ಇಂಗ್ಲೆಂಡ್ ವಿರುದ್ಧದ ಟೆಸ್ಟ್ | ಭಾರತ 421/7; 175 ರನ್ ಮುನ್ನಡೆ

Date:

ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಭಾರತ ತಂಡ ಮೊದಲ ಇನಿಂಗ್ಸ್‌ನಲ್ಲಿ ಎರಡನೇ ದಿನದ ಅಂತ್ಯಕ್ಕೆ 110 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 421 ರನ್‌ ಗಳಿಸಿದ್ದು, 175 ಮುನ್ನಡೆ ಸಾಧಿಸಿದೆ.

- Advertisement -

ಹೈದರಾಬಾದ್‌ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಎರಡನೇ ದಿನ ಟೀಂ ಇಂಡಿಯಾ ಬ್ಯಾಟ್ಸ್‌ಮನ್‌ಗಳು ಪಾರಮ್ಯ ಮೆರೆದರು. ಕೆ ಎಲ್ ರಾಹುಲ್(86) ಹಾಗೂ ಆಲ್‌ರೌಂಡರ್‌ ರವೀಂದ್ರ ಜಡೇಜಾ(81) ಅರ್ಧ ಶತಕ ಬಾರಿಸಿದರೆ, ವಿಕೆಟ್ ಕೀಪರ್ ಶ್ರೀಕರ್ ಭರತ್ 41, ಅಕ್ಸರ್ ಪಟೇಲ್ 35 ಹಾಗೂ ಶ್ರೇಯಸ್ ಅಯ್ಯರ್ 35 ರನ್‌ ಗಳಿಸಿ ಭಾರತ ಬೃಹತ್ ಮೊತ್ತದತ್ತ ದಾಪುಗಾಲು ಹಾಕಲು ಕಾರಣರಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

119/1 ರನ್‌ನೊಂದಿಗೆ ಎರಡನೇ ದಿನದಾಟವನ್ನು ಆರಂಭಿಸಿದ ಟೀಂ ಇಂಡಿಯಾ ಪ್ರಾರಂಭದಲ್ಲಿಯೇ ಜೈಸ್ವಾಲ್ (80) ಹಾಗೂ ಶುಭಮನ್‌ ಗಿಲ್ (23) ಅವರ ವಿಕೆಟ್ ಕಳೆದುಕೊಂಡಿತು. ಕೆ ಎಲ್ ರಾಹುಲ್ ಹಾಗೂ ಶ್ರೇಯಸ್‌ ಅಯ್ಯರ್ 4ನೇ ವಿಕೆಟ್ ನಷ್ಟಕ್ಕೆ 64 ರನ್‌ ಕಲೆ ಹಾಕಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಎಲ್ಲರನ್ನೂ ಒಳಗೊಳ್ಳದಿದ್ದರೆ ‘ಗಣರಾಜ್ಯ’ ಹೇಗಾಗುತ್ತದೆ?

ಶ್ರೇಯಸ್ ಔಟಾದ ನಂತರ ರವೀಂದ್ರ ಜಡೇಜಾ ಅವರೊಂದಿಗೆ ಜೊತೆಯಾಟವಾಡಿದ ಕೆ ಎಲ್ ರಾಹುಲ್ 86 ರನ್‌ ಗಳಿಸಿ ಪೆವಿಲಿಯನ್‌ಗೆ ತೆರಳಿದರು. ನಂತರ ಬಂದ ವಿಕೆಟ್ ಕೀಪರ್ ಶ್ರೀಕರ್ ಭರತ್ 41 ರನ್‌ ಬಾರಿಸಿ ರೂಟ್‌ಗೆ ಎಲ್‌ಬಿ ಆದರು.

ನಂತರದಲ್ಲಿ ಅನಾವಶ್ಯಕ ರನ್‌ ಓಡಲು ಪ್ರಯತ್ನಿಸಿದ ಆರ್‌ ಅಶ್ವಿನ್ 1 ರನ್‌ಗೆ ಔಟಾದರು. ಜಡೇಜಾ ಹಾಗೂ ಅಕ್ಸರ್ ಪಟೇಲ್ 8ನೇ ವಿಕೆಟ್ ಜೊತೆಯಾಟದಲ್ಲಿ 64 ರನ್ ಬಾರಿಸಿದ್ದಾರೆ.

ಇಂಗ್ಲೆಂಡ್ ಪರ ಜೋರೂಟ್ 77/2, ಟಾಮ್‌ ಹಾರ್ಟ್ಲ್ 131/2, ಲೀಚ್‌ ಹಾಗೂ ರಿಯಾನ್ ಅಹಮದ್‌ ತಲಾ ಒಂದು ವಿಕೆಟ್ ಕಬಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮನೆಯಲ್ಲಿ ಸ್ಮಾರ್ಟ್‌ಫೋನ್, ಟಿವಿ ಇಲ್ಲ: ಬಡತನ ಮೆಟ್ಟಿ ನಿಂತು ಏಷ್ಯಾಡ್‌ನಲ್ಲಿ ಚಿನ್ನ ಗೆದ್ದ ನೀರು ದಂಡಾ

ಮನೆಯಲ್ಲಿ ಸ್ಮಾರ್ಟ್‌ಫೋನ್, ಟಿವಿ ಸೇರಿದಂತೆ ಯಾವೊಂದು ಸೌಕರ್ಯವೂ ಇಲ್ಲ. ಕೈಯಲ್ಲಿ ಬಿಪಿಎಲ್...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ...

ವಿರಾಟ್ ‘ವಿಶ್ವ’ರೂಪ: 15 ಸಾವಿರ ರನ್ ಗಡಿ ದಾಟಿ ಸಚಿನ್ ದಾಖಲೆ ಹಿಂದಿಕ್ಕಿದ ಕೊಹ್ಲಿ

ಕೇರಳದ ತಿರುವನಂತಪುರದಲ್ಲಿರುವ ಗ್ರೀನ್‌ಫೀಲ್ಡ್‌ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ವೆಸ್ಟ್ ಇಂಡೀಸ್...