ಪ್ಯಾರಾಲಿಂಪಿಕ್ಸ್ | ಶಾಟ್ ಪುಟ್‌; ಕಂಚಿನ ಪದಕ ಗೆದ್ದ ಭಾರತದ ಹೊಕಾಟೊ ಹೊಟೊಜೆ

Date:

ಶುಕ್ರವಾರ ನಡೆದ ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024ರ ಪುರುಷರ ಶಾಟ್‌ಪುಟ್ F57 ಫೈನಲ್ ಸ್ಪರ್ಧೆಯಲ್ಲಿ ಭಾರತದ ಹೊಕಾಟೊ ಹೊಟೊಜೆ ಸೆಮಾ ಕಂಚಿನ ಪದಕವನ್ನು ಗೆದಿದ್ದಾರೆ. ಫ್ರಾನ್ಸ್‌ನಲ್ಲಿ ನಡೆದ ಫೈನಲ್‌ನಲ್ಲಿ 14.65 ಮೀ ಎಸೆತದೊಂದಿಗೆ ಮೂರನೇ ಸ್ಥಾನವನ್ನು ಅವರು ಪಡೆದಿದ್ದು, ಇದು ಅವರ ವೈಯಕ್ತಿಕ ಅತ್ಯುತ್ತಮ ಪ್ರದರ್ಶನವಾಗಿದೆ.

- Advertisement -

ಈ ಪಂದ್ಯದಲ್ಲೇ ಭಾರತದ ಸೋಮನ್ ರಾಣಾ 14.07 ಮೀಟರ್‌ ಎಸೆತದೊಂದಿಗೆ ಐದನೇ ಸ್ಥಾನ ಪಡೆದಿದ್ದಾರೆ. ವಿಶ್ವ ದಾಖಲೆ ಹೊಂದಿರುವ ಇರಾನ್‌ನ ಯಾಸಿನ್ ಖೋಸ್ರಾವಿ 15.96 ಮೀಟರ್ ಎಸೆದು ಚಿನ್ನ ಗೆದ್ದರೆ, ಬ್ರೆಜಿಲ್‌ನ ಥಿಯಾಗೊ ಪಾಲಿನೊ ಡಾಸ್ ಸ್ಯಾಂಟೋಸ್ 14.76 ಮೀ ಎಸೆದು ಬೆಳ್ಳಿ ಪದಕ ತನ್ನದಾಗಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಹೊಕಾಟೊ ಹೊಟೊಜೆ ಪ್ಯಾರಾಲಿಂಪಿಕ್ಸ್ ಶಾಟ್ ಪುಟ್ ಪದಕವನ್ನು ಪಡೆದ ನಾಲ್ಕನೇ ಭಾರತೀಯರಾಗಿದ್ದಾರೆ. ಜೋಗಿಂದರ್ ಶರ್ಮಾ 1984ರ ಪ್ಯಾರಾಲಿಂಪಿಕ್ಸ್‌ನಲ್ಲಿ ಬೆಳ್ಳಿ (ಪುರುಷರ ಶಾಟ್‌ಪುಟ್ L6), ದೀಪಾ ಮಲಿಕ್ 2016 ಪ್ಯಾರಾಲಿಂಪಿಕ್ಸ್‌ನಲ್ಲಿ ಬೆಳ್ಳಿ (ಮಹಿಳೆಯರ ಶಾಟ್‌ಪುಟ್ F53), ಸಚಿನ್ ಖಿಲಾರಿ 2024 ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಬೆಳ್ಳಿ (ಪುರುಷರ ಶಾಟ್‌ಪುಟ್ F46) ಗೆದಿದ್ದಾರೆ.

ಇದನ್ನು ಓದಿದ್ದೀರಾ? ಪ್ಯಾರಾಲಿಂಪಿಕ್ಸ್ | ಇತಿಹಾಸ ಬರೆದ ಬಿಲ್ಲುಗಾರ ಹರ್ವಿಂದರ್ ಸಿಂಗ್; ಆರ್ಚರಿಯಲ್ಲಿ ಭಾರತಕ್ಕೆ ಮೊದಲ ಚಿನ್ನ

ನಾಗಾಲ್ಯಾಂಡ್‌ನ ಹೊಕಾಟೊ ವಿಶೇಷ ಪಡೆ ಸೇರುವ ಕನಸು ಕಂಡಿದ್ದವರು. ಆದರೆ ಕಾರ್ಯಾಚರಣೆಯೊಂದರಲ್ಲಿ ಗಣಿ ಸ್ಫೋಟವಾಗಿ ತಮ್ಮ ಎಡಗಾಲನ್ನು ಕಳೆದುಕೊಂಡರು. 40 ವರ್ಷ ವಯಸ್ಸಿನ ಹೊಕಾಟೊ ಕಳೆದ ವರ್ಷ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಕಂಚಿನ ಪದಕ ಮತ್ತು 2022ರಲ್ಲಿ ಮೊರಾಕೊ ಗ್ರ್ಯಾಂಡ್ ಪ್ರಿಕ್ಸ್‌ನಲ್ಲಿ ಬೆಳ್ಳಿ ಗೆದಿದ್ದಾರೆ. ಈ ವರ್ಷದ ಆರಂಭದಲ್ಲಿ ನಡೆದ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಅವರು ನಾಲ್ಕನೇ ಸ್ಥಾನ ಪಡೆದರು.

ಇದಕ್ಕೂ ಮುನ್ನ ಶುಕ್ರವಾರ ನಡೆದ ಪುರುಷರ ಹೈಜಂಪ್ ಸ್ಪರ್ಧೆಯಲ್ಲಿ ಪ್ರವೀಣ್ ಕುಮಾರ್ ಚಿನ್ನದ ಪದಕ ಗಳಿಸಿದ್ದಾರೆ. ಈ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತ ಈವರೆಗೆ ಒಟ್ಟು 27 ಪದಕಗಳನ್ನು ಗೆದ್ದಿದೆ. ಆರು ಚಿನ್ನ, 9 ಬೆಳ್ಳಿ ಮತ್ತು 12 ಕಂಚಿನ ಪದಕಕ್ಕೆ ಭಾರತದ ಅಥ್ಲೀಟ್‌ಗಳು ಕೊರಳೊಡ್ಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...

ಏಷ್ಯನ್ ಗೇಮ್ಸ್: ಬಿಲ್ಲುಗಾರಿಕೆಯಲ್ಲಿ ಇತಿಹಾಸ ಬರೆದ 17 ವರ್ಷದ ಕುಂಕುಮ್‌ಗೆ ಬಂಗಾರ!

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನ 15ನೇ ದಿನ...