ಐಪಿಎಲ್ 2023 | ಸಿರಾಜ್ ಅಬ್ಬರಕ್ಕೆ ನಲುಗಿದ ಪಂಜಾಬ್ ಕಿಂಗ್ಸ್

Date:

ಮುಹಮ್ಮದ್ ಸಿರಾಜ್ ಬೌಲಿಂಗ್-ಫೀಲ್ಡಿಂಗ್ ಅಬ್ಬರಕ್ಕೆ ನಲುಗಿದ ಪಂಜಾಬ್ ಕಿಂಗ್ಸ್ ತವರಿನಲ್ಲೇ ಹೀನಾಯ ಸೋಲು ಅನುಭವಿಸಿದೆ‌.

ಐಪಿಎಲ್ 16ನೇ ಆವೃತ್ತಿಯಲ್ಲಿ ಆರ್‌ಸಿಬಿ 3ನೇ ಗೆಲುವು ಸಾಧಿಸಿದೆ. ಮೊಹಾಲಿಯಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಬೆಂಗಳೂರು ತಂಡ ಆತಿಥೇಯ ಪಂಜಾಬ್ ವಿರುದ್ಧ 24 ರನ್‌ಗಳ ಅಂತರದಿಂದ ಗೆದ್ದು ಬೀಗಿದೆ‌.

ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಆರಂಭಿಕರಾದ ವಿರಾಟ್ ಕೊಹ್ಲಿ [59] ಮತ್ತು ಫಾಫ್ ಡುಪ್ಲೆಸಿಸ್ [84] ಗಳಿಸಿದ ಅಬ್ಬರದ ಅರ್ಧಶತಕಗಳ ನೆರವಿನಿಂದ 4 ವಿಕೆಟ್ ನಷ್ಟದಲ್ಲಿ 174 ರನ್‌ಗಳಿಸಿತ್ತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಉತ್ತರವಾಗಿ ಬ್ಯಾಟಿಂಗ್ ನಲ್ಲಿ ಪಂಜಾಬ್ 18.2 ಓವರ್‌ಗಳಲ್ಲಿ 150 ರನ್‌ ಗಳಿಸುವಷ್ಟರಲ್ಲಿ ಸರ್ವಪತನ ಕಂಡಿತು.

4 ಓವರ್‌ಗಳ ದಾಳಿಯಲ್ಲಿ 21 ರನ್ ನೀಡಿ 4 ವಿಕೆಟ್ ಪಡೆದ ವೇಗಿ ಮುಹಮ್ಮದ್ ಸಿರಾಜ್ ಆರ್‌ಸಿಬಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

ಅಪಾಯಕಾರಿ ಆಗುವ ಸೂಚನೆ ನೀಡಿದ್ದ ಹರ್ಪ್ರೀತ್ ಸಿಂಗ್ ಅವರನ್ನು ಸಿರಾಜ್ ರನೌಟ್ ಮಾಡಿದರು. ಇದು ಸಹ ಪಂದ್ಯಕ್ಕೆ ತಿರುವು ನೀಡಿತು.

ಪಂಜಾಬ್ ಪರ ಪ್ರಭಾಸಿಮ್ರನ್ ಸಿಂಗ್ 46 ಮತ್ತು ಜಿತೇಶ್ ಶರ್ಮಾ 41 ರನ್‌ಗಳಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಂಪೈರ್ ಜೊತೆ ವಾಗ್ವಾದ: ಕೊಹ್ಲಿಗೆ ಶೇ.50 ರಷ್ಟು ದಂಡ

ಐಪಿಎಲ್‌ ಟೂರ್ನಿಯಲ್ಲಿ ಕೆಕೆಆರ್‌ ತಂಡದ ವಿರುದ್ಧದ ಪಂದ್ಯದಲ್ಲಿ ಅಂಪೈರ್‌ ವಿರುದ್ಧ ವಾಗ್ವಾದ...

ಕ್ಯಾಂಡಿಡೇಟ್ಸ್ ಚೆಸ್ ಟೂರ್ನಿ ಗೆದ್ದು ಇತಿಹಾಸ ನಿರ್ಮಿಸಿದ 17ರ ಹರೆಯದ ಭಾರತೀಯ ಡಿ ಗುಕೇಶ್

ಭಾರತದ 17 ವರ್ಷದ ಗ್ರ್ಯಾಂಡ್‌ ಮಾಸ್ಟರ್ ಡಿ ಗುಕೇಶ್ ಟೊರೊಂಟೊದಲ್ಲಿ ನಡೆದ...

ಐಪಿಎಲ್ | ಪಂಜಾಬ್ ವಿರುದ್ಧ ಗುಜರಾತ್ ಟೈಟನ್ಸ್‌ಗೆ ಮೂರು ವಿಕೆಟ್‌ಗಳ ಜಯ

ಚಂಡೀಗಢದ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್‌...