ಐಪಿಎಲ್ 2025 | ಲಖನೌ ವಿರುದ್ಧ ಗೆದ್ದು ಎರಡನೇ ಸ್ಥಾನಕ್ಕೇರಿದ ಪಂಜಾಬ್‌

Date:

ಭರವಸೆಯ ಆಟಗಾರ ಪ್ರಭ್‌ಸಿಮ್ರನ್ ಸಿಂಗ್ ಬಾರಿಸಿದ ಅರ್ಧಶತಕ ಹಾಗೂ ವೇಗಿ ಅರ್ಷದೀಪ್ ಸಿಂಗ್ (43ಕ್ಕೆ 3 ವಿಕೆಟ್‌) ಇವರ ಅಮೋಘ ಆಟದ ನೆರವಿನಿಂದ ಪಂಜಾಬ್‌ ಕಿಂಗ್ಸ್‌ ತಂಡ 18ನೇ ಆವೃತ್ತಿಯ ಐಪಿಎಲ್‌ನ 13ನೇ ಪಂದ್ಯದಲ್ಲಿ 8 ವಿಕೆಟ್‌ಗಳಿಂದ ಲಖನೌ ಸೂಪರ್ ಜೈಂಟ್ಸ್ ತಂಡವನ್ನು ಸೋಲಿಸಿತು. ಸತತ 2 ಗೆಲುವಿನೊಂದಿಗೆ ಪಂಜಾಬ್‌ ಅಂಕ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದೆ.

- Advertisement -

ಟಾಸ್‌ ಸೋತರೂ ಮೊದಲು ಬ್ಯಾಟ್ ಮಾಡಿದ ಲಖನೌ 20 ಓವರ್‌ಗಳಲ್ಲಿ 7 ವಿಕೆಟ್‌ಗೆ 171 ರನ್‌ ಸೇರಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಎಲ್‌ಎಸ್‌ಜಿ 16.1 ಓವರ್‌ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ172 ರನ್‌ ಸೇರಿಸಿ ಭರ್ಜರಿ ಜಯಗಳಿಸಿತು. ಎಲ್‌ಎಸ್‌ಜಿ ಆಡಿದ 3 ಪಂದ್ಯಗಳಲ್ಲಿ 1 ಗೆಲುವು ದಾಖಲಿಸಿದ್ದು, 2 ಸೋಲು ಕಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

171 ರನ್‌ ಗುರಿಯನ್ನು ಬೆನ್ನಟ್ಟಿದ ಪಂಜಾಬ್ ತಂಡದ ಆರಂಭ ಕಳಪೆಯಾಗಿತ್ತು. ಪ್ರಿಯಾಂಶ್ ಆರ್ಯ ಅವರನ್ನು ದಿಗ್ವೇಶ್ ರಠಿ ಪೆವಿಲಿಯನ್‌ಗೆ ಅಟ್ಟಿದರು. ಎರಡನೇ ವಿಕೆಟ್‌ಗೆ ಪ್ರಭ್‌ಸಿಮ್ರನ್ ಸಿಂಗ್ ಅವರನ್ನು ಸೇರಿಕೊಂಡ ಶ್ರೇಯಸ್ ಅಯ್ಯರ್ ಉತ್ತಮ ಜೊತೆಯಾಟದ ಕಾಣಿಕೆ ನೀಡಿದರು. ಈ ಜೋಡಿಯನ್ನು ಕಟ್ಟಿ ಹಾಕುವಲ್ಲಿ ಎಲ್‌ಎಸ್‌ಜಿ ಬೌಲರ್‌ಗಳು ವಿಫಲರಾದರು. ಈ ಜೋಡಿ 44 ಎಸೆತಗಳಲ್ಲಿ 84 ರನ್‌ ಸಿಡಿಸಿ ಔಟ್ ಆಯಿತು. ಆರಂಭಿಕ ಆಟಗಾರ ಪ್ರಭ್‌ಸಿಮ್ರನ್ 9 ಬೌಂಡರಿ, 3 ಸಿಕ್ಸರ್ ಸಹಾಯದಿಂದ 69 ರನ್‌ ಬಾರಿಸಿ ಔಟ್ ಆದರು.

ಈ ಸುದ್ದಿ ಓದಿದ್ದೀರಾ? ಐಪಿಎಲ್ ಕ್ರಿಕೆಟ್ | ಆಟಗಾರರು, ಅಭಿಮಾನಿಗಳು ಮತ್ತು ಸೋಷಿಯಲ್ ಮೀಡಿಯಾ ಎಂಬ ಕಿಂದರಿಜೋಗಿ

ಮೂರನೇ ವಿಕೆಟ್‌ಗೆ ಶ್ರೇಯಸ್‌ ಅಯ್ಯರ್‌ ಹಾಗೂ ನೆಹಾಲ್ ವಧೀರ್ ಜೋಡಿ ತಂಡಕ್ಕೆ ಬೇಕಿದ್ದ ಅಗತ್ಯ ರನ್‌ಗಳನ್ನು ಕಲೆ ಹಾಕುವಲ್ಲಿ ಸಫಲರಾದರು. ಈ ಜೋಡಿ 37 ಎಸೆತಗಳಲ್ಲಿ ಅಜೇಯ 67 ರನ್‌ ಸಿಡಿಸಿ ತಂಡಕ್ಕೆ ನೆರವಾಯಿತು. ಶ್ರೇಯಸ್ ಅಯ್ಯರ್‌ 3 ಬೌಂಡರಿ, 4 ಸಿಕ್ಸರ್‌ ಸಹಾಯದಿಂದ ಅಜೇಯ 52 ರನ್‌ ಬಾರಿಸಿದರು. ಇದು ಐಪಿಎಲ್‌ನಲ್ಲಿ ಶ್ರೇಯಸ್ ಅವರ ಎರಡನೇ ಅರ್ಧಶತಕವಾಗಿದೆ. ಇನ್ನು 24 ವರ್ಷದ ನೇಹಲ್ ವಧೀರ್ 3 ಬೌಂಡರಿ, 4 ಸಿಕ್ಸರ್ ಸಹಾಯದಿಂದ ಅಜೇಯ 43 ರನ್‌ ಸಿಡಿಸಿ ಅಬ್ಬರಿಸಿದರು.

ಟಾಸ್‌ ಸೋತರೂ ಮೊದಲು ಬ್ಯಾಟ್ ಮಾಡಿದ ಎಲ್‌ಎಸ್‌ಜಿ ತಂಡದ ಆರಂಭ ಕಳಪೆಯಾಗಿತ್ತು. ಆರಂಭಿಕ ಮಿಚೆಲ್ ಮಾರ್ಷ್ ಸೊನ್ನೆ ಸುತ್ತಿದರು. ಐಡೆನ್ ಮಾರ್ಕ್ರಾಮ್ (28 ರನ್) ಹಾಗೂ ನಿಕೋಲಸ್‌ ಪೂರನ್ ಎರಡನೇ ವಿಕೆಟ್‌ಗೆ 19 ಎಸೆತಗಳಲ್ಲಿ 31 ರನ್‌ ಸೇರಿಸಿತು. ನಾಯಕ ರಿಷಭ್‌ ಪಂತ್‌ (2) ನಿರಾಸೆ ಅನುಭವಿಸಿದರು. ಮಧ್ಯಮ ಕ್ರಮಾಂಕದ ಸ್ಟಾರ್ ಆಟಗಾರ ನಿಕೋಲಸ್ ಪೂರನ್ 5 ಬೌಂಡರಿ, 2 ಸಿಕ್ಸರ್ ಸಹಾಯದಿಂದ 44 ರನ್‌ ಸಿಡಿಸಿ ಔಟ್ ಆದರು. ಉಳಿದಂತೆ ಆಯುಷ್ ಬದೋನಿ 41 ರನ್‌, ಅಬ್ದುಲ್‌ ಸಮದ್ 27 ರನ್‌ ಸಿಡಿಸಿ ಔಟ್ ಆದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತಕ್ಕೆ ಚಿನ್ನ ತಂದ ಮಹಿಳೆಯರು: ಏಷ್ಯನ್‌ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್‌ ಕಲಿಗಳ ಸಾಧನೆ

ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ...

ಏಷ್ಯನ್ ಗೇಮ್ಸ್: ಸ್ಕೀಟ್ ಶೂಟಿಂಗ್, ಸಾಫ್ಟ್ ಟೆನಿಸ್‌ನಲ್ಲಿ ಭಾರತಕ್ಕೆ ಕಂಚು; ಪದಕದತ್ತ ಮೀರಾಬಾಯಿ ದಾಪುಗಾಲು

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ ನಾಲ್ಕನೇ ದಿನವಾದ ಬುಧವಾರ...

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...

ಸೋತರೂ ಎಲ್ಲರ ಹೃದಯ ಗೆದ್ದ ಸುಚಿಕಾ: 700 ಗ್ರಾಂ ಹಿನ್ನಡೆಯಿಂದ ತಪ್ಪಿದ ಚಿನ್ನ

ಮಹಿಳೆಯರ ಸಾಂಪ್ರದಾಯಿಕ 60 ಕೆ.ಜಿ ವಿಭಾಗದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ)...