ರಚಿನ್‌ ರವೀಂದ್ರ ಶತಕ; ಮೊದಲ ಇನಿಂಗ್ಸ್‌ನಲ್ಲಿ ಕಿವೀಸ್‌ 356 ರನ್‌ ಮುನ್ನಡೆ

Date:

ಮಧ್ಯಮ ಕ್ರಮಾಂಕದ ಆಟಗಾರ ಬೆಂಗಳೂರು ಮೂಲದ ರಚಿನ್‌ ರವೀಂದ್ರ ಅವರ ಅಮೋಘ ಶತಕ ಹಾಗೂ ಬೌಲರ್‌ ಟಿಮ್‌ ಸೌಥಿ ಅವರ ಭರ್ಜರಿ ಅರ್ಧ ಶತಕದ ನೆರವಿನಿಂದ ನ್ಯೂಜಿಲೆಂಡ್‌ ತಂಡ ಮೊದಲ ಇನಿಂಗ್ಸ್‌ನಲ್ಲಿ 91.3 ಓವರ್‌ಗಳಲ್ಲಿ 402 ಗಳನ್ನು ದಾಖಲಿಸಿ, 356 ರನ್‌ಗಳ ಮುನ್ನಡೆ ಪಡೆದಿದೆ.

- Advertisement -

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್‌ನ ಮೂರನೇ ದಿನವಾದ ಇಂದು 180/3 ವಿಕೆಟ್‌ ನಷ್ಟದೊಂದಿಗೆ ಆಟ ಆರಂಭಿಸಿದ ಕಿವೀಸ್ ಪಡೆಗೆ ರಚಿನ್‌ ರವೀಂದ್ರ ಹಾಗೂ ಟಿಮ್‌ ಸೌಥಿ ಆಸರೆಯಾದರು. ಉಳಿದ ಬ್ಯಾಟರ್‌ಗಳು ಭಾರತದ ಬೌಲಿಂಗ್‌ ದಾಳಿಗೆ ಸಿಲುಕಿ ಪೆವಿಲಿಯನ್‌ಗೆ ತೆರಳುತ್ತಿದ್ದರೆ ರಚಿನ್‌ ರವೀಂದ್ರ ಹಾಗೂ ಟಿಮ್‌ ಸೌಥಿ ಉತ್ತಮ ಜೊತೆಯಾಟದೊಂದಿಗೆ ತಂಡವನ್ನು 400 ಗಡಿ ದಾಟಲು ಕಾರಣರಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಈ ಸುದ್ದಿ ಓದಿದ್ದೀರಾ? ತೆಲಂಗಾಣ ಡಿಎಸ್‌ಪಿ ಆಗಿ ಅಧಿಕಾರ ವಹಿಸಿಕೊಂಡ ಕ್ರಿಕೆಟಿಗ ಮೊಹಮ್ಮದ್ ಸಿರಾಜ್‌

137 ರನ್‌ಗಳ 8ನೇ ವಿಕೆಟ್‌ ಜೊತೆಯಾಟದೊಂದಿಗೆ ಇಬ್ಬರು ಆಟಗಾರರು ಭರ್ಜರಿ ಆಟವಾಡಿದರು. ರಚಿನ್‌ ರವೀಂದ್ರ 157 ಎಸೆತಗಳಲ್ಲಿ 13 ಬೌಂಡರಿ ಹಾಗೂ 4 ಸಿಕ್ಸರ್‌ಗಳೊಂದಿಗೆ 137 ರನ್‌ ಬಾರಿಸಿದರು. ರಚಿನ್‌ಗೆ ಉತ್ತಮ ಜೊತೆ ನೀಡಿದ ಟಿಮ್‌ ಸೌಥಿ 73 ಚೆಂಡುಗಳಲ್ಲಿ 5 ಬೌಂಡರಿ ಹಾಗೂ 4 ಸಿಕ್ಸರ್‌ಗಳೊಂದಿಗೆ 65 ರನ್‌ ಸಿಡಿಸಿದರು.

ಟೀಂ ಇಂಡಿಯಾ ಪರ ರವೀಂದ್ರ ಜಡೇಜಾ ಹಾಗೂ ಕುಲ್‌ದೀಪ್‌ ಯಾದವ್‌ ತಲಾ 3 ವಿಕೆಟ್, ಸಿರಾಜ್‌ 2 ಹಾಗೂ ಅಶ್ವಿನ್‌, ಬುಮ್ರಾ ತಲಾ ಒಂದೊಂದು ವಿಕೆಟ್‌ ಕಬಳಿಸಿ ನ್ಯೂಜಿಲೆಂಡ್‌ ಆಲೌಟ್‌ ಆಗಲು ಪ್ರಮುಖ ಪಾತ್ರ ವಹಿಸಿದರು.

2ನೇ ಇನಿಂಗ್ಸ್‌ ಆರಂಭಿಸಿರುವ ಭಾರತ ಟೀ ವಿರಾಮದ ವೇಳೆಗೆ ವಿಕೆಟ್‌ ನಷ್ಟವಿಲ್ಲದೆ 6 ಓವರ್‌ಗಳಲ್ಲಿ 22 ರನ್‌ ಗಳಿಸಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹ್ಯಾಟ್ರಿಕ್ ಗೆಲುವಿನ ಬೆನ್ನಲ್ಲೇ ನಾಯಕತ್ವಕ್ಕೆ ವಿದಾಯ: ದಿಟ್ಟ ನಿರ್ಧಾರದೊಂದಿಗೆ ನಿರ್ಗಮಿಸಿದ ಹರ್ಮನ್‌ಪ್ರೀತ್ ಕೌರ್

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಸ್ಥಾನದಿಂದ ಕೆಳಗಿಳಿಯುತ್ತಿರುವುದಾಗಿ ಹರ್ಮನ್‌ಪ್ರೀತ್ ಕೌರ್...

ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆಗೆ ಅವಕಾಶ ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಅಸ್ತು

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆಗಳನ್ನು ನಡೆಸಲು ದೆಹಲಿ ಪೊಲೀಸರು ಅನುಮತಿ...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವ್ಯಕ್ತಿಗತ ಚಿನ್ನದ ಕೊರತೆ; ಒಲಿಂಪಿಕ್ಸ್‌ಗೆ ಎಚ್ಚರಿಕೆಯ ಗಂಟೆ

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ...

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...