ಟೀಂ ಇಂಡಿಯಾ ಕೋಚ್ ಆಗಿ ರಾಹುಲ್ ದ್ರಾವಿಡ್ ಮುಂದುವರಿಕೆ

Date:

ರಾಹುಲ್‌ ದ್ರಾವಿಡ್‌ ಅವರನ್ನು ಭಾರತ ಪುರುಷರ ಕ್ರಿಕೆಟ್ ತಂಡದ ಮುಖ್ಯ ಕೋಚ್‌ ಆಗಿ ಮುಂದುವರೆಸುವುದಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಪ್ರಕಟಣೆ ತಿಳಿಸಿದೆ.

- Advertisement -

ರಾಹುಲ್‌ ದ್ರಾವಿಡ್‌ ಜೊತೆಗೆ ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋರ್, ಬೌಲಿಂಗ್ ಕೋಚ್ ಪಾರಸ್ ಮಾಂಬ್ರೆ ಮತ್ತು ಫೀಲ್ಡಿಂಗ್ ಕೋಚ್ ಟಿ ದಿಲೀಪ್ ಸೇರಿದಂತೆ ಭಾರತದ ಸಹಾಯಕ ಸಿಬ್ಬಂದಿಯ ಗುತ್ತಿಗೆಯನ್ನು ಬಿಸಿಸಿಐ ವಿಸ್ತರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಬಿಸಿಸಿಐ ಒಪ್ಪಂದದ ಅವಧಿಯನ್ನು ನಿರ್ದಿಷ್ಟಪಡಿಸಿಲ್ಲ, ಆದರೆ ದ್ರಾವಿಡ್ ಕನಿಷ್ಠ 2024ರ ಟಿ20 ವಿಶ್ವಕಪ್ ವರೆಗೆ ಮುಂದುವರಿಯುವ ನಿರೀಕ್ಷೆಯಿದೆ.

2023 ರ ಏಕದಿನ ವಿಶ್ವಕಪ್ ಮುಕ್ತಾಯದೊಂದಿಗೆ ಈ ತಿಂಗಳ ಆರಂಭದಲ್ಲಿ ಅವರ ಕೋಚ್ ಗುತ್ತಿಗೆಯ ಅವಧಿ ಎರಡು ವರ್ಷಕ್ಕೆ ಮುಕ್ತಾಯಗೊಂಡಿತ್ತು. ದ್ರಾವಿಡ್ ಅವರನ್ನು ನವೆಂಬರ್ 2021 ರಲ್ಲಿ ಮುಖ್ಯ ಕೋಚ್ ಆಗಿ ನೇಮಿಸಲಾಯಿತು. ದ್ರಾವಿಡ್ ಅವರ ಕೋಚಿಂಗ್ ಅವಧಿಯಲ್ಲಿ ಭಾರತವು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಮತ್ತು ಏಕದಿನ ವಿಶ್ವಕಪ್ ಎರಡರಲ್ಲೂ ರನ್ನರ್ ಅಪ್ ಸ್ಥಾನವನ್ನು ಗಳಿಸಿತ್ತು. ಅಲ್ಲದೆ ಕಳೆದ ಎರಡು ವರ್ಷಗಳಲ್ಲಿ  ಟೀಂ ಇಂಡಿಯಾ ಉತ್ತಮ ದಾಖಲೆಯನ್ನು ಹೊಂದಿದೆ.

”ರಾಹುಲ್ ದ್ರಾವಿಡ್ ಅವರ ದೂರದೃಷ್ಟಿ, ವೃತ್ತಿಪರತೆ ಮತ್ತು ಪಟ್ಟುಬಿಡದ ಪ್ರಯತ್ನಗಳು ಟೀಮ್ ಇಂಡಿಯಾದ ಯಶಸ್ಸಿನಲ್ಲಿ ಪ್ರಮುಖ ಆಧಾರಸ್ತಂಭಗಳಾಗಿವೆ. ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ, ನೀವು ಯಾವಾಗಲೂ ಅಪಾರ ಸೂಕ್ಷ್ಮ ಪರಿಶೀಲನೆಗೆ ಒಳಪಡುತ್ತೀರಿ ಮತ್ತು ಸವಾಲುಗಳನ್ನು ಸ್ವೀಕರಿಸುವುದು ಮಾತ್ರವಲ್ಲದೆ ತಂಡವನ್ನು ಪ್ರವರ್ಧಮಾನಗೊಳಿಸುವುದಕ್ಕೆ ನಾನು ಅವರಿಗೆ ಮೆಚ್ಚುಗೆಯನ್ನು ವ್ಯಕ್ತಪಡಿಸುತ್ತೇನೆ. ಭಾರತೀಯ ತಂಡದ ಪ್ರದರ್ಶನಗಳು ಅವರ ಕಾರ್ಯತಂತ್ರದ ಮಾರ್ಗದರ್ಶನಕ್ಕೆ ಸಾಕ್ಷಿಯಾಗಿದೆ. ಅವರು ಮುಖ್ಯ ಕೋಚ್ ಆಗಿ ಉಳಿಯುವ ಪ್ರಸ್ತಾಪವನ್ನು ಸ್ವೀಕರಿಸಿದ್ದಕ್ಕಾಗಿ ನನಗೆ ಸಂತೋಷವಾಗಿದೆ” ಎಂದು ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಆಸೀಸ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ: ಟೀಮ್ ಇಂಡಿಯಾ ಪರ ಮೂವರ ಅರ್ಧ ಶತಕ

ಕೋಚ್‌ ಆಗಿ ಮುಂದುವರೆಸಿರುವ ಬಗ್ಗೆ ಹೇಳಿಕೆ ನೀಡಿರುವ ರಾಹುಲ್ ದ್ರಾವಿಡ್, “ಕಳೆದ ಎರಡು ವರ್ಷಗಳು ಟೀಂ ಇಂಡಿಯಾ ಜೊತೆಗೆ ಕಳೆದ ಕ್ಷಣಗಳು ಸ್ಮರಣೀಯವಾಗಿದೆ. ಪ್ರಯಾಣದ ಉದ್ದಕ್ಕೂ ನಾವು ಒಟ್ಟಿಗೆ ಸೋಲು ಮತ್ತು ಗೆಲುವುಗಳಿಗೆ ಸಾಕ್ಷಿಯಾಗಿದ್ದೇವೆ. ತಂಡ ನೀಡಿರುವ ಬೆಂಬಲ ಮತ್ತು ಸೌಹಾರ್ದತೆಯು ಅಸಾಧಾರಣವಾಗಿದೆ. ಡ್ರೆಸ್ಸಿಂಗ್‌ ರೂಮಿನಲ್ಲಿ ಒಂದು ಶಿಸ್ತನ್ನು ಅಳವಡಿಸಿಕೊಂಡಿದ್ದಕ್ಕೆ ನನಗೆ ನಿಜವಾಗಿಯೂ ಹೆಮ್ಮೆಯಿದೆ. ಇದು ಗೆಲುವಿನ ಅಥವಾ ಪ್ರತಿಕೂಲದ ಕ್ಷಣಗಳಲ್ಲಿ ಚೇತರಿಸಿಕೊಳ್ಳುವ ಒಂದು ಸಂಸ್ಕೃತಿಯಾಗಿದೆ. ನಮ್ಮ ತಂಡ ಹೊಂದಿರುವ ಕೌಶಲ್ಯ ಮತ್ತು ಪ್ರತಿಭೆ ಅಸಾಧಾರಣವಾಗಿದೆ. ಸರಿಯಾದದನ್ನು ಅನುಸರಿಸುತ್ತೇವೆ ಎಂಬ ಪ್ರಕ್ರಿಯೆ ಮತ್ತು ನಮ್ಮ ಸಿದ್ಧತೆಗಳಿಗೆ ಅಂಟಿಕೊಳ್ಳುವುದು, ಒಟ್ಟಾರೆ ಫಲಿತಾಂಶದ ಮೇಲೆ ನೇರ ಪರಿಣಾಮ ಬೀರುತ್ತದೆ” ಎಂದು ಹೇಳಿದರು.

“ಈ ಅವಧಿಯಲ್ಲಿ ನನ್ನ ಮೇಲೆ ನಂಬಿಕೆ ಇಟ್ಟಿದ್ದಕ್ಕಾಗಿ, ನನ್ನ ದೃಷ್ಟಿಕೋನವನ್ನು ಅನುಮೋದಿಸಿ ಬೆಂಬಲ ನೀಡಿದಕ್ಕಾಗಿ ಬಿಸಿಸಿಐ ಮತ್ತು ಆಡಳಿತ ಮಂಡಳಿಗೆ ಧನ್ಯವಾದ ತಿಳಿಸುತ್ತೇನೆ. ಇದರ ಜೊತೆಗೆ ನನ್ನ ಕುಟುಂಬದ ತ್ಯಾಗ ಮತ್ತು ಬೆಂಬಲವನ್ನು ಕೂಡ ನಾನು ಪ್ರಶಂಸಿಸುತ್ತೇನೆ. ವಿಶ್ವಕಪ್ ನಂತರ ನಾವು ಹೊಸ ಸವಾಲುಗಳನ್ನು ಸ್ವೀಕರಿಸುತ್ತಿದ್ದಂತೆ,  ಶ್ರೇಷ್ಠತೆಯ ಅನ್ವೇಷಣೆಗೂ ಬದ್ಧರಾಗಿರುತ್ತೇವೆ” ಎಂದು ದ್ರಾವಿಡ್ ತಿಳಿಸಿದ್ದಾರೆ.

ಇತ್ತೀಚೆಗೆ ಮುಕ್ತಾಯಗೊಂಡ ಐಸಿಸಿ ಪುರುಷರ ಏಕದಿನ ವಿಶ್ವಕಪ್ ನಂತರ ಅವರ ಒಪ್ಪಂದದ ಅವಧಿಯನ್ನು ಮುಂದುವರೆಸುವ ಬಗ್ಗೆ ಬಿಸಿಸಿಐ ನಿರಂತರ ಚರ್ಚೆಯಲ್ಲಿ ತೊಡಗಿ ಅಧಿಕಾರಾವಧಿಯನ್ನು ಮುಂದುವರಿಸಲು ಸರ್ವಾನುಮತದಿಂದ ಒಪ್ಪಿಕೊಂಡಿತು.

ಎರಡನೇ ಅವಧಿಯ ಭಾರತದ ಮುಖ್ಯ ತರಬೇತುದಾರರಾಗಿ ದ್ರಾವಿಡ್ ಅವರಿಗೆ ಡಿಸೆಂಬರ್‌ನಿಂದ ದಕ್ಷಿಣ ಆಫ್ರಿಕಾದ ಪ್ರವಾಸ ಶುರುವಾಗಲಿದೆ. ಇದು ಡಿಸೆಂಬರ್ 10 ರಿಂದ ಮೂರು ಟಿ20, ಮೂರು ಏಕದಿನ ಮತ್ತು ಎರಡು ಟೆಸ್ಟ್‌ ಪಂದ್ಯಗಳು ನಡೆಯಲಿವೆ. ಅದರ ನಂತರ, ಜೂನ್‌ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೆ ಮೊದಲು ಭಾರತ ತಂಡ ಇಂಗ್ಲೆಂಡ್ ವಿರುದ್ಧ ಐದು ಟೆಸ್ಟ್‌ಗಳ ಸರಣಿಯನ್ನು ಆಡಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತಕ್ಕೆ ಚಿನ್ನ ತಂದ ಮಹಿಳೆಯರು: ಏಷ್ಯನ್‌ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್‌ ಕಲಿಗಳ ಸಾಧನೆ

ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ...

ಏಷ್ಯನ್ ಗೇಮ್ಸ್: ಸ್ಕೀಟ್ ಶೂಟಿಂಗ್, ಸಾಫ್ಟ್ ಟೆನಿಸ್‌ನಲ್ಲಿ ಭಾರತಕ್ಕೆ ಕಂಚು; ಪದಕದತ್ತ ಮೀರಾಬಾಯಿ ದಾಪುಗಾಲು

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ ನಾಲ್ಕನೇ ದಿನವಾದ ಬುಧವಾರ...

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...

ಸೋತರೂ ಎಲ್ಲರ ಹೃದಯ ಗೆದ್ದ ಸುಚಿಕಾ: 700 ಗ್ರಾಂ ಹಿನ್ನಡೆಯಿಂದ ತಪ್ಪಿದ ಚಿನ್ನ

ಮಹಿಳೆಯರ ಸಾಂಪ್ರದಾಯಿಕ 60 ಕೆ.ಜಿ ವಿಭಾಗದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ)...