ಇಂಗ್ಲೆಂಡ್ ವಿರುದ್ಧ ಮೊದಲ ಟೆಸ್ಟ್ ಕ್ರಿಕೆಟ್ ಸೋಲಿನ ಆಘಾತದಲ್ಲಿರುವ ಟೀಂ ಇಂಡಿಯಾಗೆ ಎರಡನೇ ಟೆಸ್ಟ್‌ನಲ್ಲಿ ಸ್ಟಾರ್ ಆಟಗಾರರ ಕೊರತೆ ಎದುರಾಗಿದೆ.
ಫೆ.2ರಂದು ವಿಶಾಖ ಪಟ್ಟಣದಲ್ಲಿ ನಡೆಯುವ ಎರಡನೇ ಟೆಸ್ಟ್ ಪಂದ್ಯದಲ್ಲಿ ರವೀಂದ್ರ ಜಡೇಜಾ ಹಾಗೂ ಕೆ ಎಲ್ ರಾಹುಲ್ ತಂಡದಿಂದ ಹೊರಗುಳಿಯಲಿದ್ದಾರೆ.
ರವೀಂದ್ರ ಜಡೇಜಾ ಮಂಡಿರಜ್ಜು ಗಾಯದಿಂದ ಬಳಲುತ್ತಿದ್ದರೆ, ಕೆ ಎಲ್ ರಾಹುಲ್‌ಗೆ ಬಲಗಾಲಿನ ಸ್ನಾಯುಸೆಳೆತದ ಸಮಸ್ಯೆಯುಂಟಾಗಿದೆ. ಇಬ್ಬರು ಆಟಗಾರರನ್ನು ಬಿಸಿಸಿಐ ವೈದ್ಯಕೀಯ ತಂಡ ಮೇಲ್ವಿಚಾರಣೆ ನಡೆಸುತ್ತಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೂವರು ಮಾನಗೆಟ್ಟ ನಾಯಕರು ಮತ್ತು ರಾಮ ರಾಜಕಾರಣ
ಇಬ್ಬರು ಆಟಗಾರರ ಅನುಪಸ್ಥಿತಿಯ ಹಿನ್ನೆಲೆಯಲ್ಲಿ ಸರ್ಫರಾಜ್ ಖಾನ್, ಸೌರಭ್ ಕುಮಾರ್ ಹಾಗೂ ವಾಷಿಂಗ್ಟನ್ ಸುಂದರ್ ಅವರನ್ನು ತಂಡಕ್ಕೆ ಕರೆಸಿಕೊಳ್ಳಲಾಗಿದೆ.
ಎರಡನೇ ಟೆಸ್ಟ್ ಆಡುವ ಟೀಂ ಇಂಡಿಯಾ ತಂಡ
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಸರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್. ಸಿರಾಜ್, ಮುಖೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪ ನಾಯಕ), ಅವೇಶ್ ಖಾನ್, ರಜತ್ ಪಾಟಿದಾರ್, ಸರ್ಫರಾಜ್ ಖಾನ್, ವಾಷಿಂಗ್ಟನ್ ಸುಂದರ್, ಸೌರಭ್ ಕುಮಾರ್.