IPL ಫೈನಲ್‌ಗೇರಲು ನಾಳೆ ಗುಜರಾತ್ ಟೈಟನ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಪಂದ್ಯ

Date:

ನಾಳೆ ನಡೆಯಲಿರುವ ಕ್ವಾಲಿಫೈಯರ್-2 ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಗುಜರಾತ್ ಟೈಟನ್ಸ್ ನಡುವೆ ಜಿದ್ದಾಜಿದ್ದಿನ ಹೋರಾಟ ನಿರೀಕ್ಷಿಸಲಾಗಿದೆ. ಸನ್‌ರೈಸರ್ಸ್ ವಿರುದ್ಧದ ಭರ್ಜರಿ ಗೆಲುವಿನಿಂದ ರಾಯಲ್ಸ್ ಪಡೆಯ ಆತ್ಮವಿಶ್ವಾಸ ಮುಗಿಲೆತ್ತರಕ್ಕೇರಿದ್ದು, ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡು ವಿಭಾಗಗಳಲ್ಲೂ ಸಮತೋಲನ ಸಾಧಿಸಿದೆ. ವಿಶೇಷವಾಗಿ ಯುವ ಆಟಗಾರ ವೈಭವ್ ಸೂರ್ಯವಂಶಿ ಮತ್ತು ನಾಯಕ ರಿಯಾನ್ ಪರಾಗ್ ಅವರ ಸ್ಫೋಟಕ ಫಾರ್ಮ್ ಗುಜರಾತ್ ಬೌಲರ್‌ಗಳಿಗೆ ತಲೆನೋವಾಗುವ ಸಾಧ್ಯತೆಯಿದೆ

- Advertisement -

ಐಪಿಎಲ್ 2026ರ ಟ್ರೋಫಿ ಎತ್ತಿಹಿಡಿಯುವ ಕನಸು ಕಾಣುತ್ತಿರುವ ನಾಯಕ ರಿಯಾನ್ ಪರಾಗ್ ನೇತೃತ್ವದ ರಾಜಸ್ಥಾನ್ ರಾಯಲ್ಸ್ ತಂಡವು, ಫೈನಲ್ ಪ್ರವೇಶದ ನಿರ್ಣಾಯಕ ಘಟ್ಟವಾದ ‘ಕ್ವಾಲಿಫೈಯರ್-2’ ಪಂದ್ಯದಲ್ಲಿ ನಾಳೆ ಬಲಿಷ್ಠ ಗುಜರಾತ್ ಟೈಟನ್ಸ್ ತಂಡವನ್ನು ಎದುರಿಸಲಿದೆ. ಎಲಿಮಿನೇಟರ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು 47 ರನ್‌ಗಳಿಂದ ಮಣಿಸಿರುವ ರಾಯಲ್ಸ್ ಪಡೆಯು, ಅದೇ ಗೆಲುವಿನ ಲಯವನ್ನು ಕಾಯ್ದುಕೊಂಡು ಗುಜರಾತ್ ವಿರುದ್ಧವೂ ಪಾರುಪತ್ಯ ಮೆರೆಯುವ ಉತ್ಸಾಹದಲ್ಲಿದೆ. ನಾಳಿನ ಪಂದ್ಯವು ಉಭಯ ತಂಡಗಳಿಗೂ ‘ಮಾಡು ಇಲ್ಲವೆ ಮಡಿ’ ಕದನವಾಗಿದ್ದು, ಶುಕ್ರವಾರ ನಡೆಯಲಿರುವ ಈ ಹೈವೋಲ್ಟೇಜ್ ಪಂದ್ಯವು ಕ್ರಿಕೆಟ್ ಅಭಿಮಾನಿಗಳಲ್ಲಿ ತೀವ್ರ ಕುತೂಹಲ ಕೆರಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕೊರೆಯುವ ಚಳಿಯಲ್ಲೂ ಮೊಳಗಿದ ಗುಲಾಬಿ ಧ್ವನಿ, ಆಶಾ ಕಾರ್ಯಕರ್ತೆಯರ...

ಒಂದೆಡೆ ಭೋರ್ಗರೆಯುವ ಮಳೆ, ಮತ್ತೊಂದೆಡೆ ಮೈಕೊರೆಯುವ ಚಳಿ. ಪ್ರಕೃತಿಯ ಈ ಪ್ರತಿಕೂಲ ಪರಿಸ್ಥಿತಿಯನ್ನೂ ಲೆಕ್ಕಿಸದೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸಾವಿರಾರು ಗುಲಾಬಿ ಸೀರೆಧಾರಿ ಮಹಿಳೆಯರು ನ್ಯಾಯಕ್ಕಾಗಿ ಧ್ವನಿ ಎತ್ತುತ್ತಿದ್ದಾರೆ. ಅವರ ಹೋರಾಟವನ್ನು ನೋಡಿದಾಗ...

ಬಿರುಕು ಬಿಟ್ಟಿದ್ದ ‘ಕೈ’ ಕೋಟೆಗೆ ಒಗ್ಗಟ್ಟಿನ ಶಕ್ತಿ: ರಾಜಸ್ಥಾನ...

ಗೋವಿಂದ್ ಡೋಟಸರ ಮತ್ತು ಟೀಕಾರಾಮ್ ಜುಲ್ಲಿ ಅವರ ನಡುವಣ ಬಾಂಧವ್ಯ ಕೇವಲ ರಾಜಕೀಯ ಅನಿವಾರ್ಯತೆಯಲ್ಲ; ಅದು ಪರಸ್ಪರ ನಂಬಿಕೆ ಮತ್ತು ಪೂರಕ ಸಾಮರ್ಥ್ಯಗಳ ಸಮ್ಮಿಲನವಾಗಿದೆ. ಡೋಟಸರ ಅವರಲ್ಲಿರುವ ಆಕ್ರಮಣಕಾರಿ ಸಂಘಟನಾ ಶೈಲಿ, ಪ್ರಖರ...

ವನ್ಯಜೀವಿ ಸಂಘರ್ಷದ ಸುಳಿಯಲ್ಲಿ ಅರಣ್ಯದ ಭವಿಷ್ಯ: ಸಂರಕ್ಷಣೆಯ ಹೆಸರಿನಲ್ಲಿ...

ಬಂಡೀಪುರ-ನಾಗರಹೊಳೆ ಅರಣ್ಯಗಳ ಮೇಲೆ ಹೆಚ್ಚುತ್ತಿರುವ ಒತ್ತಡ; ಖಾಸಗಿ ಬಂಡವಾಳ, ಪ್ರವಾಸೋದ್ಯಮ ವಿಸ್ತರಣೆ ಮತ್ತು ಆದಿವಾಸಿಗಳ ಹಕ್ಕುಗಳ ನಡುವೆ ಸಂರಕ್ಷಣೆಯ ಮೂಲ ಆಶಯಕ್ಕೆ ಸವಾಲು. ಮನುಷ್ಯ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ಪರಿಹಾರವಿಲ್ಲ; ಅರಣ್ಯಗಳ ಮೇಲಿನ ನಿಯಂತ್ರಣ...

ನ್ಯೂ ಚಂಡೀಗಢದಲ್ಲಿ ನಡೆದ ಎಲಿಮಿನೇಟರ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್, ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ ಭರ್ಜರಿ 243 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು. ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ (29) ರನ್ ಗಳಿಸಿ ಉತ್ತಮ ಜೊತೆ ನೀಡಿದರೆ, ಮಧ್ಯಮ ಕ್ರಮಾಂಕದಲ್ಲಿ ಅಬ್ಬರಿಸಿದ ವಿಕೆಟ್ ಕೀಪರ್ ಧ್ರುವ್ ಜುರೆಲ್ ಕೇವಲ 21 ಎಸೆತಗಳಲ್ಲಿ 3 ಸಿಕ್ಸರ್ ಹಾಗೂ 5 ಬೌಂಡರಿಗಳೊಂದಿಗೆ 50 ರನ್ ಚಚ್ಚಿದರು. ನಾಯಕ ರಿಯಾನ್ ಪರಾಗ್ ಕೂಡ 12 ಎಸೆತಗಳಲ್ಲಿ 26 ರನ್ ಸಿಡಿಸಿ ತಂಡದ ಮೊತ್ತವನ್ನು ಹಿಗ್ಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು.

ಪಂದ್ಯದ ಅತಿ ದೊಡ್ಡ ಹೈಲೈಟ್ ಎಂದರೆ ರಾಜಸ್ಥಾನ್ ರಾಯಲ್ಸ್‌ನ 15 ವರ್ಷದ ಯುವ ಸ್ಫೋಟಕ ಬ್ಯಾಟರ್ ವೈಭವ್ ಸೂರ್ಯವಂಶಿ ನಿರ್ಮಿಸಿದ ಐತಿಹಾಸಿಕ ದಾಖಲೆ. ಹೈದರಾಬಾದ್ ಬೌಲರ್‌ಗಳನ್ನು ನಿರ್ದಯವಾಗಿ ದಂಡಿಸಿದ ಈ ಹದಿಹರೆಯದ ಪ್ರತಿಭೆ, ಕೇವಲ 29 ಎಸೆತಗಳಲ್ಲಿ ಬರೋಬ್ಬರಿ 12 ಸಿಕ್ಸರ್ ಹಾಗೂ 5 ಬೌಂಡರಿಗಳ ನೆರವಿನಿಂದ 97 ರನ್ ಸಿಡಿಸಿ ಕೇವಲ 3 ರನ್‌ಗಳಿಂದ ಶತಕ ವಂಚಿತರಾದರು. 334.48ರ ಅದ್ಭುತ ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್ ಬೀಸಿದ ವೈಭವ್, ಈ ಐತಿಹಾಸಿಕ ಇನಿಂಗ್ಸ್ ಮೂಲಕ ಒಂದೇ ಐಪಿಎಲ್ ಆವೃತ್ತಿಯಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ವೆಸ್ಟ್ ಇಂಡೀಸ್ ದಂತಕಥೆ ಕ್ರಿಸ್ ಗೇಲ್ ಅವರ ಬಹುಕಾಲದ ದಾಖಲೆಯನ್ನು ಅಳಿಸಿಹಾಕಿ ಹೊಸ ಇತಿಹಾಸ ಬರೆದಿದ್ದಾರೆ.

ಇದನ್ನು ಓದಿದ್ದೀರಾ? ಕೊಹ್ಲಿ-ರೋಹಿತ್ 2027ರ ವಿಶ್ವಕಪ್ ಆಡ್ತಾರಾ; ಬಿಸಿಸಿಐ ಮುಂದಿದೆ ದೊಡ್ಡ ಸವಾಲು

244 ರನ್‌ಗಳ ಕಠಿಣ ಗುರಿ ಬೆನ್ನತ್ತಿದ ಪ್ಯಾಟ್ ಕಮಿನ್ಸ್ ನೇತೃತ್ವದ ಸನ್‌ರೈಸರ್ಸ್‌ ಹೈದರಾಬಾದ್ ತಂಡವು 19.2 ಓವರ್‌ಗಳಲ್ಲಿ 196 ರನ್‌ಗಳಿಗೆ ಆಲೌಟ್ ಆಗಿ ಟೂರ್ನಿಯಿಂದ ನಿರ್ಗಮಿಸಿತು. ರಾಜಸ್ಥಾನ್ ವೇಗಿ ಜೋಫ್ರಾ ಆರ್ಚರ್ (58ಕ್ಕೆ 3) ಆರಂಭದಲ್ಲೇ ಅಭಿಷೇಕ್ ಶರ್ಮಾ (0), ಟ್ರಾವಿಸ್ ಹೆಡ್ (17) ಮತ್ತು ಇಶಾನ್ ಕಿಶನ್ (33) ಅವರ ಪ್ರಮುಖ ವಿಕೆಟ್ ಕಬಳಿಸಿ ಎದುರಾಳಿಗೆ ಆಘಾತ ನೀಡಿದರು. ಹೈದರಾಬಾದ್ ಪರ ನಿತೀಶ್ ಕುಮಾರ್ ರೆಡ್ಡಿ (38) ಹಾಗೂ ಇಂಪ್ಯಾಕ್ಟ್ ಪ್ಲೇಯರ್ ಸಲಿಲ್ ಅರೋರಾ (35) ಕೊಂಚ ಪ್ರತಿರೋಧ ಒಡ್ಡಿದರೂ ಗುರಿ ತಲುಪಲು ಸಾಧ್ಯವಾಗಲಿಲ್ಲ. ರಾಯಲ್ಸ್ ಪರ ಸ್ಪಿನ್ನರ್ ರವೀಂದ್ರ ಜಡೇಜಾ (21ಕ್ಕೆ 2), ವೇಗಿಗಳಾದ ನಾಂದ್ರೆ ಬರ್ಗರ್ (26ಕ್ಕೆ 2) ಹಾಗೂ ಸುಶಾಂತ್ ಮಿಶ್ರಾ (21ಕ್ಕೆ 2) ಕರಾರುವಾಕ್ ದಾಳಿ ಸಂಘಟಿಸುವ ಮೂಲಕ ತಂಡಕ್ಕೆ ರೋಚಕ ಜಯ ತಂದುಕೊಟ್ಟರು.

ನಾಳೆ ನಡೆಯಲಿರುವ ಕ್ವಾಲಿಫೈಯರ್-2 ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಗುಜರಾತ್ ಟೈಟನ್ಸ್ ನಡುವೆ ಜಿದ್ದಾಜಿದ್ದಿನ ಹೋರಾಟ ನಿರೀಕ್ಷಿಸಲಾಗಿದೆ. ಸನ್‌ರೈಸರ್ಸ್ ವಿರುದ್ಧದ ಭರ್ಜರಿ ಗೆಲುವಿನಿಂದ ರಾಯಲ್ಸ್ ಪಡೆಯ ಆತ್ಮವಿಶ್ವಾಸ ಮುಗಿಲೆತ್ತರಕ್ಕೇರಿದ್ದು, ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡು ವಿಭಾಗಗಳಲ್ಲೂ ಸಮತೋಲನ ಸಾಧಿಸಿದೆ. ವಿಶೇಷವಾಗಿ ಯುವ ಆಟಗಾರ ವೈಭವ್ ಸೂರ್ಯವಂಶಿ ಮತ್ತು ನಾಯಕ ರಿಯಾನ್ ಪರಾಗ್ ಅವರ ಸ್ಫೋಟಕ ಫಾರ್ಮ್ ಗುಜರಾತ್ ಬೌಲರ್‌ಗಳಿಗೆ ತಲೆನೋವಾಗುವ ಸಾಧ್ಯತೆಯಿದೆ. ಮತ್ತೊಂದೆಡೆ, ಗುಜರಾತ್ ಟೈಟನ್ಸ್ ತಂಡವು ತನ್ನ ಸಂಘಟಿತ ಪ್ರದರ್ಶನ ಮತ್ತು ಒತ್ತಡ ನಿಭಾಯಿಸುವ ಚಾಕಚಕ್ಯತೆಗೆ ಹೆಸರಾಗಿದ್ದು, ರಾಜಸ್ಥಾನ್‌ನ ಅಗ್ರ ಕ್ರಮಾಂಕವನ್ನು ಕಟ್ಟಿಹಾಕಲು ನಿಖರ ಕಾರ್ಯತಂತ್ರದೊಂದಿಗೆ ಕಣಕ್ಕಿಳಿಯಲಿದೆ.

ಈ ಪಂದ್ಯವು ಫೈನಲ್ ಪ್ರವೇಶಿಸುವ ಕೊನೆಯ ಅವಕಾಶವಾಗಿರುವುದರಿಂದ ಎರಡೂ ತಂಡಗಳ ಮೇಲಿನ ಒತ್ತಡ ತಾರಕಕ್ಕೇರಿದೆ. ‘ಮಾಡು ಇಲ್ಲವೆ ಮಡಿ’ ಪಂದ್ಯದಲ್ಲಿ ಚಿಕ್ಕ ತಪ್ಪು ಕೂಡ ಟೂರ್ನಿಯಿಂದ ಹೊರಬೀಳುವಂತೆ ಮಾಡಬಹುದು. ಹೀಗಾಗಿ, ಗುಜರಾತ್ ಟೈಟನ್ಸ್‌ನ ಅನುಭವ ಮತ್ತು ರಾಜಸ್ಥಾನ್ ರಾಯಲ್ಸ್‌ನ ಯುವಕರ ಉತ್ಸಾಹದ ನಡುವಿನ ಈ ಕದನವು ರೋಚಕ ಹಂತ ತಲುಪುವುದು ಖಚಿತ. ಶುಕ್ರವಾರ ರಾತ್ರಿ ನಡೆಯಲಿರುವ ಈ ಹೈವೋಲ್ಟೇಜ್ ಕ್ರಿಕೆಟ್ ಹಬ್ಬವನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದು, ಅಂತಿಮವಾಗಿ ಯಾರು ಫೈನಲ್ ಟಿಕೆಟ್ ಗಿಟ್ಟಿಸಲಿದ್ದಾರೆ ಎಂಬುದು ತೀವ್ರ ಕುತೂಹಲದ ಕೇಂದ್ರಬಿಂದುವಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು | ಮಹಿಳಾ ಜಿಲ್ಲಾಧಿಕಾರಿಗೆ ಲೈಂಗಿಕ ಕಿರುಕುಳ ಆರೋಪ: ಟಿವಿಕೆ ಶಾಸಕ ಅರುಳ್ ವಿಘ್ನೇಶ್ ಬಂಧನ

ಮಹಿಳಾ ಜಿಲ್ಲಾಧಿಕಾರಿಗೆ (ಐಎಎಸ್ ಅಧಿಕಾರಿ) ಲೈಂಗಿಕ ಕಿರುಕುಳ ನೀಡಿದ ಮತ್ತು ಅನುಚಿತವಾಗಿ...

ನಶೆಮುಕ್ತ ಶಿವಮೊಗ್ಗ ನಿರ್ಮಾಣಕ್ಕೆ ಮುಸ್ಲಿಂ ಯೂಥ್ ಕೌನ್ಸಿಲ್ ಅಭಿಯಾನ

ನಶೆಮುಕ್ತ ಸಮಾಜ ನಿರ್ಮಾಣದ ಉದ್ದೇಶದಿಂದ ಶಿವಮೊಗ್ಗ ಮುಸ್ಲಿಂ ಯೂಥ್ ಕೌನ್ಸಿಲ್ ವತಿಯಿಂದ...

ಮಂಗಳೂರು | ‘ಕನಕದಾಸರು ಸಮನತೆಯ ಹರಿಕಾರರು’ : ತಾರಾನಾಥ ಗಟ್ಟಿ

"ದಾರ್ಶನಿಕರ ಕಥೆಗಳು, ವಾಣಿಗಳು ಜನರಿಗೆ ಒಳ್ಳೆಯ ಜೀವನಕ್ಕೆ ಸ್ಫೂರ್ತಿ ಹಾಗೂ ಇನ್ನು...

ಮೈಶುಗರ್ ಬೆಳೆವಣಿಗೆ ಸಹಿಸಲಾಗುತ್ತಿಲ್ಲ : ನಿರಾಣಿ ವಿರುದ್ಧ ಸಿ.ಡಿ.ಗಂಗಾಧರ್ ವಾಗ್ದಾಳಿ

ಮೈಸೂರು ಸಕ್ಕರೆ ಕಾರ್ಖಾನೆಯ ಯಶಸ್ಸು ಕೆಲವರಿಗೆ ಆತಂಕ ಉಂಟುಮಾಡಿದ್ದು, ಕಾರ್ಖಾನೆಯ ಬಗ್ಗೆ...