ಬಿಸಿಸಿಐ ನಿಯಮ ಉಲ್ಲಂಘಿಸಿದ ರವೀಂದ್ರ ಜಡೇಜಾ; ನಿಷೇಧ ಶಿಕ್ಷೆ ಸಾಧ್ಯತೆ

Date:

ಎಡ್ಜ್‌ಬಾಸ್ಟನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ, ಟೀಮ್ ಇಂಡಿಯಾದ ಆಲ್‌ರೌಂಡರ್ ರವೀಂದ್ರ ಜಡೇಜಾ ದಿನದ ಆಟ ಆರಂಭವಾಗುವ ಮೊದಲೇ ದೊಡ್ಡ ತಪ್ಪನ್ನು ಎಸಗಿದ್ದಾರೆ.

- Advertisement -

ಈ ಟೆಸ್ಟ್ ಪಂದ್ಯದಲ್ಲಿ ಜಡೇಜಾ 89 ರನ್ ಗಳಿಸಿ ತಂಡಕ್ಕೆ ನರವಾದರೂ, ಅವರು ಬಿಸಿಸಿಐ ನಿಯಮವನ್ನು ಮುರಿದಿದ್ದಾರೆ. ಆಸ್ಟ್ರೇಲಿಯಾ ಪ್ರವಾಸದ ನಂತರ, ಬಿಸಿಸಿಐ ಎಲ್ಲ ಆಟಗಾರರು ಮತ್ತು ಸಹಾಯಕ ಸಿಬ್ಬಂದಿಗೆ ಕೆಲವು ಹೊಸ ಮಾರ್ಗಸೂಚಿಗಳನ್ನು ಹೊರಡಿಸಿತ್ತು. ಅದನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕೇಳಲಾಗಿತ್ತು. ಆದಾಗ್ಯೂ, ಎಡ್ಜ್‌ಬಾಸ್ಟನ್ ಟೆಸ್ಟ್ ಪಂದ್ಯದ ಎರಡನೇ ದಿನದ ಆಟ ಪ್ರಾರಂಭವಾಗುವ ಮೊದಲು, ಜಡೇಜಾ ಒಂದು ದೊಡ್ಡ ನಿಯಮವನ್ನು ಮುರಿದರು, ಇದಕ್ಕಾಗಿ ಮಂಡಳಿಯಿಂದ ಶಿಕ್ಷೆಯಾಗುತ್ತದೆಯೇ ಎಂಬುದರ ಮೇಲೆ ಎಲ್ಲರ ಕುತೂಹಲ ಮೂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಎರಡನೇ ದಿನದ ಆಟ ಶುರು ಆಗುವುದಕ್ಕೂ ಮುನ್ನ, ಟಮ ಇಂಡಿಯಾ ತಮ್ಮ ಹೋಟೆಲ್‌ನಿಂದ ಕ್ರೀಡಾಂಗಣಕ್ಕೆ ಬರುತ್ತಿದ್ದಾಗ, ಜಡೇಜಾ ಬಿಸಿಸಿಐ ಮಾಡಿದ ನಿಯಮವನ್ನು ನಿರ್ಲಕ್ಷಿಸಿದರು. ಭಾರತದ 2024-25 ಆಸ್ಟ್ರೇಲಿಯಾ ಪ್ರವಾಸದ ನಂತರ ಜಾರಿಗೆ ತರಲಾದ ಬಿಸಿಸಿಐ ಶಿಷ್ಟಾಚಾರವನ್ನು ರವೀಂದ್ರ ಜಡೇಜಾ ಉಲ್ಲಂಘಿಸಿದರು.

ಇದನ್ನು ಓದಿದ್ದೀರಾ? IND -ENG 2ND Test: ಮೊದಲ ದಿನ ಭಾರತ ಶುಭಾರಂಭ; ಗಿಲ್‌ ಶತಕ, ಜೈಸ್ವಾಲ್‌ ಅರ್ಧ ಶತಕ

ಈ ಶಿಷ್ಟಾಚಾರದ ಪ್ರಕಾರ, ಎಲ್ಲ ಆಟಗಾರರು ತಂಡದ ಬಸ್‌ನಲ್ಲಿ ಒಟ್ಟಿಗೆ ಮೈದಾನಕ್ಕೆ ಮತ್ತು ಹೊರಗೆ ಪ್ರಯಾಣಿಸಬೇಕಾಗುತ್ತದೆ, ಇದರಲ್ಲಿ ಯಾವುದೇ ವೈಯಕ್ತಿಕ ಚಲನೆಗೆ ಅವಕಾಶವಿಲ್ಲ, ಆದರೆ ಬರ್ಮಿಂಗ್ಹ್ಯಾಮ್ ಟೆಸ್ಟ್ ಪಂದ್ಯದ ಎರಡನೇ ದಿನದಂದು, ಜಡೇಜಾ ತಂಡದ ಬಸ್‌ನಲ್ಲಿ ಕ್ರೀಡಾಂಗಣವನ್ನು ತಲುಪಲಿಲ್ಲ. ಅವರು ಇಲ್ಲಿಗೆ ಒಬ್ಬಂಟಿಯಾಗಿ ಬಂದು ಎಸ್‌ಒಪಿಯನ್ನು ಉಲ್ಲಂಘಿಸಿದರು. ಉಳಿದ ಆಟಗಾರರು ಬರುವ ಮೊದಲು ಅವರು ಎಡ್ಜ್‌ಬಾಸ್ಟನ್ ತಲುಪಿದ್ದರು. ಆದರೆ, ತಂಡದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಜಡೇಜಾ ಈ ನಿಯಮವನ್ನು ಮುರಿದಿದ್ದಾರೆ ಎನ್ನಲಾಗಿದೆ.

ಎರಡನೇ ದಿನದಾಟದಲ್ಲಿ ಉತ್ತಮವಾಗಿ ಬ್ಯಾಟಿಂಗ್ ಮಾಡಿದ ರವಿಂದ್ರ ಜಡೇಜಾ 89 ರನ್‌ ಗಳಿಸುವ ಮೂಲಕ ಟೀಂ ಇಂಡಿಯಾ 500 ರನ್‌ ದಾಟಲು ಕೊಡುಗೆ ನೀಡಿದರು. 7 ವಿಕೆಟ್‌ ಜೊತೆಯಾಟದಲ್ಲಿ ನಾಯಕ ಶುಭಮನ್‌ ಗಿಲ್‌ ಅವರೊಂದಿಗೆ 203 ರನ್‌ ಪೇರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...

ಏಷ್ಯನ್ ಗೇಮ್ಸ್: ಬಿಲ್ಲುಗಾರಿಕೆಯಲ್ಲಿ ಇತಿಹಾಸ ಬರೆದ 17 ವರ್ಷದ ಕುಂಕುಮ್‌ಗೆ ಬಂಗಾರ!

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನ 15ನೇ ದಿನ...

ಏಷ್ಯನ್ ಗೇಮ್ಸ್: 4 ದಶಕಗಳ ಬಳಿಕ ಮಹಿಳಾ ಹಾಕಿಯಲ್ಲಿ ಭಾರತಕ್ಕೆ ಒಲಿದ ಸುವರ್ಣ ಪದಕ

ಜಪಾನಿನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಮಹಿಳಾ ಹಾಕಿ...