ಸ್ಪಿನ್ನರ್‌ಗಳ ದಾಳಿಗೆ 235 ರನ್‌ಗಳಿಗೆ ಕಿವೀಸ್ ಆಲೌಟ್: ದಾಖಲೆ ಬರೆದ ರವೀಂದ್ರ ಜಡೇಜಾ

Date:

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ಸ್ಪಿನ್ನರ್‌ಗಳಾದ ರವೀಂದ್ರ ಜಡೇಜಾ ಹಾಗೂ ವಾಷಿಂಗ್ಟನ್‌ ಸುಂದರ್‌ ಸ್ಪಿನ್‌ ದಾಳಿಗೆ ಸಿಲುಕಿದ ಕಿವೀಸ್‌ ತಂಡ 65.4 ಓವರ್‌ಗಳಲ್ಲಿ 235 ರನ್‌ಗಳಿಗೆ ಆಲೌಟ್‌ ಆಗಿದೆ.

- Advertisement -

ರವಿಂದ್ರ ಜಡೇಜಾ 65/5 ವಿಕೆಟ್‌ ಕಬಳಿಸಿದರೆ, ವಾಷಿಂಗ್ಟನ್‌ ಸುಂದರ್ 81/4 ವಿಕೆಟ್ ಕಿತ್ತರು. ನ್ಯೂಜಿಲೆಂಡ್‌ ಪರ ಡೇರಿಲ್ ಮಿಚೆಲ್ (82) ಹಾಗೂ ವಿಲ್‌ ಯಂಗ್‌ (71) ರನ್‌ ಗಳಿಸಿ ತಂಡ 200ರ ಗಡಿ ದಾಟಲು ನೆರವಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ಟಾಸ್ ಗೆದ್ದ ನ್ಯೂಜಿಲೆಂಡ್ ನಾಯಕ ಟಾಮ್ ಲೇಥಮ್ ಮೊದಲು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡರು. ಡೆವೊನ್ ಕಾನ್ವೆ ಅವರನ್ನು ಆಕಾಶ್‌ ದೀಪ್‌ ಪೆವಿಲಿಯನ್‌ಗೆ ಕಳಿಸಿದರೆ, ಉಳಿದ 9 ಆಟಗಾರರು ಜಡೇಜಾ ಹಾಗೂ ವಾಷಿಂಗ್ಟನ್‌ ಸುಂದರ್‌ ಸ್ಪಿನ್‌ ದಾಳಿಗೆ ಔಟಾದರು.

ಈ ಸುದ್ದಿ ಓದಿದ್ದೀರಾ? ಈ ದಿನ ವಿಶೇ‍‍ಷ | ಮಹಿಳಾ ಸ್ಟಾರ್ ಕ್ರಿಕೆಟರ್ ಸ್ಮೃತಿ ಮಂಧಾನ ಬಗ್ಗೆ ನಿಮಗೆಷ್ಟು ಗೊತ್ತು?

ದಾಖಲೆ ಬರೆದ ರವೀಂದ್ರ ಜಡೇಜಾ

ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಭಾರತದ ಪರ ಅತಿ ಹೆಚ್ಚು ವಿಕೆಟ್ ಗಳಿಸಿದ ಬೌಲರ್‌ಗಳ ಪಟ್ಟಿಯಲ್ಲಿ ಎಡಗೈ ಸ್ಪಿನ್ನರ್ ರವೀಂದ್ರ ಜಡೇಜ ಮೊದಲ ಐದರ ಪಟ್ಟಿಗೆ ಲಗ್ಗೆ ಇಟ್ಟಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಈವರೆಗೆ 312 ವಿಕೆಟ್‌ಗಳನ್ನು ಗಳಿಸಿದ್ದಾರೆ.
ಆ ಮೂಲಕ ಮಾಜಿ ವೇಗಿಗಳಾದ ಜಹೀರ್ ಖಾನ್ (311) ಮತ್ತು ಇಶಾಂತ್ ಶರ್ಮಾ (311) ದಾಖಲೆಯನ್ನು ಮುರಿದಿದ್ದಾರೆ.

ಭಾರತದ ಪರ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಗಳಿಸಿದ ಬೌಲರ್‌ಗಳ ಪಟ್ಟಿಯಲ್ಲಿ ಅನಿಲ್ ಕುಂಬ್ಳೆ (619) ಮುಂಚೂಣಿಯಲ್ಲಿದ್ದಾರೆ. ರವಿಚಂದ್ರನ್ ಅಶ್ವಿನ್ (533), ಕಪಿಲ್ ದೇವ್ (434) ಮತ್ತು ಹರಭಜನ್ ಸಿಂಗ್ (417) ಅನುಕ್ರಮವಾಗಿ ನಂತರದ ಸ್ಥಾನದಲ್ಲಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್ ಕಬಡ್ಡಿ: ಇರಾನ್‌ ಮಣಿಸಿ ಪುರುಷ, ಮಹಿಳಾ ವಿಭಾಗಗಳಲ್ಲಿ ಭಾರತಕ್ಕೆ ಜೋಡಿ ಚಿನ್ನದ ಸಂಭ್ರಮ

ಜಪಾನ್‌ನ ಐಚಿ–ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಕ್ರೀಡಾಕೂಟದ ಕಬಡ್ಡಿ ಅಂಕಣದಲ್ಲಿ...

ಏಷ್ಯನ್ ಗೇಮ್ಸ್: ಮ್ಯಾರಥಾನ್‌ನಲ್ಲಿ ಐತಿಹಾಸಿಕ ಬೆಳ್ಳಿ, ಶೂಟಿಂಗ್‌ನಲ್ಲೂ ಬೆಳಗಿದ ಭಾರತ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ 8ನೇ ದಿನದಂದು ಭಾರತೀಯ...

ಸಂಜು ಬದಲು ವೈಭವ್‌ಗೆ ಅವಕಾಶ ನೀಡಿದ್ದೇಕೆ: ಕಠಿಣ ನಿರ್ಧಾರದ ಹಿಂದಿನ ಅನಿವಾರ್ಯತೆ ವಿವರಿಸಿದ ಗಂಭೀರ್

ಮುಂಬರುವ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಸ್ಫೋಟಕ ಬ್ಯಾಟರ್ ಸಂಜು ಸ್ಯಾಮ್ಸನ್...

ಏಷ್ಯನ್ ಗೇಮ್ಸ್: ಜಪಾನ್ ಅಂಗಳದಲ್ಲಿ ಭಾರತದ ಭರ್ಜರಿ ಪ್ರದರ್ಶನ; ಶೂಟರ್‌ಗಳ ಕಮಾಲ್, ಕ್ರಿಕೆಟ್‌ನಲ್ಲಿ ಮಿನುಗಿದ ಚಿನ್ನ

ಜಪಾನ್‌ನ ಐಚಿ–ನಾಗೋಯಾದಲ್ಲಿ ಅತ್ಯಂತ ಅದ್ದೂರಿಯಾಗಿ ನಡೆಯುತ್ತಿರುವ 20ನೇ ಆವೃತ್ತಿಯ ಏಷ್ಯನ್ ಗೇಮ್ಸ್...