ಬಿಸಿಸಿಐ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ರೋಜರ್ ಬಿನ್ನಿ: ಮೂಲಗಳ ವರದಿ

Date:

ಭಾರತದ ಮಾಜಿ ಆಲ್‌ರೌಂಡರ್, ಕರ್ನಾಟಕದವರಾದ ರೋಜರ್ ಬಿನ್ನಿ ಅವರು ಬಿಸಿಸಿಐ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದಿದ್ದು, ಸದ್ಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ರಾಜೀವ್ ಶುಕ್ಲಾ ಮುಂದಿನ ಚುನಾವಣೆಯವರೆಗೂ ಹಂಗಾಮಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ

- Advertisement -

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ನಿಯಮಗಳ ಪ್ರಕಾರ, 70 ವಯಸ್ಸಿನ ನಂತರ ಯಾವುದೇ ಪದಾಧಿಕಾರಿಗಳು ತಮ್ಮ ಸ್ಥಾನದಲ್ಲಿ ಮುಂದುವರಿಯಲು ಅನರ್ಹರಾಗುತ್ತಾರೆ. ಇತ್ತೀಚಿಗೆ ಜು.19ರಂದು ರೋಜರ್ ಬಿನ್ನಿ ಅವರು 70ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡರು. ಹೀಗಾಗಿ ತಮ್ಮ ಸ್ಥಾನದಿಂದ ಕೆಳಗಿಳಿದಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

2017ರ ಸುಪ್ರೀಂ ಕೋರ್ಟ್‌ನ ಶಿಫಾರಸುಗಳ ಪ್ರಕಾರ, ಬಿಸಿಸಿಐನಂತಹ ಕೆಲವು ಭಾರತೀಯ ಕ್ರೀಡಾ ಸಂಸ್ಥೆಗಳ ಪದಾಧಿಕಾರಿಗಳು ಒಟ್ಟು 9 ವರ್ಷಗಳು ಅಥವಾ ಸತತ ಆರು ವರ್ಷಗಳನ್ನು ಪೂರೈಸಿದ ನಂತರ ಅಧಿಕಾರದಿಂದ ಕೆಳಗಿಳಿಯಬೇಕಾಗುತ್ತದೆ. ಈ ನಿಯಮಗಳು ಹೊಸ ನಾಯಕತ್ವವನ್ನು ಉತ್ತೇಜಿಸುವ ಮತ್ತು ಅಧಿಕಾರದ ಕೇಂದ್ರೀಕರಣವನ್ನು ತಡೆಯುವ ಮೂಲ ಗುರಿಯನ್ನು ಹೊಂದಿದೆ.

ಇದನ್ನು ಓದಿದ್ದೀರಾ? ನನ್ನ ತಂಟೆಗೆ ಬರದಂತೆ ಹೇಳಿ; ಕೋಚ್‌ಗೆ ಎಚ್ಚರಿಕೆ ನೀಡಿದ್ದ ಸೆಹ್ವಾಗ್‌

ಈ ಬೆಳವಣಿಗೆಯೊಂದಿಗೆ ಬಿಸಿಸಿಐ ಭವಿಷ್ಯದ ನೇತೃತ್ವದ ಕುರಿತು ಕುತೂಹಲ ಹೆಚ್ಚಿದೆ. ರೋಜರ್ ಬಿನ್ನಿಯವರು ಮುಂದಿನ ಚುನಾವಣೆಯಲ್ಲಿ ಮರು ಸ್ಪರ್ಧಿಸಿದರೆ ಮತ್ತೆ ಅಧ್ಯಕ್ಷ ಸ್ಥಾನಕ್ಕೆ ಮರಳುವ ಸಾಧ್ಯತೆಯಿದೆ. ಇಲ್ಲದಿದ್ದರೆ ಬಿಸಿಸಿಐಗೆ ಹೊಸ ಅಧ್ಯಕ್ಷರು ನೇಮಕವಾಗಲಿದ್ದಾರೆ.

ಬುಧವಾರ (ಆ.29) ಬಿಸಿಸಿಐನ ಅಪೆಕ್ಸ್ ಕೌನ್ಸಿಲ್ ಸಭೆಯು ಶುಕ್ಲಾ ಅವರ ನೇತೃತ್ವದಲ್ಲಿ ನಡೆದಿದ್ದು, ಸಭೆಯಲ್ಲಿ ಡ್ರೀಮ್ 11 ಒಪ್ಪಂದವನ್ನು ಮುಕ್ತಾಯಗೊಳಿಸುವುದರ ಜೊತೆಗೆ ಮುಂದಿನ ಎರಡೂವರೆ ವರ್ಷಗಳ ಕಾಲ ಹೊಸ ಪ್ರಾಯೋಜಕರ ಹುಡುಕಾಟದ ಬಗ್ಗೆ ಚರ್ಚೆ ನಡೆಸಲಾಗಿದೆ. ಇನ್ನೂ ಸೆಪ್ಟೆಂಬರ್ 10ರಂದು ಏಷ್ಯಾ ಕಪ್ ಪ್ರಾರಂಭವಾಗುವುದರೊಳಗೆ ಹೊಸ ಪ್ರಾಯೋಜಕರನ್ನು ಕಂಡುಕೊಳ್ಳಲಿದೆ. ಇಲ್ಲದಿದ್ದರೆ ಆಟಗಾರರು ಪ್ರಾಯೋಜಕರಿಲ್ಲದ ಜರ್ಸಿ ಧರಿಸಿ ಆಟವಾಡಲಿದ್ದಾರೆ ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...

ಏಷ್ಯನ್ ಗೇಮ್ಸ್: ಬಿಲ್ಲುಗಾರಿಕೆಯಲ್ಲಿ ಇತಿಹಾಸ ಬರೆದ 17 ವರ್ಷದ ಕುಂಕುಮ್‌ಗೆ ಬಂಗಾರ!

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನ 15ನೇ ದಿನ...