ಭಾರತ – ದ.ಆಫ್ರಿಕಾ ಟೆಸ್ಟ್ : ಕಗಿಸೊ ರಬಾಡ ದಾಳಿಗೆ ಕುಸಿದ ಭಾರತ

Date:

ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್‌ ಪಂದ್ಯದಲ್ಲಿ ಹರಿಣಗಳ ಬೌಲಿಂಗ್‌ ದಾಳಿಗೆ ತತ್ತರಿಸಿದ್ದು, ಮೊದಲ ಇನಿಂಗ್ಸ್‌ನಲ್ಲಿ 59 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 208 ರನ್‌ ಗಳಿಸಿದೆ.  ಪಂದ್ಯಕ್ಕೆ ಮಳೆ ಅಡ್ಡಿಯಾದ ಕಾರಣ 59 ಓವರ್‌ಗಳಿಗೆ ದಿನದಾಟವನ್ನು ನಿಲ್ಲಿಸಲಾಗಿದೆ.

- Advertisement -

ದಕ್ಷಿಣ ಆಫ್ರಿಕಾದ ಸಂಚೂರಿಯನ್‌ನಲ್ಲಿ ನಡೆಯುತ್ತಿರುವ ಟೆಸ್ಟ್‌ ಪಂದ್ಯದಲ್ಲಿ ಟಾಸ್‌ ಗೆದ್ದ ನಾಯಕ ತೆಂಬಾ ಬವುಮಾ ಭಾರತ ತಂಡವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

12 ಓವರ್‌ಗಳಾಗುವಷ್ಟರಲ್ಲಿಯೇ ಟೀಂ ಇಂಡಿಯಾ ಯಶಸ್ವಿ ಜೈಸ್ವಾಲ್(17), ನಾಯಕ ರೋಹಿತ್ ಶರ್ಮಾ(5), ಶುಭಮನ್‌ ಗಿಲ್(2) ವಿಕೆಟ್‌ಗಳನ್ನು ಕಳೆದುಕೊಂಡಿತು. ನಂತರ ನಾಲ್ಕನೇ ವಿಕೆಟ್ ಜೊತೆಯಾಟಕ್ಕೆ ವಿರಾಟ್‌ ಕೊಹ್ಲಿ(38) ಹಾಗೂ ಶ್ರೇಯಸ್‌ ಅಯ್ಯರ್(31) 68 ರನ್‌ ಕಲೆ ಹಾಕಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಲಿಷ್ಠರೇ ಜಾತಿಗಣತಿಯನ್ನು ವಿರೋಧಿಸಿದರೆ ಬಾಯಿಲ್ಲದವರ ಪಾಡೇನು?

ನಂತರದಲ್ಲಿ ಬಂದ ರವಿಚಂದ್ರನ್ ಅಶ್ವಿನ್(8) ಹೆಚ್ಚು ಹೊತ್ತು ನಿಲ್ಲಲಿಲ್ಲ. ಶಾರ್ದೂಲ್ ಠಾಕೂರ್ 24 ರನ್‌ ಗಳಿಸಿ ಔಟಾದರೆ, ಬುಮ್ರಾ 1 ರನ್ನಿಗೆ ಪೆವಿಲಿಯನ್‌ಗೆ ತೆರಳಿದರು.

ಅರ್ಧ ಶತಕ ಗಳಿಸಿ ಅಜೇಯರಾಗಿ ಉಳಿದಿರುವ ವಿಕೆಟ್ ಕೀಪರ್ ಕೆ ಎಲ್ ರಾಹುಲ್ 70 ರನ್‌ ಗಳಿಸಿ ಆಡುತ್ತಿದ್ದಾರೆ. ರಾಹುಲ್‌ಗೆ ಜೊತೆಯಾಗಿರುವ ಮೊಹಮದ್‌ ಸಿರಾಜ್‌ ಇನ್ನು ಖಾತೆಯನ್ನು ತೆರದಿಲ್ಲ.

ದಕ್ಷಿಣ ಆಫ್ರಿಕಾ ಪರ ಕಗಿಸೊ ರಬಾಡ 17 ಓವರ್‌ಗಳಲ್ಲಿ 44/5, ನಾಂದ್ರೆ ಬರ್ಗರ್ 50/2 ಹಾಗೂ ಮಾರ್ಕೊ ಜಾನ್ಸೆನ್ 52/1 ವಿಕೆಟ್ ಕಬಳಿಸಿ ಭಾರತದ ಪತನಕ್ಕೆ ಕಾರಣವಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮನೆಯಲ್ಲಿ ಸ್ಮಾರ್ಟ್‌ಫೋನ್, ಟಿವಿ ಇಲ್ಲ: ಬಡತನ ಮೆಟ್ಟಿ ನಿಂತು ಏಷ್ಯಾಡ್‌ನಲ್ಲಿ ಚಿನ್ನ ಗೆದ್ದ ನೀರು ದಂಡಾ

ಮನೆಯಲ್ಲಿ ಸ್ಮಾರ್ಟ್‌ಫೋನ್, ಟಿವಿ ಸೇರಿದಂತೆ ಯಾವೊಂದು ಸೌಕರ್ಯವೂ ಇಲ್ಲ. ಕೈಯಲ್ಲಿ ಬಿಪಿಎಲ್...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ...

ವಿರಾಟ್ ‘ವಿಶ್ವ’ರೂಪ: 15 ಸಾವಿರ ರನ್ ಗಡಿ ದಾಟಿ ಸಚಿನ್ ದಾಖಲೆ ಹಿಂದಿಕ್ಕಿದ ಕೊಹ್ಲಿ

ಕೇರಳದ ತಿರುವನಂತಪುರದಲ್ಲಿರುವ ಗ್ರೀನ್‌ಫೀಲ್ಡ್‌ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ವೆಸ್ಟ್ ಇಂಡೀಸ್...