ಐಪಿಎಲ್ 2023 | ಪಂಜಾಬ್‌ ಹ್ಯಾಟ್ರಿಕ್‌ ಗೆಲುವಿಗೆ ಅಡ್ಡಿಯಾದ ರಾಹುಲ್‌ ತ್ರಿಪಾಠಿ ಆರ್ಭಟ

Date:

ರಾಹುಲ್‌ ತ್ರಿಪಾಠಿ ಅವರ ಸ್ಫೋಟಕ ಬ್ಯಾಟಿಂಗ್‌ ಹಾಗೂ ನಾಯಕ ಐಡೆನ್ ಮಾರ್ಕ್ರಾಮ್ ಅವರ ಸಮಯೋಚಿತ ಆಟದಿಂದ ಸನ್‌ರೈಸರ್ಸ್ ಹೈದರಾಬಾದ್ ತಂಡ ಪಂಜಾಬ್‌ ಕೆಂಗ್ಸ್‌ ಹ್ಯಾಟ್ರಿಕ್‌ ಗೆಲುವಿಗೆ ತಡೆ ನೀಡಿ 8 ವಿಕೆಟ್‌ಗಳ ಭರ್ಜರಿ ಜಯ ಪಡೆಯಿತು.

ಹೈದರಾಬಾದಿನ ರಾಜೀವ್‌ ಗಾಂಧಿ ಇಂಟರ್‌ನ್ಯಾಷನಲ್‌ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ 16ನೇ ಟೂರ್ನಿಯ 14ನೇ ಪಂದ್ಯದಲ್ಲಿ ಪಂಜಾಬ್‌ ನೀಡಿದ್ದ 144 ರನ್‌ಗಳ ಮೊತ್ತವನ್ನು ಬೆನ್ನಟ್ಟಿದ ಹೈದರಾಬಾದ್‌ ತಂಡ 17.1 ಓವರ್‌ಗಳಲ್ಲೇ 2 ವಿಕೆಟ್ ನಷ್ಟಕ್ಕೆ ಗುರಿ ಮುಟ್ಟಿತು.

ರಾಹುಲ್‌ ತ್ರಿಪಾಠಿ 48 ಚೆಂಡುಗಳಲ್ಲಿ 10 ಬೌಂಡರಿ ಮೂರು ಸಿಕ್ಸರ್‌ನೊಂದಿಗೆ ಅಜೇಯ 74 ರನ್‌ ಹಾಗೂ ನಾಯಕ ಐಡೆನ್ ಮಾರ್ಕ್ರಾಮ್ 21 ಎಸೆತಗಳಲ್ಲಿ 6 ಆಕರ್ಷಕ ಬೌಂಡರಿಯೊಂದಿಗೆ 37 ರನ್‌ ಗಳಿಸಿ ಗೆಲುವಿನ ರೂವಾರಿಗಳಾದರು. ಪಂಜಾಬ್‌ಗೆ ಇದು ಮೊದಲ ಸೋಲಾದರೆ, ಟೂರ್ನಿಯಲ್ಲಿ ಎರಡು ಸೋಲುಗಳಿಂದ ಕಂಗೆಟ್ಟಿದ್ದ ಹೈದರಾಬಾದ್‌ ತಂಡ ಪ್ರಥಮ ಗೆಲುವು ದಾಖಲಿಸಿತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಧವನ್‌ ಏಕಾಂಗಿ ಹೋರಾಟ; ಪಂಜಾಬ್‌ ಗೌರವಾನ್ವಿತ ಮೊತ್ತ

ಟಾಸ್ ಸೋತು ಬ್ಯಾಟಿಂಗ್ ಇಳಿದ ಪಂಜಾಬ್ ಕಿಂಗ್ಸ್ ಮೊದಲ ಎಸೆತದಲ್ಲೇ ವಿಕೆಟ್ ಕಳೆದುಕೊಂಡಿತು. ಹೈದರಾಬಾದ್‌ ಬೌಲಿಂಗ್‌ ದಾಳಿಗೆ ಪಂಜಾಬ್ ಬ್ಯಾಟ್ಸ್‌ಮನ್‌ಗಳು ಕ್ರೀಸ್‌ಗೆ ಬಂದಷ್ಟೇ ವೇಗದಲ್ಲಿ ಪೆವಿಲಿಯನ್‌ ಕಡೆ ಹೋಗುತ್ತಿದ್ದರು. ಆದರೆ ತಂಡಕ್ಕೆ ಆಸರೆಯಾಗಿದ್ದು ನಾಯಕ ಶಿಖರ್ ಧವನ್. ವಿಕೆಟ್ ಪತನದ ನಡುವೆಯೂ ಶಿಖರ್ ಧವನ್ 66 ಎಸೆತದಲ್ಲಿ 12 ಬೌಂಡರಿ ಹಾಗೂ 5 ಭರ್ಜರಿ ಸಿಕ್ಸರ್‌ನೊಂದಿಗೆ ಅಜೇಯ 99 ರನ್ ಸಿಡಿಸಿದರು. ಈ ಮೂಲಕ ಪಂಜಾಬ್ ಕಿಂಗ್ಸ್  20 ಓವರ್‌ಗಳಲ್ಲಿ ಗೌರವಾನ್ವಿತ 143 ರನ್‌ ಗಳಿಸಿತು.

ಹೈದರಾಬಾರ್‌ ಪರ ಮಾಯಾಂಕ್‌ ಮಾರ್ಕಂಡೆ 15/4, ಮಾರ್ಕೋ ಜಾನ್‌ಸೇನ್‌ 16/2 ಹಾಗೂ ಉಮ್ರಾನ್‌ ಮಲ್ಲಿಕ್ 32/2 ವಿಕೆಟ್ ಪಡೆಯುವ ಮೂಲಕ ಯಶಸ್ವಿ ಬೌಲರ್‌ಗಳಾದರು.

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಪಿಎಲ್ | ‘ಮ್ಯಾಚ್ ವಿನ್ನರ್’ ಆದ ದಿನೇಶ್ ಕಾರ್ತಿಕ್: ಆರ್‌ಸಿಬಿಗೆ ರೋಚಕ ಜಯ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆದ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ದಿನೇಶ್...

ಐಪಿಎಲ್ | ಅಲ್‌ಝಾರಿ ಜೋಸೆಫ್ ದುಬಾರಿ ಬೌಲಿಂಗ್; ಆರ್‌ಸಿಬಿಗೆ ಗೆಲ್ಲಲು 177 ರನ್‌ಗಳ ಗುರಿ ನೀಡಿದ ಪಂಜಾಬ್

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್‌ನ 6ನೇ ಪಂದ್ಯವು ರಾಯಲ್ ಚಾಲೆಂಜರ್ಸ್‌...

ಐಪಿಎಲ್ ಸಂಪೂರ್ಣ ವೇಳಾಪಟ್ಟಿ ಪ್ರಕಟ: ಫೈನಲ್ ಪಂದ್ಯ ದಕ್ಷಿಣ ಭಾರತದಲ್ಲಿ ಆಯೋಜನೆ

ಬಿಸಿಸಿಐ ಇಂದು ಐಪಿಎಲ್‌ 2024ರ ಎರಡನೇ ಆವೃತ್ತಿಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ....

ಐಪಿಎಲ್ | ಉಮೇಶ್ ಯಾದವ್ ಸಾಹಸ: ಮುಂಬೈ ವಿರುದ್ಧ ಗುಜರಾತ್‌ಗೆ 6 ರನ್‌ಗಳ ರೋಚಕ ಜಯ

ಗುಜರಾತ್‌ನ ಅಹ್ಮದಾಬಾದ್‌ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್‌ನ 5ನೇ...