ಐಪಿಎಲ್ 2023 | ಪಂಜಾಬ್‌ ವಿರುದ್ಧ ಗೆದ್ದ ಆರ್‌ಆರ್‌ಗೆ ಪ್ಲೇಆಫ್‌ ಆಸೆ ಜೀವಂತ

Date:

ದೇವದತ್ ಪಡಿಕ್ಕಲ್,ಯಶಸ್ವಿ ಜೈಸ್ವಾಲ್ ಅವರ ಆಕರ್ಷಕ ಅರ್ಧ ಶತಕ ಹಾಗೂ ಶಿಮ್ರಾನ್ ಹೆಟ್ಮೆಯರ್ ಹಾಗೂ ರಿಯಾನ್‌ ಪರಾಗ್‌ ಅವರ ಸ್ಫೋಟಕ ಬ್ಯಾಟಿಂಗ್‌ ನೆರವಿನಿಂದ ರಾಜಸ್ಥಾನ್ ರಾಯಲ್ಸ್ ತಂಡ ಪಂಜಾಬ್‌ ತಂಡವನ್ನು 4 ವಿಕೆಟ್‌ಗಳಿಂದ ಮಣಿಸಿ ಪ್ಲೇಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.

ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ನಡೆದ ಐಪಿಎಲ್‌ 2023ರ 16ನೇ ಆವೃತ್ತಿಯ 66ನೇ ಪಂದ್ಯದಲ್ಲಿ ರಾಜಸ್ಥಾನ್‌ ರಾಯಲ್ಸ್ ತಂಡ ಪಂಜಾಬ್‌ ಕಿಂಗ್ಸ್ ನೀಡಿದ 188 ರನ್‌ಗಳ ಗುರಿಯನ್ನು 19.4 ಓವರ್‌ಗಳಲ್ಲಿ ತಲುಪಿ ಜಯ ಸಾಧಿಸಿತು. ಅಂತಿಮ ಪಂದ್ಯದಲ್ಲಿ ಪರಾಜಯ ಕಂಡ ಪಂಜಾಬ್‌ ತಂಡ ಟೂರ್ನಿಯಿಂದ ನಿರ್ಗಮಿಸಿತು.

ಆರ್‌ಆರ್‌ ಪರ ಬ್ಯಾಟರ್‌ಗಳಾದ ಯಶಸ್ವಿ ಜೈಸ್ವಾಲ್ 50(36 ಎಸೆತ, 8 ಬೌಂಡರಿ),ದೇವದತ್ ಪಡೀಕಲ್ 51 (30 ಎಸೆತ, 5 ಬೌಂಡರಿ, 3 ಸಿಕ್ಸರ್ ),ಶಿಮ್ರಾನ್ ಹೆಟ್ಮೆಯರ್ ಅವರು 28 ಚೆಂಡುಗಳಲ್ಲಿ 3 ಸಿಕ್ಸರ್ ಹಾಗೂ 4 ಬೌಂಡರಿಯೊಂದಿಗೆ ಸಿಡಿಸಿದ 46 ರನ್‌ ಹಾಗೂ ಕೊನೆಯಲ್ಲಿ ರಿಯಾನ್‌ ಪರಾಗ್ 12 ಎಸೆತಗಳಲ್ಲಿ 2 ಸಿಕ್ಸರ್ 1 ಬೌಂಡರಿಯೊಂದಿಗೆ 20 ರನ್‌ಗಳ ಬಿರುಸಿನ ಆಟವಾಡಿ ಗೆಲುವಿನ ದಡ ಮುಟ್ಟಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇದಕ್ಕೂ ಮೊದಲು ಟಾಸ್‌ ಸೋತು ಬ್ಯಾಟಿಂಗ್‌ ಮಾಡಿದ ಪಂಜಾಬ್‌ ಕಿಂಗ್ಸ್ ತಂಡ ಸ್ಯಾಮ್ ಕರನ್, ಜಿತೇಶ್ ಶರ್ಮಾ ಹಾಗೂ ಶಾರುಖ್ ಖಾನ್ ಅವರ ಉತ್ತಮ ಬ್ಯಾಟಿಂಗ್‌ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 187 ರನ್‌ ಕಲೆ ಹಾಕಿತು.

ಮೊದಲ ಓವರ್‌ನಲ್ಲೇ ಇನ್‌ಫಾರ್ಮ್‌ ಬ್ಯಾಟರ್‌ ಪ್ರಭಸಿಮ್ರನ್‌ ಸಿಂಗ್‌ (2) ಎಡಗೈ ವೇಗಿ ಟ್ರೆಂಟ್‌ ಬೌಲ್ಟ್‌ಗೆ ವಿಕೆಟ್‌ ಒಪ್ಪಿಸಿದರು. ಇದರ ಬೆನ್ನಲ್ಲೇ ಅಥರ್ವ ತಾಯ್ದೆ (19) ಶೈನಿ ಬೌಲಿಂಗ್‌ನಲ್ಲಿ ಔಟಾದರು. ಸ್ವಲ್ಪ ಕಾಲ ಬ್ಯಾಟ್‌ ಬೀಸಿದ ಶಿಖರ್‌ ಧವನ್ (19) ಕೂಡ ಜಂಪಾ ಬೌಲಿಂಗ್‌ನಲ್ಲಿ ಎಲ್‌ಬಿ ಆದರು.

ಲಿಯಾಮ್‌ ಲಿವಿಂಗ್‌ಸ್ಟೋನ್‌ (9) ವಿಕೆಟ್‌ ಪತನದೊಂದಿಗೆ ಪಂಜಾಬ್‌ 50ಕ್ಕೆ 4 ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಆದರೆ, ಇನಿಂಗ್ಸ್ ಮಧ್ಯದ ಮತ್ತು ಸ್ಲಾಗ್‌ ಓವರ್‌ಗಳಲ್ಲಿ ಸಿಡಿದೆದ್ದ ಸ್ಯಾಮ್‌ ಕರನ್ (49 ಅಜೇಯ), ಜಿತೇಶ್‌ ಶರ್ಮಾ (44) ಮತ್ತು ಶಾರುಖ್‌ ಖಾನ್ (41 ಅಜೇಯ) ರಾಯಲ್ಸ್‌ ಬೌಲರ್‌ಗಳ ಬೆವರಳಿಸಿ ಸವಾಲಿನ ಮೊತ್ತ ತಂದುಕೊಟ್ಟರು.

ರಾಯಲ್ಸ್‌ ಪರ ವೇಗಿ ನವದೀಪ್‌ ಸೈನಿ (40ಕ್ಕೆ 3) ಯಶಸ್ವಿ ಬೌಲರ್‌ ಎನಿಸಿದರು. ಬೆನ್ನು ನೋವಿನ ಕಾರಣದಿಂದಾಗಿ ಇಂದಿನ ಪಂದ್ಯದಲ್ಲಿ ಸ್ಪಿನ್ನರ್‌ ಅಶ್ವಿನ್‌ ಆಡಲಿಲ್ಲ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ಯಾಂಡಿಡೇಟ್ಸ್ ಚೆಸ್ ಟೂರ್ನಿ ಗೆದ್ದು ಇತಿಹಾಸ ನಿರ್ಮಿಸಿದ 17ರ ಹರೆಯದ ಭಾರತೀಯ ಡಿ ಗುಕೇಶ್

ಭಾರತದ 17 ವರ್ಷದ ಗ್ರ್ಯಾಂಡ್‌ ಮಾಸ್ಟರ್ ಡಿ ಗುಕೇಶ್ ಟೊರೊಂಟೊದಲ್ಲಿ ನಡೆದ...

ಐಪಿಎಲ್ | ಪಂಜಾಬ್ ವಿರುದ್ಧ ಗುಜರಾತ್ ಟೈಟನ್ಸ್‌ಗೆ ಮೂರು ವಿಕೆಟ್‌ಗಳ ಜಯ

ಚಂಡೀಗಢದ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್‌...

ಐಪಿಎಲ್ | ರೋಚಕ ಹಣಾಹಣಿಯಲ್ಲಿ ಕೈಕೊಟ್ಟ ನಸೀಬು: ಕೆಕೆಆರ್‌ ವಿರುದ್ಧ ಆರ್‌ಸಿಬಿಗೆ 1 ರನ್‌ಗಳ ಸೋಲು

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಇಂದು ನಡೆದ ಐಪಿಎಲ್ 36ನೇ ಪಂದ್ಯದಲ್ಲಿ ರಾಯಲ್...