ಐಪಿಎಲ್ 2023 | ಟಾಸ್‌ ಗೆದ್ದ ರಾಜಸ್ಥಾನ; ವಿಶೇಷತೆ ಮೆರೆದ ಆರ್‌ಸಿಬಿ

Date:

  • ವಿರಾಟ್‌ ಕೊಹ್ಲಿ(0) ಹಾಗೂ ಶಾಬಾಜ್‌ ಅಹಮದ್ (2) ಔಟ್‌
  • ಆರ್‌ಸಿಬಿಗೆ ಆರಂಭಿಕ ಆಘಾತ ನೀಡಿದ ಟ್ರೆಂಟ್ ಬೌಲ್ಟ್‌

ಐಪಿಎಲ್ 16ನೇ ಆವೃತ್ತಿಯ 32ನೇ ಪಂದ್ಯದಲ್ಲಿ ಟಾಸ್‌ ಗೆದ್ದ ರಾಜಸ್ಥಾನ ತಂಡದ ನಾಯಕ ಸಂಜು ಸ್ಯಾಮ್ಸನ್‌ ಆರ್‌ಸಿಬಿ ತಂಡವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದ್ದಾರೆ.

ತವರು ಮೈದಾನ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬ್ಯಾಟಿಂಗ್‌ಗೆ ಇಳಿದ ರಾಯಲ್ಸ್‌ ಚಾಲೆಂಜರ್ಸ್‌ ಬೆಂಗಳೂರು ತಂಡ 4 ಓವರ್‌ ಆಡುವಷ್ಟರಲ್ಲೇ ಪ್ರಮುಖ ಬ್ಯಾಟರ್‌ಗಳಾದ ವಿರಾಟ್‌ ಕೊಹ್ಲಿ(0) ಹಾಗೂ ಶಾಬಾಜ್‌ ಅಹಮದ್ ಅವರ ವಿಕೆಟ್‌ ಕಳೆದುಕೊಂಡು ಆರಂಭಿಕ ಆಘಾತ ಅನುಭವಿಸಿದೆ.

ರಾಜಸ್ಥಾನದ ವೇಗದ ಬೌಲರ್‌ ಟ್ರೆಂಟ್ ಬೌಲ್ಟ್‌ ಆರಂಭಿಕ ಆಟಗಾರರನ್ನು ಉರುಳಿಸಿ ಮೇಲುಗೈ ಸಾಧಿಸಿದರು. ಇದರೊಂದಿಗೆ ಬೌಲ್ಟ್‌ ಐಪಿಎಲ್‌ನಲ್ಲಿ 100 ವಿಕೆಟ್‌ಗಳನ್ನು ಕಬಳಿಸಿದ ಸಾಧನೆ ಮಾಡಿದರು. ಆರ್‌ಸಿಬಿ ಸ್ಕೋರ್ 7 ಓವರ್‌ಗಳಲ್ಲಿ 72/2.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಫಾಫ್ ಡು ಪ್ಲೆಸಿಸ್‌ ಸಂಪೂರ್ಣ ಫಿಟ್ ಆಗದ ಹಿನ್ನೆಲೆಯಲ್ಲಿ ಇಂದಿನ ಪಂದ್ಯದಲ್ಲೂ ವಿರಾಟ್ ಕೊಹ್ಲಿ ಆರ್‌ಸಿಬಿ ತಂಡವನ್ನು ಮುನ್ನಡೆಸುತ್ತಿದ್ದಾರೆ. ಇಂಪ್ಯಾಕ್ಟ್‌ ಆಟಗಾರನ ರೂಪದಲ್ಲಿ ಫಾಫ್ ಡು ಪ್ಲೆಸಿಸ್‌ ಅರಂಭಿಕನಾಗಿ ಕಣಕ್ಕಿಳಿಯಲಿದ್ದಾರೆ. ತಂಡದಲ್ಲಿ ಒಂದು ಮಹತ್ವದ ಬದಲಾವಣೆ ಮಾಡಲಾಗಿದೆ. ವೇಯ್ನ್ ಪಾರ್ನೆಲ್ ಬದಲಿಗೆ ಡೇವಿಡ್ ವಿಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

ಎರಡೂ ತಂಡಗಳಲ್ಲಿ ಉತ್ತಮ ಬ್ಯಾಟರ್‌ಗಳಿದ್ದು, ಬ್ಯಾಟ್ಸಮೆನ್‌ಗಳ ಸ್ವರ್ಗ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮತ್ತೊಮ್ಮೆ ಹೆಚ್ಚು ರನ್‌ ಬರುವ ನಿರೀಕ್ಷೆ ಇದೆ. ರಾಜಸ್ಥಾನ ತಂಡದಲ್ಲಿ ಜೋಸ್‌ ಬಟ್ಲರ್‌, ಯಶಸ್ವಿ ಜೈಸ್ವಾಲ್‌, ಸಂಜು ಸ್ಯಾಮ್ಸನ್‌, ಶಿಮ್ರೊನ್‌ ಹೆಟ್ಮೇಯರ್‌ರಂತಹ ಘಟಾನುಘಟಿಗಳಿದ್ದರೆ, ಹೀಗಾಗಿ ಎರಡೂ ತಂಡಗಳ ಬೌಲರ್‌ಗಳು ಒತ್ತಡದಲ್ಲೇ ಬೌಲಿಂಗ್‌ ಮಾಡಬೇಕಾಗಿದೆ.

ಪರಿಸರ ಸಂರಕ್ಷಣೆಗೆ ಹಸಿರು ಜೆರ್ಸಿ ತೊಟ್ಟ ಆರ್‌ಸಿಬಿ

ಹಸಿರು ಸಂರಕ್ಷಣೆಯ ಪ್ರಚಾರಕ್ಕಾಗಿ ಕಳೆದ ಹಲವು ವರ್ಷಗಳಿಂದ ಆರ್‌ಸಿಬಿ ತಂಡ ಒಂದು ಪಂದ್ಯಕ್ಕೆ ಹಸಿರು ಜೆರ್ಸಿ ತೊಡುವ ಸಂಪ್ರದಾಯ ಪಾಲಿಸಿಕೊಂಡು ಬಂದಿದೆ. ಇಂದಿನ ಪಂದ್ಯದಲ್ಲಿ ಆರ್‌ಸಿಬಿ ಆಟಗಾರರು ಹಸಿರು ಜೆರ್ಸಿಯಲ್ಲಿ ಕಾಣಿಸಿಕೊಂಡಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್‌ ವೇಳೆ ಸಂಗ್ರಹವಾಗುವ ಪ್ಲ್ಯಾಸ್ಟಿಕ್‌ ತ್ಯಾಜ್ಯವನ್ನು ಬಳಸಿ ಈ ಜೆರ್ಸಿಗಳನ್ನು ತಯಾರಿಸಲಾಗುತ್ತದೆ ಎನ್ನುವುದು ವಿಶೇಷ.

ಈ ಸುದ್ದಿ ಓದಿದ್ದೀರಾ?: ಐಪಿಎಲ್‌ 2023 | ಲಕ್ನೊ ವಿರುದ್ಧ ಗುಜರಾತ್‌ ನಿರಾಯಾಸದ ಗೆಲುವು

ಆಡುತ್ತಿರುವ ಹನ್ನೊಂದರ ಬಳಗ

ಆರ್‌ಸಿಬಿ: ವಿರಾಟ್ ಕೊಹ್ಲಿ(ನಾಯಕ), ಫಾಫ್‌ ಡು ಪ್ಲೆಸಿಸ್, ಮಹಿಪಾಲ್‌ ಲೋಮ್ರಾರ್, ಗ್ಲೆನ್‌ ಮ್ಯಾಕ್ಸ್‌ವೆಲ್‌, ಸುಯಶ್‌ ಪ್ರಭುದೇಸಾಯಿ, ಶಾಬಾಜ್‌ ಅಹಮದ್, ದಿನೇಶ್‌ ಕಾರ್ತಿಕ್‌, ವನಿಂದು ಹಸರಂಗ, ಹರ್ಷಲ್‌ ಪಟೇಲ್‌, ಡೇವಿಡ್ ವಿಲ್ಲಿ, ಮೊಹಮ್ಮದ್ ಸಿರಾಜ್‌.

ರಾಜಸ್ಥಾನ್ ರಾಯಲ್ಸ್‌ : ಜೋಸ್ ಬಟ್ಲರ್‌, ಯಶಸ್ವಿ ಜೈಸ್ವಾಲ್‌, ಸಂಜು ಸ್ಯಾಮ್ಸನ್‌ (ನಾಯಕ), ದೇವದತ್ ಪಡಿಕ್ಕಲ್‌, ಶಿಮ್ರೊನ್‌ ಹೆಟ್ಮೇಯರ್‌, ರಿಯಾನ್‌ ಪರಾಗ್, ರವಿಚಂದ್ರನ್‌ ಅಶ್ವಿನ್‌, ಆ್ಯಡಂ ಜಂಪಾ, ಟ್ರೆಂಟ್ ಬೌಲ್ಟ್‌, ಸಂದೀಪ್‌ ಶರ್ಮಾ, ಯುಜುವೇಂದ್ರ ಚಹಲ್‌.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹಿಳೆಯರ ವಿಂಬಲ್ಡನ್ ಫೈನಲ್: ಜಾಸ್ಮಿನ್ ಪಾವೊಲಿನಿ ಸೋಲಿಸಿ ಬಾರ್ಬೊರಾ ಕ್ರೆಚಿಕೋವಾ ಚಾಂಪಿಯನ್

ಲಂಡನ್‌ನಲ್ಲಿ ನಡೆದ 2024ರ ವಿಂಬಲ್ಡನ್ ಟೂರ್ನಿಯ ಮಹಿಳಾ ಸಿಂಗಲ್ಸ್ ಫೈನಲ್‌ನಲ್ಲಿ ಜಾಸ್ಮಿನ್...

ಇಂಗ್ಲೆಂಡ್ v/s ವೆಸ್ಟ್‌ ಇಂಡೀಸ್‌ | ಇಂಗ್ಲೆಂಡ್‌ಗೆ ಇನ್ನಿಂಗ್ಸ್‌ ಗೆಲುವು; ಟೆಸ್ಟ್‌ ಕ್ರಿಕೆಟ್‌ಗೆ ವಿದಾಯ ಹೇಳಿದ ಆ್ಯಂಡರ್ಸನ್‌

ಲಂಡನ್‌ನ ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಇಂಗ್ಲೆಂಡ್‌ ಮತ್ತು ವೆಸ್ಟ್‌ ಇಂಡೀಸ್‌ ನಡುವಿನ...

ಯೂರೋ ಕಪ್ | ನೆದರ್‌ಲೆಂಡ್ಸ್ ಮಣಿಸಿ ಇಂಗ್ಲೆಂಡ್ ಫೈನಲ್‌ಗೆ; ಸ್ಪೇನ್ ವಿರುದ್ಧ ಪೈಪೋಟಿ

ನೆದರ್​ಲೆಂಡ್ಸ್ ವಿರುದ್ಧದ ಸೆಮಿಫೈನಲ್‌ ಪಂದ್ಯದಲ್ಲಿ ಹೆಚ್ಚುವರಿ 91ನೇ ನಿಮಿಷದಲ್ಲಿ ಬದಲಿ ಆಟಗಾರ...

ಕೆಲವೇ ತಿಂಗಳ ಅಂತರದಲ್ಲಿ ಏಳು-ಬೀಳು ಎದುರಿಸಿ ಗೆದ್ದು ಬಂದ ಹಾರ್ದಿಕ್ ಪಾಂಡ್ಯ!

ಅಂದು ಡಿಸೆಂಬರ್ 19, 2023. ಐಪಿಎಲ್ 2024ರ ಪಂದ್ಯಾವಳಿಯ ಹರಾಜಿನ ಸಮಯ....