ಇಂದು(ಮೇ 22) ಬುಧವಾರ 17ನೇ ಆವೃತ್ತಿ ಐಪಿಎಲ್‌ನ ಎಲಿಮಿನೇಟರ್‌ನಲ್ಲಿ ಆರ್‌ಸಿಬಿ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡ ಸೆಣಸಾಡಲಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ರಾಯಲ್ಸ್ ತಂಡ, ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಟಾಸ್ ಸೋತಿರುವ ಆರ್‌ಸಿಬಿ ತಂಡವು, ಬ್ಯಾಟಿಂಗ್‌ಗೆ ಇಳಿಸಲ್ಪಟ್ಟಿದ್ದು, ಪಂದ್ಯವನ್ನು ಗೆಲ್ಲಬೇಕಾದರೆ ಬೃಹತ್ ರನ್‌ಗಳ ಗುರಿಯನ್ನು ನೀಡಬೇಕಿದೆ.
Samson wins the toss and RR will bowl first #RRvRCB | #IPL2024
— ESPNcricinfo (@ESPNcricinfo) May 22, 2024
ಇಂದು ಗೆಲ್ಲುವ ತಂಡ ಎರಡನೇ ಕ್ವಾಲಿಫೈಯರ್ ಪಂದ್ಯಕ್ಕೆ ಅರ್ಹತೆ ಗಿಟ್ಟಿಸಿಕೊಳ್ಳಲಿದ್ದು, ಸೋಲುವ ತಂಡ ಟೂರ್ನಿಯಿಂದಲೇ ಹೊರಬೀಳಲಿದೆ. ಎರಡನೇ ಕ್ವಾಲಿಫೈಯರ್ ಪಂದ್ಯವಯ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಚೆನ್ನೈಯಲ್ಲಿ ಮೇ 24ರಂದು ನಡೆಯಲಿದೆ.
