15 ಕೋಟಿ ರೂ. ಕಡಿತದೊಂದಿಗೆ ಮತ್ತೆ ಡೆಲ್ಲಿ ಸೇರಿದ ರಿಷಭ್ ಪಂತ್

Date:

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಅತ್ಯಂತ ಕುತೂಹಲಕಾರಿ ಬೆಳವಣಿಗೆಯೊಂದರಲ್ಲಿ, ವಿಕೆಟ್ ಕೀಪರ್-ಬ್ಯಾಟರ್ ರಿಷಭ್ ಪಂತ್ ಅವರು ತಮ್ಮ ಹಳೆಯ ಫ್ರಾಂಚೈಸಿ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡಕ್ಕೆ ಮರಳಿದ್ದಾರೆ. ಲಖನೌ ಸೂಪರ್ ಜೈಂಟ್ಸ್ (LSG) ತಂಡದಲ್ಲಿದ್ದ ಪಂತ್, ತಮ್ಮ ಸಂಭಾವನೆಯಲ್ಲಿ ಭಾರಿ 12 ಕೋಟಿ ರೂ. ಕಡಿತದೊಂದಿಗೆ ಡೆಲ್ಲಿ ತಂಡವನ್ನು ಸೇರಿಕೊಂಡಿದ್ದಾರೆ. ಇದರ ಬೆನ್ನಲ್ಲೇ, ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪ್ರಮುಖ ಸ್ಪಿನ್ನರ್ ಕುಲದೀಪ್ ಯಾದವ್ ಅವರು ಲಖನೌ ಸೂಪರ್ ಜೈಂಟ್ಸ್ ಪಾಳಯವನ್ನು ಸೇರಿದ್ದಾರೆ.

- Advertisement -

2025ರ ಐಪಿಎಲ್ ಮೆಗಾ ಹರಾಜಿನಲ್ಲಿ ರಿಷಭ್ ಪಂತ್ ಅವರನ್ನು ಲಖನೌ ಸೂಪರ್ ಜೈಂಟ್ಸ್ ತಂಡವು ದಾಖಲೆಯ 27 ಕೋಟಿ ರೂ. ಮೊತ್ತಕ್ಕೆ ಖರೀದಿಸಿತ್ತು. ಇದು ಐಪಿಎಲ್ ಇತಿಹಾಸದಲ್ಲೇ ಅತಿ ದೊಡ್ಡ ಮೊತ್ತವಾಗಿತ್ತು. ಆದರೆ, ಪ್ರಸ್ತುತ ಟ್ರೇಡ್ (ಆಟಗಾರರ ವಿನಿಮಯ) ಪ್ರಕ್ರಿಯೆಯ ಮೂಲಕ ಪಂತ್ ಅವರು ಕೇವಲ 15 ಕೋಟಿ ರೂ. ಸಂಭಾವನೆಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಮರಳಿದ್ದಾರೆ. ಮತ್ತೊಂದೆಡೆ, ಡೆಲ್ಲಿ ಕ್ಯಾಪಿಟಲ್ಸ್ ತಂಡದ ಎಡಗೈ ಸ್ಪಿನ್ನರ್ ಕುಲದೀಪ್ ಯಾದವ್ ಅವರನ್ನು ಲಖನೌ ತಂಡವು ಅವರ ಪ್ರಸ್ತುತ ಒಪ್ಪಂದದ ಮೊತ್ತವಾದ 13.50 ಕೋಟಿ ರೂ.ಗೆ ತನ್ನತ್ತ ಸೆಳೆದುಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಟ್ರಂಪ್‌ ತಿರಸ್ಕರಿಸಿದ ಯುವಜನರು; 2029ರಲ್ಲಿ ಭಾರತದ ಯುವ ಮತದಾರರ...

ಅಮೆರಿಕದ ಮಧ್ಯಂತರ ಚುನಾವಣೆಯಲ್ಲಿ 18–29 ವರ್ಷದ ಯುವ ಮತದಾರರು ರಿಪಬ್ಲಿಕನ್ ಪಕ್ಷದಿಂದ ದೊಡ್ಡ ಪ್ರಮಾಣದಲ್ಲಿ ದೂರ ಸರಿದಿದ್ದಾರೆ. ಉದ್ಯೋಗದ ಅನಿಶ್ಚಿತತೆ, ದುಬಾರಿ ಜೀವನ, ಭವಿಷ್ಯದ ಆತಂಕ ಹಾಗೂ ಸರ್ಕಾರದ ನೀತಿಗಳ ಕುರಿತ ಅಸಮಾಧಾನ...

ಸಾಮಾಜಿಕ ನ್ಯಾಯ | ಕಾಂಗ್ರೆಸ್ ಸರ್ಕಾರದ ಭರವಸೆಗಳು ಮತ್ತು...

ಅಲ್ಪಸಂಖ್ಯಾತರ ಕಲ್ಯಾಣ ಎಂದರೆ ಕೇವಲ ಮುಸ್ಲಿಂ ಸಮುದಾಯದ ಅಭಿವೃದ್ಧಿಯಲ್ಲ. ಕ್ರೈಸ್ತರು, ಜೈನರು, ಸಿಖ್ಖರು, ಬೌದ್ಧರು ಮತ್ತು ಇತರ ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ, ಉದ್ಯೋಗ, ವಸತಿ ಮತ್ತು ಆರ್ಥಿಕ ಅಭಿವೃದ್ಧಿಯ ಅಗತ್ಯಗಳನ್ನೂ ಸಮಾನವಾಗಿ ಪರಿಗಣಿಸಬೇಕು....

ನುಡಿ ನಮನ | ಪಿರಿಯಾಪಟ್ಟಣದ ಮಣ್ಣಿನಿಂದ ಕನ್ನಡ ಜ್ಞಾನಲೋಕದ...

ಕೆಲವರು ಹುಟ್ಟಿದ ಊರಿನ ಹೆಸರನ್ನು ತಮ್ಮೊಂದಿಗೆ ಹೊತ್ತುಕೊಂಡು ಬದುಕುತ್ತಾರೆ. ಇನ್ನು ಕೆಲವರು ತಾವು ಹುಟ್ಟಿದ ನೆಲದ ಹೆಸರನ್ನೇ ತಮ್ಮ ಸಾಧನೆಯ ಮೂಲಕ ನಾಡಿನಾದ್ಯಂತ ಪರಿಚಯಿಸುತ್ತಾರೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಕಂಪಲಾಪುರದಲ್ಲಿ ಹುಟ್ಟಿ,...

ಇದನ್ನು ಓದಿದ್ದೀರಾ? 1,078 ಏಕದಿನ ಪಂದ್ಯಗಳ ಇತಿಹಾಸದಲ್ಲಿ ಅಪರೂಪದ ದಾಖಲೆ ಬರೆದ ರೋಹಿತ್ -ಪ್ರಸಿದ್ಧ್ ಜೋಡಿ

ಲಖನೌ ತಂಡದ ನಾಯಕರಾಗಿ ಸತತ ಎರಡು ಆವೃತ್ತಿಗಳಲ್ಲಿ (2025 ಮತ್ತು 2026) ರಿಷಭ್ ಪಂತ್ ಅವರ ಪ್ರದರ್ಶನ ನಿರೀಕ್ಷಿತ ಮಟ್ಟದಲ್ಲಿರಲಿಲ್ಲ. 2025ರಲ್ಲಿ ಲಖನೌ ತಂಡವು ಅಂಕಪಟ್ಟಿಯಲ್ಲಿ 7ನೇ ಸ್ಥಾನ ಪಡೆದರೆ, 2026ರ ಆವೃತ್ತಿಯಲ್ಲಿ 14 ಪಂದ್ಯಗಳಲ್ಲಿ ಕೇವಲ 4 ಜಯ ಸಾಧಿಸಿ ಅಂಕಪಟ್ಟಿಯಲ್ಲಿ ಕೊನೆಯ (10ನೇ) ಸ್ಥಾನಕ್ಕೆ ಕುಸಿದಿತ್ತು. ಬ್ಯಾಟಿಂಗ್‌ನಲ್ಲೂ ಕಳಪೆ ಪ್ರದರ್ಶನ ತೋರಿದ್ದ ಪಂತ್, 2026ರ ಆವೃತ್ತಿಯಲ್ಲಿ 14 ಪಂದ್ಯಗಳಿಂದ ಕೇವಲ ಒಂದು ಅರ್ಧಶತಕದೊಂದಿಗೆ 312 ರನ್ ಮಾತ್ರ ಗಳಿಸಿದ್ದರು. ಈ ಕಳಪೆ ಪ್ರದರ್ಶನದ ಹಿನ್ನೆಲೆಯಲ್ಲಿ ನಾಯಕತ್ವದಿಂದ ಕೆಳಗಿಳಿದಿದ್ದ ಪಂತ್, ಇದೀಗ ಹೊಸ ಅವಕಾಶದೊಂದಿಗೆ ಹಳೆಯ ಗೂಡಿಗೆ ಮರಳಿದ್ದಾರೆ.

ರಿಷಭ್ ಪಂತ್ ಅವರು 2016 ರಿಂದ 2024ರವರೆಗೆ ಸತತ 9 ಆವೃತ್ತಿಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಭಾಗವಾಗಿದ್ದರು. ಡೆಲ್ಲಿ ಪರ 111 ಪಂದ್ಯಗಳನ್ನು ಆಡಿರುವ ಅವರು, ಫ್ರಾಂಚೈಸಿಯ ಪರ ಅತಿ ಹೆಚ್ಚು ಪಂದ್ಯಗಳನ್ನಾಡಿದ ಆಟಗಾರ ಎಂಬ ಹೆಗ್ಗಳಿಕೆ ಹೊಂದಿದ್ದಾರೆ. ಅಲ್ಲದೆ, 2021 ರಿಂದ 2024ರವರೆಗೆ 43 ಪಂದ್ಯಗಳಲ್ಲಿ ಡೆಲ್ಲಿ ತಂಡವನ್ನು ಮುನ್ನಡೆಸಿದ್ದರು. ಇನ್ನು ಡೆಲ್ಲಿ ತಂಡದಿಂದ ಲಖನೌ ತೆರಳಿರುವ ಕುಲದೀಪ್ ಯಾದವ್, 2022ರಿಂದ ಸತತ 5 ಆವೃತ್ತಿಗಳಲ್ಲಿ ಡೆಲ್ಲಿ ಪರ ಆಡಿದ್ದರು. ಅವರು ಡೆಲ್ಲಿ ಕ್ಯಾಪಿಟಲ್ಸ್ ಪರ 65 ಪಂದ್ಯಗಳಲ್ಲಿ 72 ವಿಕೆಟ್ ಕಬಳಿಸಿ ತಂಡದ ಪ್ರಮುಖ ಬೌಲರ್ ಆಗಿ ಗುರುತಿಸಿಕೊಂಡಿದ್ದರು. ಈ ಮಹತ್ವದ ಬದಲಾವಣೆ ಮುಂಬರುವ ಐಪಿಎಲ್ ಆವೃತ್ತಿಗಳಲ್ಲಿ ಎರಡೂ ತಂಡಗಳ ಬಲಾಬಲವನ್ನು ಬದಲಾಯಿಸುವ ನಿರೀಕ್ಷೆಯಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಭಾರತದಿಂದ ಪಾಕಿಸ್ತಾನದವರೆಗೆ ಎಲ್ಲರಿಗೂ ಆಹ್ವಾನ’: ಮಗಳ ಮದುವೆ ಕುರಿತು ಅನಂತ್ ಸಿಂಗ್ ಹೇಳಿಕೆ

ಜೆಡಿಯು ಪಕ್ಷದಿಂದ ಉಚ್ಚಾಟನೆಗೊಂಡಿರುವ ಬಿಹಾರದ ಪ್ರಭಾವಿ ನಾಯಕ ಅನಂತ್ ಸಿಂಗ್, ತಮ್ಮ...

ಆಂಧ್ರ ಸ್ಥಳೀಯ ಚುನಾವಣೆ: ಎನ್‌ಡಿಎ ಮೈತ್ರಿಗೆ ಗೆಲುವು; ‘ಚುನಾವಣಾ ಅಕ್ರಮ’ ಆರೋಪಿಸಿದ ಜಗನ್ ರೆಡ್ಡಿ

ಆಂಧ್ರಪ್ರದೇಶದಲ್ಲಿ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮುಖ್ಯಮಂತ್ರಿ ಎನ್. ಚಂದ್ರಬಾಬು...

ನಕಲಿ ವೈದ್ಯಕೀಯ ಪದವಿಗಳ ವಿವಾದ; 1.1 ಲಕ್ಷ ವೈದ್ಯರ ಪ್ರಮಾಣಪತ್ರಗಳ ಪರಿಶೀಲನೆಗೆ ನಿರ್ಧಾರ

ಪಶ್ಚಿಮ ಬಂಗಾಳ ವೈದ್ಯಕೀಯ ಮಂಡಳಿಯಲ್ಲಿ (WBMC) 1996ರಿಂದ ನೋಂದಾಯಿಸಿಕೊಂಡಿರುವ ಸುಮಾರು 1.1...

ಸಿಇಸಿ ಗ್ಯಾನೇಶ್ ಕುಮಾರ್ ವಜಾಗೊಳ್ಳುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ: ಕೆ ಸಿ ವೇಣುಗೋಪಾಲ್

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸುವವರೆಗೆ...