ಕೊಹ್ಲಿ, ರೋಹಿತ್ ನಂತರ ಟಿ20 ಕ್ರಿಕೆಟ್‌ಗೆ ರವೀಂದ್ರ ಜಡೇಜಾ ವಿದಾಯ

Date:

ಭಾರತ ಟಿ20 ವಿಶ್ವಕಪ್‌ ಗೆದ್ದ ನಂತರ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಆಲ್‌ರೌಂಡರ್‌ ರವೀಂದ್ರ ಜಡೇಜಾ ನಿವೃತ್ತಿ ಘೋಷಿಸಿದ್ದಾರೆ. ವಿರಾಟ್‌ ಕೊಹ್ಲಿ ಹಾಗೂ ರೋಹಿತ್‌ ಶರ್ಮಾ ನಿನ್ನೆಯಷ್ಟೆ ಚುಟುಕು ಕ್ರಿಕೆಟ್‌ಗೆ ವಿದಾಯ ಹೇಳಿದ್ದರು.

- Advertisement -

ವೆಸ್ಟ್‌ ಇಂಡೀಸ್‌ನ ಬರ್‌ಬೊಡೊಸ್‌ನ ಕೆನ್ಸಿಂಗ್‌ಟನ್‌ ಓವಲ್‌ನಲ್ಲಿ ನಡೆದ ಟಿ20 ವಿಶ್ವಕಪ್‌ನ ಫೈನಲ್‌ ಪಂದ್ಯದಲ್ಲಿ ಟೀಂ ಇಂಡಿಯಾ ದಕ್ಷಿಣ ಅಫ್ರಿಕಾವನ್ನು 7 ರನ್‌ಗಳಿಂದ ಮಣಿಸಿ ಎರಡನೇ ಬಾರಿಗೆ ಟ್ರೋಫಿಯನ್ನು ತನ್ನದಾಗಿಸಿಕೊಂಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಈ ಸುದ್ದಿ ಓದಿದ್ದೀರಾ? ಟಿ20 ವಿಶ್ವಕಪ್ ಫೈನಲ್ | ರೋಚಕ ಹಣಾಹಣಿಯಲ್ಲಿ ಟೀಮ್ ಇಂಡಿಯಾ ‘ಚಾಂಪಿಯನ್’

“ಹೃದಯ ಪೂರ್ವಕ ಕೃತಜ್ಞತೆಯೊಂದಿಗೆ, ನಾನು ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಹೇಳುತ್ತಿದ್ದೇನೆ. ಸದೃಢ ಕುದುರೆ ಹೆಮ್ಮೆಯಿಂದ ಓಡುತ್ತಿರುವಂತೆ, ನಾನು ನನ್ನ ದೇಶಕ್ಕೆ ಯಾವಾಗಲು ಉತ್ತಮವಾದುದದನ್ನೇ ನೀಡಿದ್ದು,ಮುಂದೆಯೂ ಇತರ ಮಾದರಿಗಳಲ್ಲಿಯೂ ಅದನ್ನೇ ಮುಂದುವರಿಸುತ್ತೇನೆ. ನನ್ನ ಟಿ20 ಅಂತಾರಾಷ್ಟ್ರೀಯ ವೃತ್ತಿಯ ಶಿಖರದಲ್ಲಿ ಟಿ20 ವಿಶ್ವಕಪ್‌ ಗೆಲ್ಲುವ ಕನಸು ನನಸಾಗಿದೆ. ನೆನಪುಗಳು, ಸಂತೋಷಗಳು ಹಾಗೂ ಅಚಲ ಬೆಂಬಲ ನೀಡಿದಕ್ಕೆ ಧನ್ಯವಾದಗಳು” ಎಂದು ರವೀಂದ್ರ ಜಡೇಜಾ ಇನ್‌ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.

36 ವರ್ಷದ ರವೀಂದ್ರ ಜಡೇಜಾ ತಮ್ಮ ಟಿ20 ಅಂತಾರಾಷ್ಟ್ರೀಯ ವೃತ್ತಿಯಲ್ಲಿ 2009ರಿಂದ 2024ರವರೆಗೆ ಒಟ್ಟು 74 ಪಂದ್ಯಗಳಲ್ಲಿ 41 ಇನಿಂಗ್ಸ್ ಆಡಿದ್ದು ಬ್ಯಾಟಿಂಗ್‌ನಲ್ಲಿ ಒಟ್ಟು 515 ರನ್‌ ಬಾರಿಸಿದ್ದಾರೆ. ಅವರ ಅತ್ಯುತ್ತಮ ಸ್ಕೋರ್‌ 46. ಬೌಲಿಂಗ್‌ನಲ್ಲಿ 71 ಇನಿಂಗ್ಸ್‌ಗಳಿಂದ 54 ವಿಕೆಟ್ ಕಬಳಿಸಿದ್ದು 3/15 ಅವರ ಅತ್ಯುತ್ತಮ ಬೌಲಿಂಗ್‌ . ಕ್ಷೇತ್ರ ರಕ್ಷಣೆಯಲ್ಲಿ 28 ಕ್ಯಾಚ್‌ಗಳನ್ನು ಹಿಡಿದಿದ್ದಾರೆ.

Ravindra jadeja insta

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...

ಏಷ್ಯನ್ ಗೇಮ್ಸ್: ಬಿಲ್ಲುಗಾರಿಕೆಯಲ್ಲಿ ಇತಿಹಾಸ ಬರೆದ 17 ವರ್ಷದ ಕುಂಕುಮ್‌ಗೆ ಬಂಗಾರ!

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನ 15ನೇ ದಿನ...