ರಣಜಿ ಸೆಮಿಫೈನಲ್ | ರಾಹುಲ್‌ – ಪಡಿಕ್ಕಲ್‌ ಶತಕದ ಆಟ; ಬೃಹತ್‌ ಮೊತ್ತದತ್ತ ಕರ್ನಾಟಕ

Date:

ಉತ್ತರಾಖಂಡದ ವಿರುದ್ಧ ರಣಜಿ ಟ್ರೋಫಿಯ ಸೆಮಿಫೈನಲ್ ಪಂದ್ಯಾವಳಿಯ ಮೊದಲ ದಿನ ರಾಜ್ಯ ಭರ್ಜರಿ ಬ್ಯಾಟಿಂಗ್‌ ಪ್ರದರ್ಶನ ನೀಡಿದೆ. 15ನೇ ಬಾರಿಗೆ ಫೈನಲ್‌ಗೆ ಪ್ರವೇಶಿಸುವ ಇರಾದೆಯಲ್ಲಿರುವ ಕರ್ನಾಟಕ ಮೊದಲ ದಿನವೇ 2 ವಿಕೆಟ್‌ ನಷ್ಟದೊಂದಿಗೆ 355 ರನ್‌ಗಳೊಂದಿಗೆ ಉತ್ತಮ ಸ್ಥಿತಿಯನ್ನು ಕಾಯ್ದುಕೊಂಡಿದೆ.

- Advertisement -

ಟಾಸ್‌ ಗೆದ್ದ ಉತ್ತರಾಖಂಡ ತಂಡ ಕರ್ನಾಟಕವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿತು. ಆದರೆ ನಾಯಕ ಕುನಾಲ್ ಚಾಂಡೇಲಾ ಅವರ ಈ ನಿರ್ಧಾರ ಮೊದಲ ದಿನ ಉತ್ತರಾಖಂಡ ತಂಡಕ್ಕೆ ಮುಳುವಾಗಿ ಪರಿಣಮಿಸಿದೆ. ಏಕೆಂದರೆ ಕರ್ನಾಟಕ ಆಟಗಾರರ ಬ್ಯಾಟಿಂಗ್‌ ಅಬ್ಬರಕ್ಕೆ ಉತ್ತರಾಖಂಡ ಬೌಲರ್‌ಗಳು ನೆಲಕಚ್ಚಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಕೆ ಎಲ್‌ ರಾಹುಲ್‌ ಹಾಗೂ ಮಯಾಂಕ್ ಅಗರ್ವಾಲ್ ಆರಂಭಿಕರಾಗಿ ಮೈದಾನಕ್ಕೆ ಇಳಿದರು. ಮಯಾಂಕ್‌ 32 ಎಸೆತಗಳನ್ನು ಎದುರಿಸಿ 5 ರನ್‌ ಗಳಿಸಿ ಆದಿತ್ಯ ರಾವತ್‌ ಅವರ ಓವರ್‌ನಲ್ಲಿ ಕ್ಯಾಚ್‌ ಕೊಟ್ಟು ವಿಕೆಟ್‌ ಒಪ್ಪಿಸಿದರು. ಆರಂಭದಲ್ಲಿ ಮಯಾಂಕ್‌ ಅವರ ವಿಕೆಟ್‌ ಕಳೆದುಕೊಂಡ ಬಳಿಕ ರಾಜ್ಯಕ್ಕೆ ನಾಯಕ ದೇವದತ್ ಪಡಿಕ್ಕಲ್ – ರಾಹುಲ್‌ ಅದ್ಭುತ ಆಟವಾಡಿದರು. ಇಬ್ಬರು ಶತಕ ಬಾರಿಸಿ ತಂಡಕ್ಕೆ ಆಸರೆಯಾದರು.

ಇದನ್ನು ಓದಿದ್ದೀರಾ? ಸೋತರೂ ಕ್ರೀಡಾಭಿಮಾನಿಗಳ ಮನಗೆದ್ದ ಗುರ್ಬಾಜ್: ಆಫ್ರಿಕಾ ಪಡೆಗೆ ನಡುಕ ಹುಟ್ಟಿಸಿದ ಅಫ್ಘಾನ್ ಆಟಗಾರ

ರಾಹುಲ್‌ ಅತ್ಯುತ್ತಮವಾಗಿ 11 ಬೌಂಡರಿ, 5 ಸಿಕ್ಸರ್‌ಗಳನ್ನು ಸಿಡಿಸಿದರು. ಇದರ ಜತೆ ಪಡಿಕ್ಕಲ್‌ ಕೂಡ ರಾಹುಲ್‌ಗೆ ಅಷ್ಟೇ ವೇಗವಾಗಿ ಜತೆಯಾದರು. 16 ಬೌಂಡರಿ, 2 ಸಿಕ್ಸರ್‌ ಸಹಿತ ಪಡಿಕ್ಕಲ್‌ 148 ರನ್‌ ಗಳೊಂದಿಗೆ ಇನ್ನೂ ಅಂಕಣದಲ್ಲಿದ್ದಾರೆ. ತಂಡ 292 ರನ್‌ಗಳಿಸಿದ್ದಾಗ ರಾಜ್ಯ ರಾಹುಲ್‌ ಅವರ ವಿಕೆಟ್‌ ಕಳೆದುಕೊಂಡಿತು. 141 ರನ್‌ ಗಳಿಸಿ ರಾಹುಲ್‌ ಆದಿತ್ಯ ರಾವತ್‌ ಎಸೆತಕ್ಕೆ ಔಟ್‌ ಆದರು. ರಾಹುಲ್ – ಪಡಿಕ್ಕಲ್ 257 ರನ್‌ಗಳ ಜತೆಯಾಟ ನೀಡಿದರು.

ಕರುಣ್‌ ನಾಯರ್‌ 37 ರನ್‌ನೊಂದಿಗೆ ಪಡಿಕ್ಕಲ್‌ ಜತೆ ಕ್ರೀಸ್‌ನಲ್ಲಿದ್ದಾರೆ. ಮೊದಲ ದಿನದ ಅಂತ್ಯಕ್ಕೆ ಕರ್ನಾಟಕ 90 ಓವರ್‌ಗಳಲ್ಲಿ 355 ಕ್ಕೆ 2 ವಿಕೆಟ್‌ ಕಳೆದುಕೊಂಡು ಅತ್ಯುತ್ತಮ ಸ್ಥಿತಿಯಲ್ಲಿದೆ.

ಪಶ್ಚಿಮ ಬಂಗಾಳ – ಜಮ್ಮು ಕಾಶ್ಮೀರ ನಡುವಿನ ಮತ್ತೊಂದು ಸೆಮಿಫೈನಲ್‌ ಪಂದ್ಯದಲ್ಲಿ ಬಂಗಾಳ ತಂಡ ಮೊದಲ ದಿನದ ಅಂತ್ಯಕ್ಕೆ 90 ಓವರ್‌ಗಳಲ್ಲಿ 249 ರನ್‌ ಗಳಿಸಿ 5 ವಿಕೆಟ್‌ ಕಳೆದುಕೊಂಡಿದೆ. ಸುದೀಪ್ ಕುಮಾರ್ ಘರಾಮಿ 136 ರನ್‌ ಗಳಿಸಿ ಔಟಾಗದೆ ಕ್ರೀಸ್‌ನಲ್ಲಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್ : ಕ್ರೀಡಾಭಿಮಾನಿಗಳಿಗೆ ರೋಮಾಂಚನ, ಭಾರತದ ಮುಡಿಗೇರಿದ 13 ಚಿನ್ನದ ಪದಕಗಳು!

ಜಪಾನಿನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ 13ನೇ ದಿನ ಭಾರತಕ್ಕೆ...

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...