ಚಾಂಪಿಯನ್ಸ್ ಟ್ರೋಫಿ: ಯುಎಇಯಲ್ಲಿ ಭಾರತ-ಪಾಕ್ ಪಂದ್ಯದ ದಿನಾಂಕ ನಿಗದಿ

Date:

ಹೈಬ್ರೀಡ್ ಮಾದರಿಯಲ್ಲಿ ನಡೆಯುವ 2025ರ ಚಾಂಪಿಯನ್ಸ್ ಟ್ರೋಫಿಯ ಆತಿಥ್ಯ ವಹಿಸಲಿರುವ ಪಾಕಿಸ್ತಾನ, ಭಾರತದ ವಿರುದ್ಧದ ತನ್ನ ಪಂದ್ಯಗಳಿಗೆ ತಟಸ್ಥ ತಾಣಗಳನ್ನು ಆಯ್ಕೆ ಮಾಡಿ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಗೆ ಸಲ್ಲಿಸಿದೆ.

- Advertisement -

ಈ ಪಂದ್ಯಗಳು ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ನಡೆಯಲಿವೆ ಎಂದು ಮಾಧ್ಯಮಗಳು ವರದಿ ಮಾಡಿದೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿ ಯುಎಇಯನ್ನು ತಟಸ್ಥ ತಾಣವಾಗಿ ಆಯ್ಕೆ ಮಾಡಿಕೊಂಡಿದ್ದು, ಅಧಿಕೃತವಾಗಿ ಈ ಬಗ್ಗೆ ಐಸಿಸಿಗೆ ತನ್ನ ನಿರ್ಧಾರವನ್ನು ತಿಳಿಸಿದೆ. ಇದೀಗ ಭಾರತ-ಪಾಕಿಸ್ತಾನ ನಡುವಿನ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು ಯುಎಇಯಲ್ಲಿ ನಡೆಯಲಿವೆ ಎಂದು ಪಿಸಿಬಿ ವಕ್ತಾರರು ಹೇಳಿದ್ದಾಗಿ ವರದಿ ವಿವರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಸುದ್ದಿ ಓದಿದ್ದೀರಾ? ಆರ್‌ ಅಶ್ವಿನ್ | ಸಾಧಾರಣ ಕುಟುಂಬದ ಹುಡುಗ ಸ್ಟಾರ್‌ ಕ್ರಿಕೆಟಿಗನಾದ ಕತೆ

ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಕ್ವಿ, ಎಮಿರೇಟ್ಸ್ ಕ್ರಿಕೆಟ್ ಮಂಡಳಿ ಅಧ್ಯಕ್ಷ ಶೇಖ್ ಮುಬಾರಕ್ ಅಲ್ ನಹ್ಯಾನ್ ಅವರು ಈ ನಿರ್ಧಾರವನ್ನು ಅಂತಿಮಪಡಿಸಿದ್ದಾರೆ. ಐಸಿಸಿ ಮಂಡಳಿಯ ನಿಯಮಾವಳಿ ಅನುಸಾರ ಜಾಗತಿಕ ಟೂರ್ನಿಗಳಲ್ಲಿ ಆತಿಥ್ಯ ವಹಿಸುವ ದೇಶದ ಮಂಡಳಿ ತಟಸ್ಥ ತಾಣಗಳನ್ನು ಆಯ್ಕೆ ಮಾಡುವ ಹಕ್ಕನ್ನು ಹೊಂದಿರುತ್ತದೆ. ಇದರಿಂದಾಗಿ ಭಾರತದ ವಿರುದ್ಧದ ಪಂದ್ಯಗಳಿಗೆ ದುಬೈ ತಾಣವಾಗಿರುತ್ತದೆ.

ಪ್ರೇಕ್ಷಕರ ಬಹುನಿರೀಕ್ಷಿತ ಪಾಕಿಸ್ತಾನ ವಿರುದ್ಧದ ಪಂದ್ಯ ಫೆಬ್ರುವರಿ 23ರಂದು ನಡೆಯಲಿದೆ. ಯುಎಇ ಅಬುದಾಭಿ ಮತ್ತು ಶಾರ್ಜಾದಲ್ಲೂ ಎರಡು ಕ್ರೀಡಾಂಗಣಗಳಿದ್ದು, ದುಬೈ ಸ್ಟೇಡಿಯಂ ಅತಿದೊಡ್ಡ ಕ್ರೀಡಾಂಗಣವಾಗಿದೆ. ಯುಎಇ ಬದಲಾಗಿ ಶ್ರೀಲಂಕಾವನ್ನು ತಟಸ್ಥ ತಾಣವಾಗಿ ಆಯ್ಕೆ ಮಾಡುವ ಸಾಧ್ಯತೆಯನ್ನು ಪಿಸಿಬಿ ತಳ್ಳಿಹಾಕಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...