ಏಷ್ಯಾ ಕಪ್‌ನಲ್ಲಿ ಹಸ್ತಲಾಘವ ವಿವಾದ: ಪಾಕ್‌ – ಯುಎಇ ಪಂದ್ಯ ವಿಳಂಬ?

Date:

ಏಷ್ಯಾ ಕಪ್‌ನಲ್ಲಿ ಇಂದು ನಡೆಯಬೇಕಿದ್ದ ಯುಎಇ ಹಾಗೂ ಪಾಕಿಸ್ತಾನ ನಡುವಿನ ಪಂದ್ಯ ಒಂದು ಗಂಟೆ ತಡವಾಗಿ ಆರಂಭವಾಗಲಿದೆ ಎಂದು ವರದಿಯಾಗಿದೆ.

- Advertisement -

ಮ್ಯಾಚ್ ರೆಫ್ರಿ ಆಂಡಿ ಪೈಕ್ರಾಫ್ಟ್ ಅವರನ್ನು ಟೂರ್ನಿಯಿಂದ ವಜಾಗೊಳಿಸುವಂತೆ ಈ ಹಿಂದೆ ಪಿಸಿಬಿ, ಐಸಿಸಿಗೆ ದೂರು ನೀಡಿತ್ತು. ಆದರೆ ಐಸಿಸಿ ಮಾತ್ರ ಆ ರೀತಿಯ ಯಾವುದೇ ಕ್ರಮ ತೆಗೆದುಕೊಳ್ಳುವುದನ್ನು ನಿರಾಕರಿಸಿತು. ಇದರಿಂದ ಕೆರಳಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಟೂರ್ನಿಯಿಂದ ತನ್ನ ಹೆಸರನ್ನು ಹಿಂಪಡೆಯಲು ನಿರ್ಧರಿಸಿದೆ ಎಂತಲೂ ವರದಿಯಾಗಿದೆ. ಯಾವುದಕ್ಕೂ ತಮ್ಮ ನಿಲುವನ್ನು ಸ್ಪಷ್ಟಪಡಿಸಲು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಒಂದು ಗಂಟೆ ಸಮಯಾವಕಾಶ ಕೇಳಿದೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಇದನ್ನು ಓದಿದ್ದೀರಾ? ಏಷ್ಯಾ ಕಪ್ 2025 | ಪಾಕ್‌ ವಿರುದ್ಧ ಭಾರತಕ್ಕೆ ಸುಲಭ ಗೆಲುವು, ನಾಟಕೀಯ ಕ್ಷಣಗಳಿಗೂ ಸಾಕ್ಷಿಯಾದ ಪಂದ್ಯ

ಪೂರ್ವ ನಿಗದಿಯಂತೆ ಇಂದು ರಾತ್ರಿ 8 ಗಂಟೆಗೆ ಪಾಕಿಸ್ತಾನ ತಂಡ ತನ್ನ ಲೀಗ್ ಹಂತದ ಕೊನೆಯ ಪಂದ್ಯವನ್ನು ದುಬೈನಲ್ಲಿ ಆಡಬೇಕಿತ್ತು. ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಅಧ್ಯಕ್ಷ ಮತ್ತು ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಮುಖ್ಯಸ್ಥ ಮೊಹ್ಸಿನ್ ನಕ್ವಿ ಅವರು ಎಕ್ಸ್‌ನಲ್ಲಿ ಪಾಕಿಸ್ತಾನ ತಂಡವನ್ನು ಕ್ರೀಡಾಂಗಣಕ್ಕೆ ತೆರಳಲು ಸೂಚಿಸಿರುವುದಾಗಿ ಘೋಷಿಸಿದ್ದಾರೆ. “ಪಾಕಿಸ್ತಾನ ತಂಡವನ್ನು ದುಬೈ ಕ್ರಿಕೆಟ್ ಕ್ರೀಡಾಂಗಣಕ್ಕೆ ತೆರಳಲು ಕೇಳಿಕೊಂಡಿದ್ದೇವೆ. ಮುಂದಿನ ವಿವರಗಳನ್ನು ಶೀಘ್ರದಲ್ಲಿ ತಿಳಿಸಲಾಗುವುದು,” ಎಂದು ಅವರು ಪೋಸ್ಟ್ ಮಾಡಿದ್ದಾರೆ.

ಇದೇ ವೇಳೆ, ಯುಎಇ ತಂಡವು ಈಗಾಗಲೇ ಕ್ರೀಡಾಂಗಣಕ್ಕೆ ಆಗಮಿಸಿತ್ತು. ಪಿಸಿಬಿ ಸಲಹೆಗಾರ ಅಮೀರ್ ಮಿರ್ ಅವರು ಲಾಹೋರ್‌ನ ಗಡ್ಡಾಫಿ ಕ್ರೀಡಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ, “ಪಂದ್ಯವು ವಿಳಂಬವಾಗಲಿದೆ. ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಕ್ವಿ ಅವರು ಮಾಜಿ ಪಿಸಿಬಿ ಮುಖ್ಯಸ್ಥರಾದ ರಮೀಜ್ ರಾಜಾ ಮತ್ತು ನಜಮ್ ಸೇಠಿ ಅವರೊಂದಿಗೆ ಚರ್ಚೆ ನಡೆಸುತ್ತಿದ್ದಾರೆ,” ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ...

ವಿರಾಟ್ ‘ವಿಶ್ವ’ರೂಪ: 15 ಸಾವಿರ ರನ್ ಗಡಿ ದಾಟಿ ಸಚಿನ್ ದಾಖಲೆ ಹಿಂದಿಕ್ಕಿದ ಕೊಹ್ಲಿ

ಕೇರಳದ ತಿರುವನಂತಪುರದಲ್ಲಿರುವ ಗ್ರೀನ್‌ಫೀಲ್ಡ್‌ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ವೆಸ್ಟ್ ಇಂಡೀಸ್...

ಏಷ್ಯನ್ ಗೇಮ್ಸ್ ಕಬಡ್ಡಿ: ಇರಾನ್‌ ಮಣಿಸಿ ಪುರುಷ, ಮಹಿಳಾ ವಿಭಾಗಗಳಲ್ಲಿ ಭಾರತಕ್ಕೆ ಜೋಡಿ ಚಿನ್ನದ ಸಂಭ್ರಮ

ಜಪಾನ್‌ನ ಐಚಿ–ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಕ್ರೀಡಾಕೂಟದ ಕಬಡ್ಡಿ ಅಂಕಣದಲ್ಲಿ...