ಐಪಿಎಲ್ | ಧರ್ಮಶಾಲಾದಲ್ಲಿ ಮಿಂಚಿದ ವಿರಾಟ್ ಕೊಹ್ಲಿ: ಆರ್‌ಸಿಬಿಗೆ ಪಂಜಾಬ್ ವಿರುದ್ಧ ಭರ್ಜರಿ ಜಯ

Date:

ಧರ್ಮಶಾಲಾ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್‌ನ 58ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸುವ ಮೂಲಕ ಅಭಿಮಾನಿಗಳ ಫೇವರೀಟ್ ತಂಡ ಆರ್‌ಸಿಬಿ, 60 ರನ್‌ಗಳ ಭರ್ಜರಿ ಜಯ ಗಳಿಸಿದೆ. ಈ ಗೆಲುವಿನೊಂದಿಗೆ ಪ್ಲೇ ಆಫ್ ತಲುಪುವ ಕನಸನ್ನು ಆರ್‌ಸಿಬಿ ಇನ್ನೂ ಕೂಡ ಜೀವಂತವಾಗಿರಿಸಿದೆ.

- Advertisement -

ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ್ದ ರಾಯಲ್ ಚಾಲೆಂಜರ್ಸ್‌ ಬೆಂಗಳೂರು, ವಿರಾಟ್ ಕೊಹ್ಲಿಯವರ ಸ್ಫೋಟಕ ಅರ್ಧಶತಕದ(92 ರನ್, 47 ಎಸೆತ, 7 ಬೌಂಡರಿ, 6 ಸಿಕ್ಸ್) ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 241 ರನ್‌ಗಳನ್ನು ಪೇರಿಸುವ ಮೂಲಕ, ಪಂಜಾಬ್ ಗೆಲುವಿಗೆ 242 ರನ್‌ಗಳ ಬೃಹತ್ ಗುರಿಯನ್ನು ನೀಡಿತ್ತು. ಇದು ಧರ್ಮಶಾಲಾ ಸ್ಟೇಡಿಯಂನಲ್ಲಿ ಟಿ20ಯಲ್ಲಿ ದಾಖಲಾದ ಗರಿಷ್ಠ ಮೊತ್ತದ ಸ್ಕೋರ್ ಆಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ ಪಂಜಾಬ್ ತಂಡವು, 17 ಓವರ್‌ಗಳಲ್ಲಿ 181 ರನ್‌ ಗಳಿಸುವಷ್ಟರಲ್ಲಿ ಆಲೌಟ್ ಆಯಿತು.

ಪಂಜಾಬ್, ಮೊದಲ ಓವರ್‌ನಲ್ಲೇ ಪ್ರಭುಸಿಮ್ರಾನ್ ಸಿಂಗ್ ಅವರ ವಿಕೆಟ್ ಕಳೆದುಕೊಂಡಿತರಾದರೂ, ಬಳಿಕ ಕ್ರೀಸ್‌ಗೆ ಬಂದ ರೂಸ್ಸೋ, ಜಾನಿ ಬೈರ್‌ಸ್ಟೋವ್ ಜೊತೆಗೆ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಬೌಂಡರಿ, ಸಿಕ್ಸರ್‌ಗಳ ಮೂಲಕ ಆರ್‌ಸಿಬಿ ಬೌಲರ್‌ಗಳನ್ನು ಬೆದರಿಸಿದ ಈ ಜೋಡಿಯನ್ನು ಲಾಕಿ ಫರ್ಗೂಸನ್ ಬೇರ್ಪಡಿಸಿದರು. ಆರ್‌ಸಿಬಿ ನಾಯಕ ಫಾಫ್ ಡು ಪ್ಲೆಸಿ ಹಿಡಿದ ಅದ್ಭುತ ಕ್ಯಾಚ್‌ಗೆ ಬಲಿಯಾದರು.

ಔಟಾಗುವುದಕ್ಕೂ ಮುನ್ನ ಬೈರ್‌ಸ್ಟೋವ್ 16 ಎಸೆತಗಳಲ್ಲಿ 4 ಬೌಂಡರಿ ಹಾಗೂ 1 ಸಿಕ್ಸರ್‌ನ ನೆರವಿನಿಂದ 27 ರನ್ ಗಳಿಸಿದರು. ಬೈರ್‌ಸ್ಟೋವ್ ವಿಕೆಟ್ ಕಳೆದುಕೊಂಡರೂ ಕೂಡ ಎದೆಗುಂದದ ರೂಸ್ಸೋ, ತನ್ನ ಆಕ್ರಮಣಕಾರಿ ಬ್ಯಾಟಿಂಗ್ ಮುಂದುವರಿಸಿದರು. 27 ಎಸೆತಗಳಲ್ಲಿ 3 ಭರ್ಜರಿ ಸಿಕ್ಸರ್ ಹಾಗೂ 9 ಬೌಂಡರಿಯ ನೆರವಿನಿಂದ 61 ರನ್ ಗಳಿಸಿದ್ದಾಗ, ಕರಣ್ ಶರ್ಮಾ ಎಸೆತದಲ್ಲಿ ಕ್ಯಾಚಿತ್ತು ವಿಕೆಟ್ ಒಪ್ಪಿಸಿದರು.

RUN

ಆ ಬಳಿಕ ಕ್ರೀಸ್‌ಗೆ ಬಂದ ಜಿತೇಶ್ ಶರ್ಮಾ(5 ರನ್) ಹಾಗೂ ಸ್ಪೋಟಕ ಬ್ಯಾಟರ್ ಲಿವಿಂಗ್‌ಸ್ಟನ್ ಇಂದಿನ ಪಂದ್ಯದಲ್ಲಿ ಮಿಂಚಲು ಆಗಲಿಲ್ಲ. ಲಿವಿಂಗ್‌ಸ್ಟನ್ ಸ್ವಪ್ನಿಲ್ ಸಿಂಗ್ ಎಸೆತದಲ್ಲಿ ಕರಣ್ ಶರ್ಮಾಗೆ ಕ್ಯಾಚಿತ್ತು ಶೂನ್ಯಕ್ಕೆ ಔಟಾದರು.

ಪಂದ್ಯದ ಗತಿಯನ್ನೇ ಬದಲಿಸಿದ ವಿರಾಟ್ ಕೊಹ್ಲಿಯವರ ‘ವಂಡರ್‌ಫುಲ್ ರನೌಟ್’

ಕ್ರೀಸ್‌ನಲ್ಲಿದ್ದ ಬಂದ ಪಂಜಾಬ್ ನಾಯಕ ಸ್ಯಾಮ್ ಕರಣ್ ಹಾಗೂ ಶಶಾಂಕ್ ಸಿಂಗ್ ಜೋಡಿಯು ಉತ್ತಮ ಜೊತೆಯಾಟದ ಮುನ್ಸೂಚನೆ ನೀಡುತ್ತಿರುವಾಗಲೇ, 13.3 ಓವರ್‌ನ ವೇಳೆ ಎರಡು ರನ್ ಕದಿಯುವ ಭರದಲ್ಲಿ ವಿರಾಟ್ ಕೊಹ್ಲಿ ಎಸೆದ ಅನಿರೀಕ್ಷಿತ ಅದ್ಭುತವಾದ ಥ್ರೋಗೆ ಶಶಾಂಕ್ ಸಿಂಗ್ ಕೂದಲೆಳೆ ಅಂತರದಲ್ಲಿ ರನೌಟ್ ಆದರು. ಇದು ಪಂದ್ಯದ ಗತಿಯನ್ನೇ ಆರ್‌ಸಿಬಿ ಕಡೆಗೆ ವಾಲಿಸಿತು. ಶಶಾಂಕ್‌ ಸಿಂಗ್‌ 19 ಎಸೆತಗಳಲ್ಲಿ 37 ರನ್‌ ಗಳಿಸಿದರು.

ಆ ಬಳಿಕ ಕ್ರೀಸ್‌ಗೆ ಬಂದ ಅಶುತೋಶ್ ಶರ್ಮಾ, ಮೊಹಮ್ಮದ್ ಸಿರಾಜ್ ಎಸೆತದಲ್ಲಿ ಎಲ್‌ಬಿಡಬ್ಲ್ಯೂ ಬಲೆಗೆ ಬಿದ್ದರು. ಪಂಜಾಬ್ ನಾಯಕ ಸ್ಯಾಮ್ ಕರಣ್ 22 ರನ್ ಗಳಿಸಿ, ಲಾಕಿ ಫರ್ಗೂಸನ್‌ಗೆ ವಿಕೆಟ್ ಒಪ್ಪಿಸಿದರು. ಕೊನೆಯಲ್ಲಿ ಪಂಜಾಬ್ ತಂಡವು 17 ಓವರ್‌ಗಳಲ್ಲಿ 17 ಓವರ್‌ಗಳಲ್ಲಿ 181 ರನ್‌ ಗಳಿಸುವಷ್ಟರಲ್ಲಿ ಆಲೌಟ್ ಆಯಿತು.

ಆರ್‌ಸಿಬಿ ಪರವಾಗಿ ಬೌಲಿಂಗ್‌ನಲ್ಲಿ ಮೊಹಮ್ಮದ್ ಸಿರಾಜ್ 3 ವಿಕೆಟ್ ಪಡೆದು ಮಿಂಚಿದರೆ, ಕರಣ್ ಶರ್ಮಾ, ಲಾಕಿ ಫರ್ಗೂಸನ್‌ ಹಾಗೂ ಸ್ವಪ್ನಿಲ್ ಸಿಂಗ್ ತಲಾ ಎರಡು ವಿಕೆಟ್ ಗಳಿಸುವಲ್ಲಿ ಸಫಲರಾದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...