2025ರ ಐಪಿಎಲ್ ಟೂರ್ನಿಗೆ ಕ್ಷಣಗಣನೆ ಆರಂಭವಾಗಿದೆ. ಇಂದಿನಿಂದ(ಮಾರ್ಚ್ 22) ಟೂರ್ನಿ ಆರಂಭವಾಗಲಿದೆ. ಈ ಬಾರಿ 18ನೇ ಆವೃತ್ತಿಯ ಪಂದ್ಯಾವಳಿ ನಡೆಯುತ್ತಿದ್ದು, ಉದ್ಘಾಟನಾ ಪಂದ್ಯವು ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಲಿದೆ.
ಉದ್ಘಾಟನಾ ಪಂದ್ಯವು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯುತ್ತಿದ್ದು, ಆರ್‌ಸಿಬಿಯ ನೂತನ ನಾಯಕ ರಜತ್ ಪಾಟೀದಾರ್ ಟಾಸ್ ಗೆದ್ದಿದ್ದು, ಬೌಲಿಂಗ್ ಅನ್ನು ಆಯ್ಕೆ ಮಾಡಿಕೊಂಡಿದ್ದಾರೆ.
ಉದ್ಘಾಟನಾ ಸಮಾರಂಭಕ್ಕೆ ಮೆರುಗು ನೀಡಿದ ಶಾರುಖ್ ಖಾನ್, ಶ್ರೇಯಾ ಘೋಷಾಲ್
ಉದ್ಘಾಟನಾ ಪಂದ್ಯಕ್ಕೂ ಮುನ್ನ ಅದ್ದೂರಿ ಉದ್ಘಾಟನಾ ಸಮಾರಂಭವು ನಡೆಯಿತು. ಈ ಕಾರ್ಯಕ್ರಮಕ್ಕೆ ಬಾಲಿವುಡ್ ನಟ ಶಾರುಖ್ ಖಾನ್, ದಿಶಾ ಪಠಾಣಿ, ಗಾಯಕಿ ಶ್ರೇಯಾ ಘೋಷಾಲ್ ಸೇರಿದಂತೆ ಅನೇಕರು ಮೆರುಗು ನೀಡಿದರು. ಆರ್‌ಸಿಬಿಯ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ವೇದಿಕೆಯಲ್ಲಿ ಶಾರುಖ್ ಖಾನ್ ಜೊತೆಗೆ ಪಠಾಣ್ ಸಿನಿಮಾದ ‘ಜೂಮೆ ಜೊ ಪಠಾಣ್’ ಹಾಡಿಗೆ ಸ್ಟೆಪ್ ಹಾಕಿದರು.
King Khan 🤝 King Kohli
— IndianPremierLeague (@IPL) March 22, 2025
When two kings meet, the stage is bound to be set on fire 😍#TATAIPL 2025 opening ceremony graced with Bollywood and Cricket Royalty 🔥#KKRvRCB | @iamsrk | @imVkohli pic.twitter.com/9rQqWhlrmM
ಈ ಬಾರಿಯ ಐಪಿಎಲ್‌ನಲ್ಲಿ ಒಟ್ಟು 23 ಕಡೆಗಳಲ್ಲಿ 74 ಪಂದ್ಯಗಳು ನಡೆಯಲಿದ್ದು, ಮೇ 25ರಂದು ಫೈನಲ್ ಪಂದ್ಯವು ನಡೆಯಲಿದೆ.