬೇಕಿದೆ ಎಂಬ ಕೂಗು ಸಾಮಾಜಿಕ ಜಾಲತಾಣಗಳಲ್ಲಿ...

ಜಿಜ್ಞಾಸೆ | ರಿಷಬ್ ಪಂತ್‌ಗೆ ಸಿಕ್ಕ ಸೌಲಭ್ಯ ಸಾಮಾನ್ಯರಿಗೇಕಿಲ್ಲ, ಸರ್ಕಾರಗಳ ಆದ್ಯತೆಗಳೇನು?

ಕ್ರಿಕೆಟಿಗ ರಿಷಬ್ ಪಂತ್ ಅಪಘಾತಕ್ಕೀಡಾಗಿ, ಅಷ್ಟೇ ವೇಗವಾಗಿ ಚೇತರಿಸಿಕೊಂಡು, ಮತ್ತೆ ಆಟವಾಡುತ್ತಿದ್ದಾರೆ....