ಟೆಸ್ಟ್‌ ಚಾಂಪಿಯನ್‌ಷಿಪ್‌ ಫೈನಲ್‌ ಪಂದ್ಯಕ್ಕೆ ಭಾರತ ತಂಡ ಪ್ರಕಟ; ಸ್ಟಾರ್‌ ಆಟಗಾರ ಹೊರಕ್ಕೆ

Date:

  • ಐಪಿಎಲ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ  ರಹಾನೆ ತಂಡಕ್ಕೆ ಸೇರ್ಪಡೆ
  • ಲಂಡನ್‌ನ ಓವಲ್‌ನಲ್ಲಿ ನಡೆಯಲಿರುವ ಟೆಸ್ಟ್‌ ಚಾಂಪಿಯನ್‌ಷಿಪ್‌ ಫೈನಲ್‌  

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್‌ ಚಾಂಪಿಯನ್‌ಷಿಪ್‌ ಕ್ರಿಕೆಟ್ ಫೈನಲ್‌ ಪಂದ್ಯಕ್ಕೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಸ್ಟಾರ್‌ ಆಟಗಾರ ಸೂರ್ಯಕುಮಾರ್‌ ಯಾದವ್‌ ಸ್ಥಾನ ಕಳೆದುಕೊಂಡಿದ್ದಾರೆ.  ಐಪಿಎಲ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಅಜಿಂಕ್ಯ ರಹಾನೆ ಅವರನ್ನು ಆಯ್ಕೆ ಸಮಿತಿ ಪರಿಗಣಿಸಿದೆ.

34 ವರ್ಷದ ಅಜಿಂಕ್ಯ ರಹಾನೆ 82 ಟೆಸ್ಟ್‌ ಪಂದ್ಯಗಳನ್ನು ಆಡಿದ್ದು, 2022ರ ಜನವರಿ ನಂತರ ಯಾವುದೇ ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿರಲಿಲ್ಲ. ಕಳಪೆ ಪ್ರದರ್ಶನ ನೀಡಿದ ಕಾರಣ ತಂಡದಿಂದ ಕೈಬಿಡಲಾಗಿತ್ತು. ಪ್ರಸ್ತುತ ಐಪಿಎಲ್‌ 16ನೇ ಆವೃತ್ತಿಯಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್  ಪರ ಅತ್ಯುತ್ತಮ ಆಟವಾಡುತ್ತಿರುವುದು ಆಯ್ಕೆಗೆ ಕಾರಣವಾಗಿದೆ.

ಸೂರ್ಯಕುಮಾರ್‌ ಯಾದವ್‌ ಅವರಲ್ಲದೆ ಆಸ್ಟ್ರೇಲಿಯಾ ವಿರುದ್ಧದ ಮೂರು ಮತ್ತು ನಾಲ್ಕನೇ ಟೆಸ್ಟ್‌ನಲ್ಲಿ ಭಾರತ ತಂಡದಲ್ಲಿದ್ದ ಕುಲ್‌ದೀಪ್‌ ಯಾದವ್‌,ಇಶಾನ್‌ ಕಿಶನ್‌ ಹಾಗೂ ಗಾಯದ ಕಾರಣದಿಂದ ಶ್ರೇಯಸ್‌ ಅಯ್ಯರ್ ಕೂಡ ತಂಡದಿಂದ ಸ್ಥಾನ ಕಳೆದುಕೊಂಡಿದ್ದಾರೆ. ರಹಾನೆ ಜೊತೆಗೆ ಆಲ್‌ರೌಂಡರ್‌ ಶಾರ್ದೂಲ್‌ ಠಾಕೂರ್‌ ಅವರನ್ನು ಫೈನಲ್‌ ಪಂದ್ಯಕ್ಕೆ ಆಯ್ಕೆ ಮಾಡಿಕೊಳ್ಳಲಾಗಿದೆ. ಶ್ರೇಯಸ್‌ ಅಯ್ಯರ್ ಬದಲಿಗೆ ರಹಾನೆ ಅವರಿಗೆ ಸ್ಥಾನ ನೀಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಐಪಿಎಲ್ 2023 | ಸಿಎಸ್‌ಕೆ ಬ್ಯಾಟ್ಸ್‌ಮನ್‌ಗಳ ಅಬ್ಬರಕ್ಕೆ ನಲುಗಿದ ಕೋಲ್ಕತ್ತಾ; ಕೆಕೆಆರ್‌ಗೆ ಸತತ ನಾಲ್ಕನೇ ಸೋಲು

ಪ್ರಸ್ತುತ ಐಪಿಎಲ್‌ ಆವೃತ್ತಿಯಲ್ಲಿ ಸಿಎಸ್‌ಕೆ ಪರ ಆಡಿರುವ ಐದು ಪಂದ್ಯಗಳಲ್ಲಿ 52.25 ಸರಾಸರಿಯೊಂದಿಗೆ 209 ರನ್‌ ದಾಖಲಿಸಿದ್ದಾರೆ. ಅವರ ಬ್ಯಾಟಿಂಗ್‌ ಸ್ಟ್ರೈಕ್‌ ರೇಟ್ 199.04 ಇದೆ. ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್‌ ಚಾಂಪಿಯನ್‌ಷಿಪ್‌ ಫೈನಲ್‌ ಪಂದ್ಯ ಲಂಡನ್‌ನ ಓವಲ್‌ನಲ್ಲಿ ಜೂನ್‌ 7ರಿಂದ 11ರವರೆಗೂ ನಡೆಯಲಿದೆ. ಬಾರ್ಡರ್‌ – ಗವಾಸ್ಕರ್ ಟೆಸ್ಟ್‌ ಚಾಂಪಿಯನ್‌ಷಿಪ್ ಟ್ರೋಫಿಯಲ್ಲಿ  ರೋಹಿತ್‌ ಶರ್ಮಾ ನೇತೃತ್ವದ ಭಾರತ ತಂಡ 2-1ರಲ್ಲಿ ಜಯಗಳಿಸಿತ್ತು.

ಟೆಸ್ಟ್‌ ಚಾಂಪಿಯನ್‌ಷಿಪ್‌ಗೆ ಪ್ರಕಟಿಸಲಾದ ಭಾರತ ತಂಡ;

ರೋಹಿತ್‌ ಶರ್ಮಾ (ನಾಯಕ), ಶುಭಮನ್‌ ಗಿಲ್, ಚೇತೇಶ್ವರ ಪೂಜಾರ,ವಿರಾಟ್‌ ಕೊಹ್ಲಿ,ಅಜಿಂಕ್ಯ ರಹಾನೆ, ಕೆ ಎಲ್‌ ರಾಹುಲ್, ಕೆ ಎಸ್‌ ಭರತ್(ವಿಕೇಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಸರ್‌ ಪಟೇಲ್‌, ಶಾರ್ದೂಲ್‌ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್‌ ಸಿರಾಜ್, ಉಮೇಶ್ ಯಾದವ್, ಜಯದೇವ್‌ ಉನಾದ್ಕತ್

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯಾ ಕಪ್ ಫೈನಲ್ | ಪಂದ್ಯಶ್ರೇಷ್ಠ ಪ್ರಶಸ್ತಿಯ ಮೊತ್ತವನ್ನು ಮೈದಾನದ ಸಿಬ್ಬಂದಿಗಳಿಗೆ ಅರ್ಪಿಸಿದ ಸಿರಾಜ್

ಶ್ರೀಲಂಕಾದ ಕೊಲಂಬೊದ ಆರ್ ಪ್ರೇಮದಾಸ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಏಷ್ಯಾಕಪ್ 2023ರ...

ಏಷ್ಯಾ ಕಪ್ ಫೈನಲ್ | ಸಿರಾಜ್ ಮ್ಯಾಜಿಕ್; 8ನೇ ಬಾರಿಗೆ ಟೀಮ್ ಇಂಡಿಯಾ ಚಾಂಪಿಯನ್

ಶ್ರೀಲಂಕಾದ ಕೊಲಂಬೊದ ಆರ್ ಪ್ರೇಮದಾಸ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಏಷ್ಯಾಕಪ್ 2023ರ...

ಏಷ್ಯಾ ಕಪ್ ಫೈನಲ್ | 50 ರನ್‌ಗೆ ಆಲೌಟಾದ ಶ್ರೀಲಂಕಾ!

ಶ್ರೀಲಂಕಾದ ಕೊಲಂಬೊದ ಆರ್ ಪ್ರೇಮದಾಸ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಏಷ್ಯಾಕಪ್ 2023ರ...

ಏಷ್ಯಾ ಕಪ್ ಫೈನಲ್ | ಒಂದೇ ಓವರ್‌ನಲ್ಲಿ ನಾಲ್ಕು ವಿಕೆಟ್ ಕಬಳಿಸಿದ ಸಿರಾಜ್; ಲಂಕಾಗೆ ಆರಂಭಿಕ ಆಘಾತ

ಶ್ರೀಲಂಕಾದ ಕೊಲಂಬೊದ ಆರ್ ಪ್ರೇಮದಾಸ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಏಷ್ಯಾಕಪ್ 2023ರ...