ಇಂಡಿಯನ್ ಪ್ರೀಮಿಯರ್ ಲೀಗ್‌ನ(ಐಪಿಎಲ್) ಇತಿಹಾಸದಲ್ಲೇ ಮೊದಲ ಬಾರಿಗೆ ಆಸ್ಟ್ರೇಲಿಯಾದ ಆಲ್‌ರೌಂಡರ್ ಪ್ಯಾಟ್ ಕಮ್ಮಿನ್ಸ್ 20.50 ಕೋಟಿಗೆ ಹರಾಜಾಗುವ ಮೂಲಕ ಸುದ್ದಿಯಾಗಿದ್ದಾರೆ.
20.50 ಕೋಟಿಗೆ ಸನ್ ರೈಸರ್ಸ್ ಹೈದರಾಬಾದ್ ತಂಡದ ಪಾಲಾದ 2023ರ ವಿಶ್ವಕಪ್ ಗೆದ್ದಿರುವ ಆಸ್ಟ್ರೇಲಿಯಾ ತಂಡದ ನಾಯಕ, 2024ರ ಐಪಿಎಲ್‌ನಲ್ಲಿ ಪರ ಆಡಲಿದ್ದಾರೆ. ಮೊದಲ ಬಾರಿಗೆ ದುಬೈನಲ್ಲಿ ಐಪಿಎಲ್ ಹರಾಜು ಪ್ರಕ್ರಿಯೆ ನಡೆಯುತ್ತಿದೆ.
Pat Cummins sold to SRH at 20.50cr. pic.twitter.com/OtUgjlKmQx
— Mufaddal Vohra (@mufaddal_vohra) December 19, 2023
2 ಕೋಟಿ ಮೂಲ ಬೆಲೆಯಿಂದ ಹರಾಜಿನ ಅಂಗಳಕ್ಕೆ ಎಂಟ್ರಿ ನೀಡಿದ ಪ್ಯಾಟ್ ಕಮ್ಮಿನ್ಸ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲು ಸನ್ ರೈಸರ್ಸ್ ಹೈದರಾಬಾದ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಪೈಪೋಟಿ ನಡೆಸಿದವು. ಕೊನೆಗೆ 20.50 ಕೋಟಿಗೆ ಹೈದರಾಬಾದ್ ತಂಡಕ್ಕೆ ಹರಾಜಾಗಿದ್ದಾರೆ.
HISTORY. 💥
Pat Cummins is a #Riser 🧡#HereWeGOrange pic.twitter.com/yZPPDiZRVS
— SunRisers Hyderabad (@SunRisers) December 19, 2023
ಹೈದರಾಬಾದ್ ಪಾಲಾದ ವಿಶ್ವಕಪ್ ಫೈನಲ್ ಪಂದ್ಯದ ಹೀರೋ ಟ್ರಾವಿಸ್ ಹೆಡ್
ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ತಮ್ಮ ಬ್ಯಾಟಿಂಗ್ ಮೂಲಕ ಛಾಪು ಮೂಡಿಸಿರುವ ಆಸ್ಟ್ರೇಲಿಯಾ ತಂಡದ ಸ್ಟಾರ್ ಬ್ಯಾಟರ್ ಟ್ರಾವಿಸ್ ಹೆಡ್ ಕೂಡ ಈ ಬಾರಿ ಐಪಿಎಲ್‌ನಲ್ಲಿ 6.8 ಕೋಟಿಗೆ ಸನ್ ರೈಸರ್ಸ್ ಹೈದರಾಬಾದ್ ತಂಡದ ಪರ ಆಡಲಿದ್ದಾರೆ.