ರಣಜಿ ಟ್ರೋಫಿ: ಡ್ರಾದಲ್ಲಿ ಅಂತ್ಯಗೊಂಡ ಸೆಮಿಫೈನಲ್; ಇನಿಂಗ್ಸ್ ಮುನ್ನಡೆಯೊಂದಿಗೆ ಫೈನಲ್‌ಗೆ ಕರ್ನಾಟಕ

Date:

ಕರ್ನಾಟಕ ಮತ್ತು ಉತ್ತರಾಖಂಡ ನಡುವಿನ ‘ರಣಜಿ ಟ್ರೋಫಿ 2025-26’ನೇ ಸಾಲಿನ ಸೆಮಿಫೈನಲ್ ಪಂದ್ಯವು ಐದನೇ ಹಾಗೂ ಅಂತಿಮ ದಿನದಂದು ಡ್ರಾದಲ್ಲಿ ಅಂತ್ಯಗೊಂಡಿದೆ. ಆದರೆ, ಮೊದಲ ಇನಿಂಗ್ಸ್‌ನಲ್ಲಿ ಸಾಧಿಸಿದ ಭಾರಿ ಮುನ್ನಡೆಯ ಆಧಾರದ ಮೇಲೆ ಕರ್ನಾಟಕ ತಂಡ ಫೈನಲ್ ಪ್ರವೇಶಿಸಿದೆ.

- Advertisement -

ಲಖನೌದ ಏಕನಾ ಕ್ರೀಡಾಂಗಣದಲ್ಲಿ ಟಾಸ್ ಗೆದ್ದ ಉತ್ತರಾಖಂಡ ತಂಡವು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಕರ್ನಾಟಕ, ನಾಯಕ ದೇವದತ್ ಪಡಿಕ್ಕಲ್ ಅವರ ಅಮೋಘ ದ್ವಿಶತಕ (232), ಕೆ.ಎಲ್. ರಾಹುಲ್ (141) ಹಾಗೂ ಯುವ ಪ್ರತಿಭೆ ಸ್ಮರಣ್ ರವಿಚಂದ್ರನ್ (135) ಅವರ ಆಕರ್ಷಕ ಶತಕಗಳ ಬಲದಿಂದ 736 ರನ್‌ಗಳ ಬೃಹತ್ ಮೊತ್ತ ಪೇರಿಸಿತ್ತು. ಈ ಬೃಹತ್ ಮೊತ್ತವನ್ನು ಬೆನ್ನಟ್ಟಿದ ಉತ್ತರಾಖಂಡ ತಂಡವು ಕರ್ನಾಟಕದ ಕರಾರುವಾಕ್ ಬೌಲಿಂಗ್ ದಾಳಿಗೆ ನಲುಗಿ ತನ್ನ ಮೊದಲ ಇನಿಂಗ್ಸ್‌ನಲ್ಲಿ ಕೇವಲ 233 ರನ್‌ಗಳಿಗೆ ಆಲೌಟ್ ಆಗುವ ಮೂಲಕ 503 ರನ್‌ಗಳ ಭಾರಿ ಹಿನ್ನಡೆ ಅನುಭವಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

503 ರನ್‌ಗಳ ಭಾರಿ ಮುನ್ನಡೆಯೊಂದಿಗೆ ತನ್ನ ಎರಡನೇ ಇನಿಂಗ್ಸ್ ಆರಂಭಿಸಿದ ಕರ್ನಾಟಕ 323 ರನ್‌ಗಳಿಗೆ ಆಲೌಟ್ ಆಗುವ ಮೂಲಕ, ಉತ್ತರಾಖಂಡ ತಂಡಕ್ಕೆ ಬರೋಬ್ಬರಿ 827 ರನ್‌ಗಳ ಅಸಾಧ್ಯ ಗುರಿಯನ್ನು ನೀಡಿತು.

ಇದನ್ನು ಓದಿದ್ದೀರಾ? ಬ್ಯಾಟ್ ಬೀಸಿದ ‘ಫಿನಿಶರ್’ಗೆ ಕ್ಲೀನ್ ಬೌಲ್ಡ್ ಆದ ಸಂಸದೆ

ಈ ಬೃಹತ್ ಗುರಿಯನ್ನು ಬೆನ್ನಟ್ಟಿದ ಉತ್ತರಾಖಂಡ, ಅಂತಿಮ ದಿನದಾಟದ ಅಂತ್ಯಕ್ಕೆ ತನ್ನ ಎರಡನೇ ಇನಿಂಗ್ಸ್‌ನಲ್ಲಿ 6 ವಿಕೆಟ್ ಕಳೆದುಕೊಂಡು 260 ರನ್ ಗಳಿಸಿ ಹೋರಾಟ ನಡೆಸುತ್ತಿದ್ದಾಗ ಉಭಯ ನಾಯಕರ ಸಮ್ಮತಿಯ ಮೇರೆಗೆ ಪಂದ್ಯವನ್ನು ಡ್ರಾ ಎಂದು ಘೋಷಿಸಲಾಯಿತು. ಪಂದ್ಯವು ಡ್ರಾಗೊಂಡರೂ, ಟೂರ್ನಿಯ ನಿಯಮದ ಪ್ರಕಾರ ಮೊದಲ ಇನಿಂಗ್ಸ್‌ನಲ್ಲಿ ಮುನ್ನಡೆ ಸಾಧಿಸಿದ ಕಾರಣ ಕರ್ನಾಟಕ ತಂಡವು ಪ್ರಶಸ್ತಿ ಸುತ್ತಿಗೆ (ಫೈನಲ್‌) ಅರ್ಹತೆ ಪಡೆದುಕೊಂಡಿದೆ.

ಫೆಬ್ರವರಿ 24ರಂದು ಫೈನಲ್ ಕದನ
ರಣಜಿ ಟ್ರೋಫಿಯ ಪ್ರಶಸ್ತಿ ಸುತ್ತಿಗೆ ಲಗ್ಗೆಯಿಟ್ಟಿರುವ ಕರ್ನಾಟಕ ತಂಡವು, ಫೆಬ್ರವರಿ 24ರಂದು ಆರಂಭವಾಗಲಿರುವ ಮಹತ್ವದ ಫೈನಲ್ ಪಂದ್ಯದಲ್ಲಿ ಬಲಿಷ್ಠ ಜಮ್ಮು ಮತ್ತು ಕಾಶ್ಮೀರ ತಂಡವನ್ನು ಎದುರಿಸಲಿದೆ. ಭರ್ಜರಿ ಫಾರ್ಮ್‌ನಲ್ಲಿರುವ ರಾಜ್ಯ ತಂಡವು ಈ ಮೂಲಕ ಮತ್ತೊಂದು ರಣಜಿ ಕಿರೀಟವನ್ನು ಮುಡಿಗೇರಿಸಿಕೊಳ್ಳುವ ವಿಶ್ವಾಸದಲ್ಲಿದೆ.

ಸಂಕ್ಷಿಪ್ತ ಸ್ಕೋರ್:
ಕರ್ನಾಟಕ (ಮೊದಲ ಇನಿಂಗ್ಸ್): 736/10 (ದೇವದತ್ ಪಡಿಕ್ಕಲ್ 232, ಕೆ.ಎಲ್. ರಾಹುಲ್ 141, ಸ್ಮರಣ್ ರವಿಚಂದ್ರನ್ 135)
ಉತ್ತರಾಖಂಡ (ಮೊದಲ ಇನಿಂಗ್ಸ್): 233/10
ಕರ್ನಾಟಕ (ಎರಡನೇ ಇನಿಂಗ್ಸ್): 323/10
ಉತ್ತರಾಖಂಡ (ಎರಡನೇ ಇನಿಂಗ್ಸ್): 260/6 (ಪಂದ್ಯ ಡ್ರಾ)

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಬಿಲ್ಲುಗಾರಿಕೆಯಲ್ಲಿ ಇತಿಹಾಸ ಬರೆದ 17 ವರ್ಷದ ಕುಂಕುಮ್‌ಗೆ ಬಂಗಾರ!

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನ 15ನೇ ದಿನ...

ಏಷ್ಯನ್ ಗೇಮ್ಸ್: 4 ದಶಕಗಳ ಬಳಿಕ ಮಹಿಳಾ ಹಾಕಿಯಲ್ಲಿ ಭಾರತಕ್ಕೆ ಒಲಿದ ಸುವರ್ಣ ಪದಕ

ಜಪಾನಿನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಮಹಿಳಾ ಹಾಕಿ...