ಐಪಿಎಲ್ | ಸ್ಯಾಮ್ ಕರನ್-ಲಿವಿಂಗ್‌ಸ್ಟನ್‌ ಜೊತೆಯಾಟಕ್ಕೆ ತಲೆಬಾಗಿದ ಡೆಲ್ಲಿ ಕ್ಯಾಪಿಟಲ್ಸ್‌

Date:

ಪಂಜಾಬ್‌ನ ಮುಲ್ಲನ್‌ಪುರದ ಮಹಾರಾಜ ಯದ್ವೇಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್‌ನ 2ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ನೀಡಿದ್ದ 175 ರನ್‌ಗಳ ಗುರಿಯನ್ನು ಬೆನ್ನತ್ತಿದ ಪಂಜಾಬ್‌, ಸ್ಯಾಮ್ ಕರನ್-ಲಿವಿಂಗ್‌ಸ್ಟನ್‌ ಜೊತೆಯಾಟದ ನೆರವಿನಿಂದ 4 ವಿಕೆಟ್‌ಗಳ ಜಯಗಳಿಸಿದೆ.

- Advertisement -

ಡೆಲ್ಲಿ ನೀಡಿದ್ದ ಗುರಿಯನ್ನು ಶಿಖರ್ ಧವನ್ ನೇತೃತ್ವದ ಪಂಜಾಬ್ ಕಿಂಗ್ಸ್ ತಂಡ 6 ವಿಕೆಟ್ ಕಳೆದುಕೊಂಡು 19.2 ಓವರ್‌ಗಳಲ್ಲಿ ಗುರಿ ಮುಟ್ಟುವಲ್ಲಿ ಸಫಲವಾಯಿತು. ಸ್ಯಾಮ್ ಕರನ್-ಲಿವಿಂಗ್‌ಸ್ಟನ್‌ ಜೋಡಿಯು 5ನೇ ವಿಕೆಟ್‌ಗೆ ನಡೆಸಿದ 67 ರನ್‌ಗಳ ಜೊತೆಯಾಟದ ನೆರವಿನಿಂದ ಗೆಲುವು ಪಡೆಯುವಲ್ಲಿ ಸಫಲವಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಡೆಲ್ಲಿ ಕ್ಯಾಪಿಟಲ್ಸ್‌ ಪರವಾಗಿ 18ನೇ ಓವರ್‌ ಎಸೆದ ಖಲೀಲ್, ಎರಡು ವಿಕೆಟ್ ಕಿತ್ತು ಆಘಾತ ನೀಡಿದರಾದರೂ, ಕೊನೆಯ ಓವರ್‌ನ 2ನೇ ಎಸೆತದಲ್ಲಿ ಲಿವಿಂಗ್‌ಸ್ಟನ್‌ ಸಿಕ್ಸರ್ ಬಾರಿಸುವ ಮೂಲಕ ಗೆಲುವಿನ ದಡ ತಲುಪಿಸಿದರು. ಸ್ಯಾಮ್ ಕರನ್ 47 ಎಸೆತಗಳಲ್ಲಿ 6 ಬೌಂಡರಿ ಹಾಗೂ ಒಂದು ಸಿಕ್ಸರ್‌ನ ನೆರವಿನಿಂದ 63 ರನ್ ಗಳಿಸಿ, ಈ ಬಾರಿಯ ಐಪಿಎಲ್‌ನ ಮೊದಲ ಅರ್ಧಶತಕ ದಾಖಲಿಸಿದರು. ಲಿವಿಂಗ್‌ಸ್ಟನ್‌ 21 ಎಸೆತಗಳಲ್ಲಿ 38 ರನ್ ಗಳಿಸಿ ಔಟಾಗದೆ ಉಳಿದರು.

ಉಳಿದಂತೆ ಪಂಜಾಬ್ ಪರವಾಗಿ ನಾಯಕ ಶಿಖರ್ ಧವನ್ 22 ರನ್ , ಜಾನಿ ಬೈರ್‌ಸ್ಟೋವ್ 9 ರನ್, ಇಂಪ್ಯಾಕ್ಟ್‌ ಪ್ಲೆಯರ್ ಆಗಿ ಬ್ಯಾಟಿಂಗ್ ನಡೆಸಿದ ಪ್ರಭಿಸಿಮ್ರಾನ್ ಸಿಂಗ್ 26 ರನ್, ಜಿತೇಶ್ ಶರ್ಮಾ 9 ರನ್ ಗಳಿಸಿದರೆ, ಶಶಾಂಕ್ ಸಿಂಗ್ ಶೂನ್ಯಕ್ಕೆ ಔಟಾದರು.

ಡೆಲ್ಲಿ ಕ್ಯಾಪಿಟಲ್ಸ್‌ ಪರವಾಗಿ ಕುಲ್‌ದೀಪ್ ಯಾದವ್ ಹಾಗೂ ಖಲೀಲ್ ಅಹ್ಮದ್ ತಲಾ 2 ವಿಕೆಟ್ ಪಡೆದರೆ, ಇಶಾಂತ್ ಶರ್ಮಾ 1 ವಿಕೆಟ್ ಪಡೆದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...