ಇತಿಹಾಸ ನಿರ್ಮಿಸಿದ ಆರ್. ಪ್ರಜ್ಞಾನಂದ: ಗ್ರ್ಯಾಂಡ್ ಚೆಸ್ ಟೂರ್ ಗೆದ್ದ ಮೊದಲ ಭಾರತೀಯ

Date:

ಕೆನಡಾದ ಸೈಂಟ್ ಲೂಯಿಸ್‌ನಲ್ಲಿ ನಡೆದ ಪ್ರತಿಷ್ಠಿತ ‘ಗ್ರ್ಯಾಂಡ್ ಚೆಸ್ ಟೂರ್’ (GCT) ಟೂರ್ನಿಯಲ್ಲಿ ಭಾರತದ ಗ್ರ್ಯಾಂಡ್‌ಮಾಸ್ಟರ್ ಆರ್. ಪ್ರಜ್ಞಾನಂದ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಹಾಲಿ ಚಾಂಪಿಯನ್ ಫ್ಯಾಬಿಯಾನೊ ಕರುವಾನಾ ವಿರುದ್ಧ ಅದ್ಭುತವಾಗಿ ತಿರುಗೇಟು ನೀಡಿದ ಅವರು, ಈ ಟೂರ್ನಿಯಲ್ಲಿ ಪ್ರಶಸ್ತಿ ಗೆದ್ದ ಭಾರತದ ಮೊದಲ ಚೆಸ್ ಆಟಗಾರ ಎಂಬ ಇತಿಹಾಸ ಸೃಷ್ಟಿಸಿದ್ದಾರೆ.

- Advertisement -

ಕ್ಲಾಸಿಕಲ್ ಗೇಮ್‌ಗಳ ಮುಕ್ತಾಯದ ವೇಳೆಗೆ ಪ್ರಗ್ನಾನಂದ ಅವರು 3-9 ಅಂಕಗಳ ಹಿನ್ನಡೆಯಲ್ಲಿದ್ದರು. ಅಂತಿಮ ದಿನದ ಆಟ ಆರಂಭವಾದಾಗ ಕರುವಾನಾ ಅವರಿಗಿಂತ ಆರು ಅಂಕಗಳ ಹಿಂದೆ ಇದ್ದರು. ಪ್ರಶಸ್ತಿ ಕೈತಪ್ಪಿ ಹೋಗುವ ಆತಂಕದ ನಡುವೆಯೂ, 21 ವರ್ಷದ ಪ್ರಗ್ನಾನಂದ ರ‍್ಯಾಪಿಡ್ ವಿಭಾಗದಲ್ಲಿ ದಿಟ್ಟ ಹೋರಾಟ ನೀಡಿ ಗಮನ ಸೆಳೆದರು. ರ‍್ಯಾಪಿಡ್ ವಿಭಾಗದ ಸತತ ಎರಡು ಪಂದ್ಯಗಳನ್ನು ಗೆಲ್ಲುವ ಮೂಲಕ ಅಂಕಗಳ ಅಂತರವನ್ನು ತಗ್ಗಿಸಿ ಮುನ್ನಡೆ ಸಾಧಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ...

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿರುವ ಹೊತ್ತಿನಲ್ಲಿ, ಲೋಕಸಭಾ ಸ್ಪೀಕರ್ ಮುಂದೆ ಅನರ್ಹತೆ ವಿಚಾರಣೆ ಎದುರಿಸುತ್ತಿರುವ 20 ಬಂಡುಕೋರ ಟಿಎಂಸಿ...

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...

ತೀವ್ರ ಪೈಪೋಟಿಯಿಂದ ಕೂಡಿದ್ದ ನಾಲ್ಕು ಬ್ಲಿಟ್ಜ್ ಗೇಮ್‌ಗಳಲ್ಲಿ ಚೆನ್ನೈ ಮೂಲದ ಈ ಯುವ ಗ್ರ್ಯಾಂಡ್‌ಮಾಸ್ಟರ್ ಅತ್ಯಂತ ಸಂಯಮದಿಂದ ಆಡಿದರು. ಕರುವಾನಾ ಅವರಿಂದ ತೀವ್ರ ಒತ್ತಡ ಎದುರಾಗಿದ್ದರೂ ವಿಚಲಿತರಾಗದ ಪ್ರಗ್ನಾನಂದ, ಅಂತಿಮವಾಗಿ 15-13 ಅಂಕಗಳ ಅಂತರದಲ್ಲಿ ಒಟ್ಟಾರೆ ಗೆಲುವು ತಮ್ಮದಾಗಿಸಿಕೊಂಡರು.

ಈ ಐತಿಹಾಸಿಕ ಗೆಲುವಿನೊಂದಿಗೆ ಪ್ರಗ್ನಾನಂದ ಅವರು 2 ಲಕ್ಷ ಡಾಲರ್ (ಸುಮಾರು ₹1.67 ಕೋಟಿ) ಪ್ರಥಮ ಬಹುಮಾನವನ್ನು ಮುಡಿಗೇರಿಸಿಕೊಂಡಿದ್ದಾರೆ. ಅಲ್ಲದೆ, ಮುಂದಿನ ವರ್ಷ ನಡೆಯಲಿರುವ ಗ್ರಾಂಡ್ ಚೆಸ್ ಟೂರ್‌ಗೆ ನೇರ ಪ್ರವೇಶವನ್ನು ಖಚಿತಪಡಿಸಿಕೊಂಡಿದ್ದಾರೆ.

2026ರ ಸಾಲಿನಲ್ಲಿ ಪ್ರಗ್ನಾನಂದ ಅವರ ಅತ್ಯುತ್ತಮ ಪ್ರದರ್ಶನಗಳ ಪಟ್ಟಿಗೆ ಈ ಐತಿಹಾಸಿಕ ಗೆಲುವು ಮತ್ತೊಂದು ಪ್ರಮುಖ ಸಾಧನೆಯಾಗಿ ಸೇರ್ಪಡೆಯಾಗಿದೆ. ಜೊತೆಗೆ, ಅಂತಾರಾಷ್ಟ್ರೀಯ ಚೆಸ್ ವಲಯದಲ್ಲಿ ಅಗ್ರಗಣ್ಯ ಯುವ ಆಟಗಾರರಾಗಿ ಅವರ ಸ್ಥಾನವನ್ನು ಮತ್ತಷ್ಟು ಬಲಪಡಿಸಿದೆ.
ಸೈಂಟ್ ಲೂಯಿಸ್‌ನಲ್ಲಿ ನಡೆದ ಅಂತಿಮ ದಿನದ ಆಟದಲ್ಲಿ ಹಾಲಿ ಚಾಂಪಿಯನ್ ಎದುರು ಆರು ಅಂಕಗಳ ಹಿನ್ನಡೆಯನ್ನು ಮೀರಿ ನಿಂತು ಗೆಲುವು ಸಾಧಿಸಿದ ಈ ಅದ್ಭುತ ಪರಿಯು, ಅವರ ವೃತ್ತಿಜೀವನದ ಅತ್ಯಂತ ಸ್ಮರಣೀಯ ಪ್ರದರ್ಶನಗಳಲ್ಲಿ ಒಂದಾಗಿ ದಾಖಲಾಗಲಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2022ರ ಲೈಂಗಿಕ ದೌರ್ಜನ್ಯ ಪ್ರಕರಣ: ಮಲಯಾಳಂ ನಿರ್ದೇಶಕ ಲಿಜು ಕೃಷ್ಣ ಖುಲಾಸೆ

2022ರಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ಚಿತ್ರರಂಗದ ನಿರ್ದೇಶಕ...

ಜನನುಡಿ 2026 | ಇತಿಹಾಸ ಸುಮ್ಮನಿರುವವರನ್ನು ಕ್ಷಮಿಸುವುದಿಲ್ಲ: ಪ್ರಕಾಶ್ ರಾಜ್

ಇತಿಹಾಸ ತಪ್ಪು ಮಾಡಿದವರನ್ನು ಕ್ಷಮಿಸುತ್ತದೆ. ಆದರೆ ಸುಮ್ಮನಿರುವವರನ್ನು ಯಾವತ್ತೂ ಕ್ಷಮಿಸುವುದಿಲ್ಲ ಎಂದು...

ಉತ್ತರ ಕನ್ನಡ |ಮಂಗನ ಕಾಯಿಲೆ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಹರ್ಷಲ್ ಬೊಯರ್

ಜಿಲ್ಲೆಯಲ್ಲಿ ಮಂಗನ ಕಾಯಿಲೆ (ಕೆಎಫ್‌ಡಿ) ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು,...

ಸಮಾನತೆ, ಕಾಯಕ-ದಾಸೋಹದ ತತ್ವಗಳಿಗೆ ಸಾಕ್ಷಿಯಾದ ನೆಲ ಬಸವಕಲ್ಯಾಣ

ಬಸವಕಲ್ಯಾಣ ಸಮಾನತೆ, ಕಾಯಕ ಮತ್ತು ದಾಸೋಹದ ತತ್ವಗಳನ್ನು ಸಾರುವ ಪವಿತ್ರ ಭೂಮಿಯಾಗಿದ್ದು,...