ಐಪಿಎಲ್ | ಚೆನ್ನೈಗೆ ತವರಲ್ಲೇ ಸೋಲುಣಿಸಿದ ಪಂಜಾಬ್ ಕಿಂಗ್ಸ್‌; ಪ್ಲೇ ಆಫ್‌ ಆಸೆ ಜೀವಂತ

Date:

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್‌ನ 49ನೇ ಪಂದ್ಯದಲ್ಲಿ ಆತಿಥೇಯ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಪಂಜಾಬ್ ಕಿಂಗ್ಸ್ ತಂಡವು ಏಳು ವಿಕೆಟ್‌ಗಳಿಂದ ಭರ್ಜರಿಯಾಗಿ ಮಣಿಸುವ ಮೂಲಕ ತವರಲ್ಲೇ ಮುಖಭಂಗ ಅನುಭವಿಸುವಂತೆ ಮಾಡಿದೆ.

- Advertisement -

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ರುತುರಾಜ್ ಗಾಯಕ್ವಾಡ್ ಅವರ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 162 ರನ್ ಗಳಿಸಿ, ಪಂಜಾಬ್ ಕಿಂಗ್ಸ್ ತಂಡಕ್ಕೆ 163 ರನ್‌ಗಳ ಸಾಧಾರಣ ಗುರಿ ನೀಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡ 17.5 ಓವರ್‌ಗಳಲ್ಲಿ ಮೂರು ವಿಕೆಟ್ ಕಳೆದುಕೊಂಡು 163 ರನ್ ದಾಖಲಿಸುವ ಮೂಲಕ ಭರ್ಜರಿ ಗೆಲುವು ತನ್ನದಾಗಿಸಿಕೊಂಡಿತು. ಈ ಬಾರಿ ಕೂಡ ಚೆನ್ನೈಯನ್ನು ಸೋಲಿಸುವ ಮೂಲಕ ಪಂಜಾಬ್ ಸತತ ಐದು ಬಾರಿ ಸೋಲಿಸಿದಂತಾಯಿತು.

ಪಂಜಾಬ್ ಪರ ಬ್ಯಾಟಿಂಗ್‌ನಲ್ಲಿ ಜಾನಿ ಬೈರ್​ಸ್ಟೋವ್ 46 ರನ್​(30 ಎಸೆತ, 7 ಬೌಂಡರಿ, 1 ಸಿಕ್ಸ್) ಮತ್ತು ಬೌಲಿಂಗ್‌ನಲ್ಲಿ ರಾಹುಲ್​ ಚಹಾರ್​ (16ಕ್ಕೆ 2 ವಿಕೆಟ್​), ಹರ್‌ಪ್ರೀತ್ ಬ್ರಾರ್ (17 ರನ್ ನೀಡಿ 2) ವಿಕೆಟ್ ಪಂಜಾಬ್​ ಗೆಲುವಿನ ಪ್ರಮುಖ ರೂವಾರಿಗಳಾಗಿ ಮೂಡಿಬಂದರು.

ಚೆನ್ನೈ ನೀಡಿದ್ದ 163 ರನ್‌ಗಳ ಗುರಿ ಬೆನ್ನಟ್ಟುವಾಗ ಕಳೆದ ಪಂದ್ಯದ ಶತಕ ವೀರ ಜಾನಿ ಜಾನಿ ಬೈರ್​ಸ್ಟೋವ್ 46 ರನ್​ ಬಾರಿಸಿ ಈ ಪಂದ್ಯದಲ್ಲಿಯೂ ತಮ್ಮ ಬ್ಯಾಟಿಂಗ್​ ಪ್ರತಾಪ ತೋರಿದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ಕೊಟ್ಟ ಅವರು ಪ್ರತಿ ಓವರ್​ನಲ್ಲಿಯೂ ಕನಿಷ್ಠ ಒಂದು ಬೌಂಡರಿ ಅಥವಾ ಸಿಕ್ಸರ್​ ಬಾರಿಸುತ್ತಲೇ ಮುನ್ನುಗಿದರು.

ಇವರಿಗೆ 2ನೇ ಕ್ರಮಾಂಕದಲ್ಲಿ ಆಡಲಿಳಿದ ದಕ್ಷಿಣ ಆಫ್ರಿಕಾದ ಹಾರ್ಡ್​ ಹಿಟ್ಟರ್​ ರೀಲಿ ರೂಸೊ ಉತ್ತಮ ಸಾಥ್​ ನೀಡಿದರು. ಬೈರ್​ಸ್ಟೋವ್ ವಿಕೆಟ್​ ಪತನದ ಬಳಿಕ ಇವರು ತಂಡವನ್ನು ಆಧರಿಸಿದರು. 23 ಎಸೆತ ಎದುರಿಸಿ 43(5 ಬೌಂಡರಿ, 2 ಸಿಕ್ಸರ್​) ರನ್​ ಬಾರಿಸಿದರು.

ಅಂತಿಮವಾಗಿ ಶಶಾಂಕ್​ ಸಿಂಗ್​(25 ರನ್) ಮತ್ತು ಹಂಗಾಮಿ ನಾಯಕ ಸ್ಯಾಮ್​ ಕರನ್​(26) ಅಜೇಯರಾಗಿ ಉಳಿದು ತಂಡವನ್ನು ಗೆಲುವಿನ ದಡ ಸೇರಿಸಿದರು. ಇದೇ ವೇಳೆ ಶಶಾಂಕ್ ಟಿ20 ಕ್ರಿಕೆಟ್​ನಲ್ಲಿ 2 ಸಾವಿರ ರನ್​ಗಳ ಗಡಿ ದಾಡಿದರು.

ಚೆನ್ನೈ ಪರ ಬೌಲಿಂಗ್‌ನಲ್ಲಿ ಶಿವಂ ದುಬೆ, ರಿಚರ್ಡ್‌ ಗ್ಲೀಸನ್ ಹಾಗೂ ಶಾರ್ದುಲ್ ಠಾಕೂರ್ ತಲಾ ಒಂದೊಂದು ವಿಕೆಟ್ ಗಳಿಸಿದರು.

ಪ್ಲೇ ಆಫ್‌ ಆಸೆ ಜೀವಂತ

ಚೆನ್ನೈ ವಿರುದ್ಧದ ಪಂದ್ಯದಲ್ಲಿ 7 ವಿಕೆಟ್‌ಗಳ ಗೆಲುವಿನೊಂದಿಗೆ ಪಂಜಾಬ್ ಕಿಂಗ್ಸ್‌ ಪ್ಲೇ ಆಫ್‌ ಆಸೆ ಜೀವಂತವಾಗಿರಿಸಿದೆ. ಪಂಜಾಬ್ ಈವರೆಗೆ ಆಡಿರುವ 10 ಪಂದ್ಯಗಳಲ್ಲಿ 4 ಗೆಲುವು, 6 ಸೋಲಿನನೊಂದಿಗೆ 8 ಅಂಕ ಗಳಿಸಿಕೊಂಡಿದೆ. -0.06 ಸರಾಸರಿ ಅಂಕದೊಂದಿಗೆ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದ್ದರೂ ಮುಂದಿನ ಎಲ್ಲ ಪಂದ್ಯಗಳನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡವು 10 ಪಂದ್ಯಗಳಲ್ಲಿ 5 ರಲ್ಲಿ ಸೋಲು ಹಾಗೂ 5ರಲ್ಲಿ ಗೆಲುವಿನೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತಕ್ಕೆ ಚಿನ್ನ ತಂದ ಮಹಿಳೆಯರು: ಏಷ್ಯನ್‌ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್‌ ಕಲಿಗಳ ಸಾಧನೆ

ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ...

ಏಷ್ಯನ್ ಗೇಮ್ಸ್: ಸ್ಕೀಟ್ ಶೂಟಿಂಗ್, ಸಾಫ್ಟ್ ಟೆನಿಸ್‌ನಲ್ಲಿ ಭಾರತಕ್ಕೆ ಕಂಚು; ಪದಕದತ್ತ ಮೀರಾಬಾಯಿ ದಾಪುಗಾಲು

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ ನಾಲ್ಕನೇ ದಿನವಾದ ಬುಧವಾರ...

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...

ಸೋತರೂ ಎಲ್ಲರ ಹೃದಯ ಗೆದ್ದ ಸುಚಿಕಾ: 700 ಗ್ರಾಂ ಹಿನ್ನಡೆಯಿಂದ ತಪ್ಪಿದ ಚಿನ್ನ

ಮಹಿಳೆಯರ ಸಾಂಪ್ರದಾಯಿಕ 60 ಕೆ.ಜಿ ವಿಭಾಗದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ)...