ಐಪಿಎಲ್ 2023 |ರಹಾನೆ ಸ್ಫೋಟಕ ಆಟ, ಮುಂಬೈಗೆ ಸೋಲಿನ ಪಾಠ

Date:

ಅಜಿಂಕ್ಯಾ ರಹಾನೆ ಅವರ ಅದ್ಘುತ ಬ್ಯಾಟಿಂಗ್‌ನಿಂದಾಗಿ ಐಪಿಎಲ್ 16 ಆವೃತ್ತಿಯ 12ನೇ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ ಮುಂಬೈ ಇಂಡಿಯನ್ಸ್ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಜಯ ಪಡೆಯಿತು.

- Advertisement -

ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಮುಂಬೈ ನೀಡಿದ 159 ರನ್​ಗಳ ಸಾಧಾರಣ ಗುರಿ ಬೆನ್ನಟ್ಟಿದ ಚೆನ್ನೈ ಸೂಪರ್ ಕಿಂಗ್ಸ್ 18.1 ಓವರ್​ಗಳಲ್ಲಿ 3 ವಿಕೆಟ್​ ನಷ್ಟಕ್ಕೆ ಗೆಲುವು ದಾಖಲಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಅಜಿಂಕ್ಯ ರಹಾನೆ ಹಿಂದೆಂದೂ ಕಾಣದ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದರು. 225ರ ಸ್ಟ್ರೈಕ್ ರೇಟ್‌ನಲ್ಲಿ ರಹಾನೆ ಅಬ್ಬರಿಸಿದರು. ಅತೀ ವೇಗದಲ್ಲಿ ಅರ್ಧಶತಕ ಸಿಡಿಸಿ ಚೆನ್ನೈ ತಂಡದ ಹಾದಿ ಸುಗಮಗೊಳಿಸಿದರು. 7 ಬೌಂಡರಿ 3 ಸಿಕ್ಸರ್ ಮೂಲಕ 27 ಎಸೆತದಲ್ಲಿ 61 ರನ್ ಸಿಡಿಸಿದರು.

ರಹಾನೆ ಅಬ್ಬರ, ರುತುರಾತ್ ಗಾಯಕ್ವಾಡ್ 40 (36 ಎಸೆತ, 2 ಬೌಂಡರಿ, ಒಂದು ಸಿಕ್ಸರ್) ಎಚ್ಚರಿಕೆ ಬ್ಯಾಟಿಂಗ್‌ನಿಂದ ಚೆನ್ನೈ ಸೂಪರ್ ಕಿಂಗ್ಸ್ ಟೂರ್ನಿಯ ಎರಡನೇ ಜಯ ದಾಖಲಿಸಿದೆ.

ಈ ಮೊದಲು ಟಾಸ್ ಸೋತು ಬ್ಯಾಟಿಂಗ್ ಇಳಿದ ಮುಂಬೈ ಇಂಡಿಯನ್ಸ್ ಆರಂಭಿಕ ಹಂತದಲ್ಲಿ ಕುಸಿಯತೊಡಗಿತು. ಸೂರ್ಯಕುಮಾರ್ ಯಾದವ್ ಕೇವಲ 1 ರನ್‌ಗೆ ಔಟಾದರು. ಇತ್ತ ಕ್ಯಾಮರೂನ್ ಗ್ರೀನ್ 12 ರನ್ ಗಳಿಸಿದಾಗ ಪೆವಿಲಿಯನ್‌ಗೆ ತೆರಳಿದರು. 73 ರನ್‌ಗೆ ಮುಂಬೈ ಇಂಡಿಯನ್ಸ್ ಪ್ರಮುಖ 4 ವಿಕೆಟ್ ಕಳೆದುಕೊಂಡಿತು. ಟಿಮ್ ಡೇವಿಡ್ (31) ಹಾಗೂ ಇಶಾನ್‌ ಕಿಶನ್‌ (32) ಅವರ ಸಣ್ಣ ಹೋರಾಟದೊಂದಿಗೆ ರೋಹಿತ್‌ ಶರ್ಮಾ ಪಡೆ 8 ವಿಕೆಟ್ ನಷ್ಟಕ್ಕೆ 157 ರನ್ ಮಾತ್ರ ಗಳಿಸಿತು.

blank profile picture 973460 640
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...

ಏಷ್ಯನ್ ಗೇಮ್ಸ್: ಬಿಲ್ಲುಗಾರಿಕೆಯಲ್ಲಿ ಇತಿಹಾಸ ಬರೆದ 17 ವರ್ಷದ ಕುಂಕುಮ್‌ಗೆ ಬಂಗಾರ!

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನ 15ನೇ ದಿನ...