ರಾಹುಲ್ ದ್ರಾವಿಡ್‌ ದಾಖಲೆ ಮುರಿದ ಕುಲ್‌ದೀಪ್‌ ಯಾದವ್

Date:

ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಬರೋಬ್ಬರಿ 134 ಎಸೆತಗಳನ್ನು ಎದುರಿಸಿ ಕುಲ್‌ದೀಪ್ ಯಾದವ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ರಾಹುಲ್ ದ್ರಾವಿಡ್ ಅವರ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದಿದ್ದಾರೆ.

- Advertisement -

ಗುವಾಹಟಿಯಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಕುಲ್‌ದೀಪ್‌ ಯಾದವ್ ಬರೋಬ್ಬರಿ 134 ಎಸೆತಗಳನ್ನು ಎದುರಿಸಿದ್ದಾರೆ. ಈ ವೇಳೆ ಅವರು ಕಲೆಹಾಕಿದ್ದು 19 ರನ್​ಗಳು ಮಾತ್ರ. ಇದರೊಂದಿಗೆ ತವರಿನ ಟೆಸ್ಟ್​​ನಲ್ಲಿ 100 ಎಸೆತಗಳನ್ನು ಎದುರಿಸಿ ಅತೀ ಕಡಿಮೆ ಸ್ಟ್ರೈಕ್ ರೇಟ್ ಹೊಂದಿದ ಆಟಗಾರ ಎಂಬ ದಾಖಲೆ ಕುಲ್‌ದೀಪ್‌ ಯಾದವ್ ಪಾಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದಕ್ಕೂ ಮುನ್ನ ಟೆಸ್ಟ್‌ನಲ್ಲಿ ಇಂತಹದೊಂದು ಆಟ ಪ್ರದರ್ಶಿಸಿದ್ದು ಸ್ಟಾರ್‌ ಆಟಗಾರರಾಗಿದ್ದ ರಾಹುಲ್ ದ್ರಾವಿಡ್. 2004 ರಲ್ಲಿ ನಾಗ್ಪುರದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ರಾಹುಲ್ ದ್ರಾವಿಡ್ ಬರೋಬ್ಬರಿ 140 ಎಸೆತಗಳನ್ನು ಎದುರಿಸಿ ಕೇವಲ 21 ರನ್ ಕಲೆಹಾಕಿದ್ದರು. ಈ ಮೂಲಕ ತವರಿನ ಟೆಸ್ಟ್ ಪಂದ್ಯದಲ್ಲಿ 100 ಎಸೆತಗಳನ್ನು ಎದುರಿಸಿ ಅತೀ ಕಡಿಮೆ ಸ್ಟ್ರೈಕ್ ಪ್ರದರ್ಶಿಸಿದ ಬ್ಯಾಟರ್ ಎನಿಸಿಕೊಂಡಿದ್ದರು.

ಇದನ್ನು ಓದಿದ್ದೀರಾ? ಮೀಸಲಾತಿ ಆಟಗಾರʼ ಎಂದು ಹಂಗಿಸಿದವರಿಗೆ ಗೆಲುವಿನ ಉತ್ತರ ಕೊಟ್ಟ ತೆಂಬಾ ಬವುಮಾ

ಇದೀಗ ಈ ದಾಖಲೆಯನ್ನು ಕುಲ್‌ದೀಪ್‌ ಯಾದವ್ ಮುರಿದಿದ್ದಾರೆ. ಗುವಾಹಟಿಯಲ್ಲಿ ದಕ್ಷಿಣ ಆಫ್ರಿಕಾ ಬೌಲರ್​ಗಳನ್ನು ಕಾಡಿದ ಕುಲ್‌ದೀಪ್ ಬರೋಬ್ಬರಿ 134 ಎಸೆತಗಳನ್ನು ಎದುರಿಸಿ 14.17 ಸ್ಟ್ರೈಕ್ ರೇಟ್​​ನಲ್ಲಿ ಕೇವಲ 19 ರನ್​ಗಳಿಸಿದ್ದಾರೆ. ಈ ಮೂಲಕ ಭಾರತದಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ 100 ಎಸೆತಗಳನ್ನು ಎದುರಿಸಿ ಅತೀ ಕಡಿಮೆ ಸ್ಟ್ರೈಕ್ ರೇಟ್ ಹೊಂದಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇಲ್ಲಿ ಮತ್ತೊಂದು ಕುತೂಹಲಕಾರಿ ವಿಷಯ ಎಂದರೆ ಈ ಪಂದ್ಯದಲ್ಲಿ ಕುಲ್‌ದೀಪ್‌ ಯಾದವ್ ಅವರನ್ನು ಹೊರತುಪಡಿಸಿ ಭಾರತದ ಯಾವುದೇ ಬ್ಯಾಟರ್ 100 ಎಸೆತಗಳನ್ನು ಎದುರಿಸಿಲ್ಲ ಎಂಬುದು ವಿಶೇಷ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹ್ಯಾಟ್ರಿಕ್ ಗೆಲುವಿನ ಬೆನ್ನಲ್ಲೇ ನಾಯಕತ್ವಕ್ಕೆ ವಿದಾಯ: ದಿಟ್ಟ ನಿರ್ಧಾರದೊಂದಿಗೆ ನಿರ್ಗಮಿಸಿದ ಹರ್ಮನ್‌ಪ್ರೀತ್ ಕೌರ್

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಸ್ಥಾನದಿಂದ ಕೆಳಗಿಳಿಯುತ್ತಿರುವುದಾಗಿ ಹರ್ಮನ್‌ಪ್ರೀತ್ ಕೌರ್...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವ್ಯಕ್ತಿಗತ ಚಿನ್ನದ ಕೊರತೆ; ಒಲಿಂಪಿಕ್ಸ್‌ಗೆ ಎಚ್ಚರಿಕೆಯ ಗಂಟೆ

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ...

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...