IND vs ENG ಟೆಸ್ಟ್‌: ಸತತ ಎರಡನೇ ಶತಕ ಸಿಡಿಸಿದ ಪಂತ್; ರಾಹುಲ್‌ ಕೂಡ ಶತಕ

Date:

ಲೀಡ್ಸ್‌ನಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಭರ್ಜರಿ ಶತಕ ಸಿಡಿಸಿದ್ದ ವಿಕಿಟ್ ​ಕೀಪರ್ ಹಾಗೂ ಉಪ ನಾಯಕ ರಿಷಭ್ ಪಂತ್ ಇದೀಗ ಎರಡನೇ ಇನಿಂಗ್ಸ್​ನಲ್ಲೂ ಸ್ಫೋಟಕ ಶತಕ ಸಿಡಿಸಿದ್ದಾರೆ.

- Advertisement -

ತಂಡ ಸಂಕಷ್ಟದಲ್ಲಿದ್ದ ಸಮಯದಲ್ಲಿ ಕ್ರೀಸ್​ಗೆ ಬಂದ ಪಂತ್, ರಾಹುಲ್ ಜೊತೆಗೆ ತಾಳ್ಮೆಯ ಇನಿಂಗ್ಸ್ ಕಟ್ಟಿದರು. 83 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಪಂತ್, ಆ ಬಳಿಕ ತಮ್ಮ ಶೈಲಿಯನ್ನು ಬದಲಿಸಿ ಉಳಿದ 50 ರನ್​ಗಳನ್ನು ಕೇವಲ 47 ಎಸೆತಗಳಲ್ಲಿ ಕಲೆಹಾಕಿ ತಮ್ಮ ಟೆಸ್ಟ್ ವೃತ್ತಿಜೀವನದ 8ನೇ ಶತಕವನ್ನು ಬಾರಿಸಿದರು. ಪಂತ್ ತಮ್ಮ ಶತಕದ ಇನಿಂಗ್ಸ್​ನಲ್ಲಿ 13 ಬೌಂಡರಿ ಹಾಗೂ 2 ಭರ್ಜರಿ ಸಿಕ್ಸರ್​ಗಳನ್ನು ಸಿಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಲೀಡ್ಸ್ ಟೆಸ್ಟ್​ನ ಎರಡನೇ ಇನಿಂಗ್ಸ್​ನಲ್ಲೂ 100 ರನ್​ಗಳ ಗಡಿ ಮುಟ್ಟುವ ಮೂಲಕ ಪಂತ್, ಇಂಗ್ಲೆಂಡ್‌ನಲ್ಲಿ ಟೆಸ್ಟ್ ಪಂದ್ಯದ ಎರಡೂ ಇನಿಂಗ್ಸ್​ಗಳಲ್ಲಿ ಶತಕ ಬಾರಿಸಿದ ಏಷ್ಯಾದ ಮೊದಲ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಈ ಇನಿಂಗ್ಸ್‌ನಲ್ಲಿ ರಿಷಭ್ ಪಂತ್ ಕೇವಲ 130 ಎಸೆತಗಳಲ್ಲಿ ಶತಕ ಪೂರೈಸಿದರು. ಮೊದಲ ಇನಿಂಗ್ಸ್‌ನಲ್ಲಿ 146 ಎಸೆತಗಳಲ್ಲಿ ಈ ಸಾಧನೆ ಮಾಡಿದ್ದ ಪಂತ್​ಗೆ ಟೆಸ್ಟ್ ಕ್ರಿಕೆಟ್‌ನಲ್ಲಿ ಇದು 8 ನೇ ಶತಕವಾಗಿದೆ. ವಿಶೇಷವೆಂದರೆ ಈ 8 ಶತಕಗಳಲ್ಲಿ 6 ಶತಕಗಳನ್ನು ಪಂತ್ ಭಾರತದ ಹೊರಗೆ ಅಂದರೆ ವಿದೇಶಿ ನೆಲಗಳಲ್ಲಿ ಸಿಡಿಸಿದ್ದಾರೆ.

ಇಂಗ್ಲೆಂಡ್ ವಿರುದ್ಧ ಪಂತ್ ಅವರ 5 ನೇ ಶತಕದ ಇನಿಂಗ್ಸ್ ಆಗಿದೆ. ಮತ್ತೊಂದು ಕುತೂಹಲಕಾರಿ ಸಂಗತಿಯೆಂದರೆ ಇಂಗ್ಲೆಂಡ್ ವಿರುದ್ಧ ಪಂತ್ ಬಾರಿಸಿರುವ 5 ಶತಕಗಳ ಪೈಕಿ 4 ಶತಕಗಳು ಆಂಗ್ಲರ ನೆಲದಲ್ಲೇ ಸಿಡಿದಿವೆ. ಈ ಮೂಲಕ ಪಂತ್ ವಿದೇಶಿ ನೆಲದಲ್ಲಿ ಅತಿ ಹೆಚ್ಚು ಟೆಸ್ಟ್ ಶತಕಗಳನ್ನು ಬಾರಿಸಿದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ.

ಇದನ್ನು ಓದಿದ್ದೀರಾ? ಮೊದಲ ಟೆಸ್ಟ್‌ನಲ್ಲಿ ಟಾಸ್‌ ಗೆದ್ದ ಇಂಗ್ಲೆಂಡ್‌: ಮೂವರು ಕನ್ನಡಿಗರಿಗೆ ಸ್ಥಾನ

140 ಚೆಂಡುಗಳಲ್ಲಿ 3 ಸಿಕ್ಸರ್‌ 15 ಬೌಂಡರಿಗಳೊಂದಿಗೆ 118 ರನ್‌ ಗಳಿಸಿದ್ದ ಪಂತ್‌ ಶೋಯೇಬ್‌ ಬಶೀರ್‌ ಬೌಲಿಂಗ್‌ನಲ್ಲಿ ಔಟಾದರು.

ಕನ್ನಡಿದ ಕೆ ಎಲ್ ರಾಹುಲ್ ಶತಕ

ಟೀಂ ಇಂಡಿಯಾದ ಆರಂಭಿಕ ಆಟಗಾರ ಕನ್ನಡಿಗ ಕೆಎಲ್ ರಾಹುಲ್ ಭರ್ಜರಿ ಶತಕ ಸಿಡಿಸಿದ್ದಾರೆ. ತಮ್ಮ ತಾಳ್ಮೆಯ ಆಟದ ಮೂಲಕವೇ ಆಂಗ್ಲ ಬೌಲರ್‌ಗಳನ್ನು ಹೈರಾಣಾಗಿಸಿದ ರಾಹುಲ್ 202 ಎಸೆತಗಳಲ್ಲಿ 13 ಬೌಂಡರಿಗಳ ಸಹಿತ ತಮ್ಮ ಟೆಸ್ಟ್ ವೃತ್ತಿಜೀವನದ 9ನೇ ಶತಕವನ್ನು ಪೂರೈಸಿದರು.

ಮೊದಲ ಇನಿಂಗ್ಸ್​ನಲ್ಲಿ ಕೇಲವ 42 ರನ್​ ಬಾರಿಸಿದ್ದ ಕೆ ಎಲ್ ರಾಹುಲ್ ಅವರು ಇದೀಗ ಶತಕ ಬಾರಿಸಿ ಬ್ಯಾಟ್ ಎತ್ತಿ ಸಂಭ್ರಮಿಸಿದರು.

ಕೆ ಎಲ್​ ರಾಹುಲ್ ಅವರು ಟೆಸ್ಟ್​ನ 4 ದಿನದಾಟದಲ್ಲಿ ಶತಕ ಬಾರಿಸಿದ್ದಾರೆ. 202 ಚೆಂಡುಗಳನ್ನು ಆಡಿದ ಕೆ ಎಲ್ ರಾಹುಲ್ ಅವರು ಸಿಕ್ಸರ್​ ಇಲ್ಲದೇ 13 ಅಂದವಾದ ಬೌಂಡರಿಗಳಿಂದ ಶತಕ ಬಾರಿಸಿ ಸಂಭ್ರಮಿಸಿದರು.

ಭಾರತ 304 ರನ್‌ ಮುನ್ನಡೆ

ನಾಲ್ಕನೇ ದಿನದಲ್ಲಿ 2ನೇ ಇನಿಂಗ್ಸ್‌ ಬ್ಯಾಟಿಂಗ್‌ ಮಾಡುತ್ತಿರುವ ಟೀಂ ಇಂಡಿಯಾ ಟೀ ವಿರಾಮದ ವೇಳೆಗೆ 75 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 298 ರನ್‌ ಪೇರಿಸಿದೆ. ಈ ಮೂಲಕ 304 ರನ್‌ ಮುನ್ನಡೆ ಪಡೆದುಕೊಂಡಿದೆ. ಕೆ ಎಲ್‌ ರಾಹುಲ್‌ 227 ಚೆಂಡುಗಳಲ್ಲಿ 15 ಬೌಂಡರಿಗಳೊಂದಿಗೆ 120 ರನ್‌ ಗಳಿಸಿ ಬ್ಯಾಟಿಂಗ್‌ ಮಾಡುತ್ತಿದ್ದರೆ, ಕರುಣ್‌ ನಾಯರ್‌ 4 ರನ್‌ನೊಂದಿಗೆ ಕ್ರೀಸ್‌ನಲ್ಲಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...