ಐಪಿಎಲ್‌ 2023 | ಗುವಾಹಟಿಯಲ್ಲಿಂದು ಚೊಚ್ಚಲ ಐಪಿಎಲ್‌ ಪಂದ್ಯ

Date:

ಐಪಿಎಲ್‌ 16ನೇ ಆವೃತ್ತಿಯ ತಮ್ಮ ಮೊದಲ ಪಂದ್ಯದಲ್ಲಿ ಗೆಲುವು ಕಂಡಿರುವ ರಾಜಸ್ಥಾನ್ ರಾಯಲ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಬುಧವಾರ ಬರ್ಸಾಪರಾ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿವೆ.

ರಾಯಲ್ಸ್‌ ತಂಡದ ಎರಡನೇ ತವರಿನಂಗಳ ಗುವಾಹಟಿಯಲ್ಲಿ ಇದೇ ಮೊದಲ ಬಾರಿಗೆ ಐಪಿಎಲ್‌ ಪಂದ್ಯ ಆಯೋಜನೆಗೊಂಡಿದೆ. ಹೀಗಾಗಿ ಪಂದ್ಯದ ಆರಂಭಕ್ಕೂ ಮುನ್ನ ಲೇಸರ್‌ ಶೋ, ಜಾನಪದ ನೃತ್ಯದ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅಸ್ಸಾಂ ಕ್ರಿಕೆಟ್‌ ಮಂಡಳಿ ಆಯೋಜಿಸಿದೆ.

ಐಪಿಎಲ್‌ನಲ್ಲಿ ಇದುವರೆಗೂ ಪಂಜಾಬ್‌ ವಿರುದ್ಧ ಅತಿಹೆಚ್ಚು ಪಂದ್ಯಗಳನ್ನು ಗೆದ್ದ ದಾಖಲೆ ರಾಯಲ್ಸ್‌ ತಂಡದ್ದಾಗಿದೆ. ಒಟ್ಟು 24 ಪಂದ್ಯಗಳಲ್ಲಿ 14  ಬಾರಿ ರಾಜಸ್ಥಾನ ಗೆಲುವಿನ ನಗೆ ಬೀರಿದೆ.

ಐಪಿಎಲ್ 2022ರ ಫೈನಲಿಸ್ಟ್ ಸಂಜು ಸಾರಥ್ಯದ ರಾಯಲ್ಸ್‌, ತನ್ನ ಆರಂಭಿಕ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು 72 ರನ್‌ಗಳಿಂದ ಸೋಲಿಸಿತ್ತು. ಮತ್ತೊಂದೆಡೆ ಮಳೆಯಿಂದ ಅಡಚಣೆಗೊಳಗಾದ ಪಂದ್ಯದಲ್ಲಿ ಶಿಖರ್‌ ಧವನ್‌ ನಾಯಕತ್ವದ ಪಂಜಾಬ್‌ ಕಿಂಗ್ಸ್‌, ಕೆಕೆಆರ್‌ ವಿರುದ್ಧ 7 ರನ್‌ಗಳ ರೋಚಕ ಗೆಲುವು ಕಂಡಿತ್ತು.

ಬ್ಯಾಟಿಂಗ್‌‌ ಮತ್ತು ಬೌಲಿಂಗ್‌ನಲ್ಲಿ ರಾಯಲ್ಸ್‌ ಬಲಿಷ್ಠ ಪಡೆಯನ್ನು ಹೊಂದಿದೆ. ಆರಂಭಿಕರಾದ ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್ , ನಾಯಕ ಸಂಜು ಸ್ಯಾಮ್ಸನ್ ಬೌಲಿಂಗ್‌ನಲ್ಲಿ ಟ್ರೆಂಟ್ ಬೌಲ್ಟ್ ಯುಜ್ವೇಂದ್ರ ಚಾಹಲ್, ಆರ್‌ ಅಶ್ವಿನ್‌ ಪಂದ್ಯವನ್ನು ಗೆಲ್ಲಿಸಿಕೊಡಬಲ್ಲ ಆಟಗಾರರಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಐಪಿಎಲ್ 2023 | ಮೊಯಿನ್ ಅಲಿ ಮಾರಕ ಬೌಲಿಂಗ್‌ ದಾಳಿಗೆ ಕುಸಿದ ಲಖನೌ; ಚೆನ್ನೈಗೆ ರೋಚಕ ಗೆಲುವು

ಹೈದರಾಬಾದ್‌ನಲ್ಲಿ ಎಂಟು ಓವರ್‌ಗಳಲ್ಲೇ ರಾಜಸ್ಥಾನ 100 ರನ್‌ಗಳ ಗಡಿ ದಾಟಿತ್ತು. ಆದರೆ ಕೊನೆಯ ಹತ್ತು ಓವರ್‌ಗಳಲ್ಲಿ ತಂಡವು ಕೇವಲ 81 ರನ್ ಗಳಿಸಲಷ್ಟೇ ಶಕ್ತವಾಗಿತ್ತು. ಬುಧವಾರದ ಪಂದ್ಯದಲ್ಲಿ ಪಂಜಾಬ್‌, ಆರಂಭದಲ್ಲೇ ರಾಯಲ್ಸ್‌ ತಂಡದ ಅಗ್ರಕ್ರಮಾಂಕದ ಬ್ಯಾಟರ್‌ಗಳ ವಿಕೆಟ್‌ ಪಡೆಯುವಲ್ಲಿ ಸಫಲವಾದರೆ ಪಂದ್ಯವು ಕಿಂಗ್ಸ್‌ ಪರವಾಗಲಿದೆ. ಆದರೆ ಇಂಗ್ಲೆಂಡ್‌ನ ಆಲ್‌ರೌಂಡರ್ ಲಿಯಾಮ್ ಲಿವಿಂಗ್‌ಸ್ಟನ್‌ ಮತ್ತು ದಕ್ಷಿಣ ಆಫ್ರಿಕಾದ ವೇಗಿ ಕಗಿಸೊ ರಬಾಡ  ಇನ್ನೂ ತಂಡವನ್ನು ಕೂಡಿಕೊಳ್ಳದೇ ಇರುವುದು ಪಂಜಾಬ್‌ ಕಿಂಗ್ಸ್ ಪಾಲಿಗೆ ತಲೆನೋವಾಗಿದೆ.

ಸಂಭಾವ್ಯ ಆಡುವ ಬಳಗ

ರಾಜಸ್ಥಾನ್ ರಾಯಲ್ಸ್: ಜೋಸ್ ಬಟ್ಲರ್ (ವಿಕೆಟ್‌ ಕೀಪರ್), ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ನಾಯಕ), ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ಜೇಸನ್ ಹೋಲ್ಡರ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಕೆಎಂ ಆಸಿಫ್, ಯುಜ್ವೇಂದ್ರ ಚಾಹಲ್.

ಪಂಜಾಬ್ ಕಿಂಗ್ಸ್: ಪ್ರಭಾಸಿಮ್ರಾನ್ ಸಿಂಗ್ (ವಿಕೆಟ್‌ ಕೀಪರ್), ಶಿಖರ್ ಧವನ್ (ನಾಯಕ), ಭಾನುಕಾ ರಾಜಪಕ್ಸೆ, ಜಿತೇಶ್ ಶರ್ಮಾ, ಸಿಕಂದರ್ ರಝಾ, ಸ್ಯಾಮ್ ಕರ್ರನ್, ಶಾರುಖ್ ಖಾನ್, ನಾಥನ್ ಎಲ್ಲಿಸ್, ಹರ್ಪ್ರೀತ್ ಬ್ರಾರ್, ರಾಹುಲ್ ಚಾಹರ್, ಅರ್ಶ್‌ದೀಪ್ ಸಿಂಗ್

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟಿ20 | ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾಗೆ ರೋಚಕ ಗೆಲುವು: ಜೋಶ್ ಇಂಗ್ಲಿಸ್ ಶತಕ ವ್ಯರ್ಥ

ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 2 ವಿಕೆಟ್...

ಕ್ರಿಕೆಟಿಗ ಶ್ರೀಶಾಂತ್ ವಿರುದ್ಧ 18.7 ಲಕ್ಷ ರೂ. ವಂಚನೆ, ದೂರು ದಾಖಲು

ಉತ್ತರ ಕೇರಳದ ಕಣ್ಣೂರು ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ...

ಪಾಪಿಗಳು ಹಾಜರಾದ ಕಾರಣ ವಿಶ್ವಕಪ್ ಫೈನಲ್‌ನಲ್ಲಿ ಭಾರತ ಸೋತಿದೆ: ಮಮತಾ ಬ್ಯಾನರ್ಜಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಂತರ ಇದೀಗ ಪಶ್ಚಿಮ ಬಂಗಾಳ ಮುಖ್ಯಮಂತ್ರಿ...

ರೋಹಿತ್ ಶರ್ಮಾ ನಂತರ ಟೀಮ್ ಇಂಡಿಯಾದ ಕ್ಯಾಪ್ಟನ್ ಯಾರು?

2007ರಲ್ಲಿ ರಾಹುಲ್ ದ್ರಾವಿಡ್ ಕ್ಯಾಪ್ಟನ್ ಸ್ಥಾನದಿಂದ ಕೆಳಗಿಳಿಯುವ ಹೊತ್ತಿಗೆ ಮಹೇಂದ್ರ ಸಿಂಗ್...