ಐಪಿಎಲ್ | ಮಯಾಂಕ್ ಮಿಂಚು: ಅಭಿಮಾನಿಗಳಿಗೆ ತವರಲ್ಲೇ ನಿರಾಸೆ ಮೂಡಿಸಿದ ಆರ್‌ಸಿಬಿ!

Date:

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆದ ಐಪಿಎಲ್‌ನ 15ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸೋಲನುಭವಿಸುವ ಮೂಲಕ ಅಭಿಮಾನಿಗಳಿಗೆ ತವರಲ್ಲೇ ನಿರಾಸೆ ಮೂಡಿಸಿದೆ.

ಲಕ್ನೋ ಸೂಪರ್ ಜೈಂಟ್ಸ್ ನೀಡಿದ್ದ 182 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಫಾಫ್ ಡು ಪ್ಲೆಸಿಸ್ ನೇತೃತ್ವದ ಬೆಂಗಳೂರು ತಂಡ, 19.4 ಓವರ್‌ಗಳಲ್ಲಿ 153ಕ್ಕೆ ಆಲೌಟ್ ಆಗುವ ಮೂಲಕ 28 ರನ್‌ಗಳಿಂದ ಸೋಲನುಭವಿಸಿದೆ.

ಲಕ್ನೋ ಸೂಪರ್‌ ಜೈಂಟ್ಸ್‌ನ ಕರಾರುವಕ್ಕಾದ ಬೌಲಿಂಗ್‌ಗೆ ಗುರಿ ತಲುಪಲು ಎಡವಿದ ಬೆಂಗಳೂರು, ತವರಲ್ಲೇ ಸೋಲುವ ಮೂಲಕ ನಿರಾಸೆ ಉಂಟು ಮಾಡಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಆರ್‌ಸಿಬಿ ಪರ ಇನ್ನಿಂಗ್ಸ್‌ ಆರಂಭಿಸಿದ್ದ ವಿರಾಟ್ ಕೊಹ್ಲಿ ಹಾಗೂ ಫಾಫ್ ಡು ಪ್ಲೆಸಿ ಉತ್ತಮ ಆರಂಭ ನೀಡುವಲ್ಲಿ ವಿಫಲವಾದರು. 16 ಎಸೆತಗಳಲ್ಲಿ 22 ರನ್ ಬಾರಿಸಿದ್ದ ವಿರಾಟ್ ಕೊಹ್ಲಿ ಸಿದ್ಧಾರ್ಥ್ ಮಣಿಮಾರನ್ ಎಸೆದ 5ನೇ ಓವರ್​ನ ಮೊದಲ ಎಸೆತದಲ್ಲಿ ವಿಕೆಟ್ ಒಪ್ಪಿಸಿದರು. ಸಿಂಗಲ್ ತೆಗೆಯುವ ಯತ್ನದಲ್ಲಿ ಫಾಫ್ ಡುಪ್ಲೆಸಿಸ್ ರನೌಟ್ ಆದರು. ಔಟಾಗುವ ಮುನ್ನ 19 ರನ್ ಗಳಿಸಿದ್ದರು.

ಆರ್‌ಸಿಬಿ ಪರ ಉಳಿದಂತೆ ಇಂಪ್ಯಾಕ್ಟ್‌ ಪ್ಲೇಯರ್ ಆಗಿ ಬಂದ ಲೋಮ್‌ರೋರ್ 13 ಎಸೆತಗಳಲ್ಲಿ 33 ರನ್ ಗಳಿಸಿ ಗರಿಷ್ಠ ಸ್ಕೋರರ್ ಎನಿಸಿದರು. ರಜತ್‌ ಪಾಟೀದಾರ್ 29 ರನ್, ಅನುಜ್ ರಾವತ್ 11 ರನ್ ಗಳಿಸಿದರು.

ಲಕ್ನೋದ ಯುವ ಬೌಲರ್ ಮಯಾಂಕ್ ಯಾದವ್ ಬೌಲಿಂಗ್‌ಗೆ ರನ್ ಗಳಿಸಲು ಪರದಾಡಿದ ಆರ್‌ಸಿಬಿಯ ಪ್ರಮುಖ ಮೂವರು ಬ್ಯಾಟರ್‌ಗಳು ವಿಕೆಟ್ ಒಪ್ಪಿಸಿದರು. ಮಯಾಂಕ್ ಯಾದವ್ ನಾಲ್ಕು ಓವರ್‌ಗಳಲ್ಲಿ ಕೇವಲ 14 ರನ್ ನೀಡಿ 3 ವಿಕೆಟ್ ಕಿತ್ತು ಮಿಂಚಿದರು.

ಉಳಿದಂತೆ ಲಕ್ನೋ ಪರ ನವೀನ್ ಉಲ್ ಹಕ್ 2, ಸ್ಟೋಯ್ನಿಸ್, ಸಿದ್ಧಾರ್ಥ್‌, ಬಿಷ್ಣೋಯ್ ಹಾಗೂ ಯಶ್ ತಲಾ ಒಂದೊಂದು ವಿಕೆಟ್ ಹಂಚಿಕೊಂಡರು.

ಆರ್‌ಸಿಬಿ ಈ ಸೋಲಿನೊಂದಿಗೆ ಈವರೆಗೆ ಆಡಿದ ನಾಲ್ಕು ಪಂದ್ಯಗಳ ಪೈಕಿ ಮೂರರಲ್ಲಿ ಸೋತಿದ್ದು, ಕೇವಲ ಒಂದರಲ್ಲಷ್ಟೇ ಗೆಲುವು ಪಡೆದಿದೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಪಿಎಲ್ | ಹೆಟ್ಮಾಯರ್ ಸ್ಫೋಟಕ ಬ್ಯಾಟಿಂಗ್: ರೋಚಕ ಹಣಾಹಣಿಯಲ್ಲಿ ಪಂಜಾಬ್‌ಗೆ ಸೋಲುಣಿಸಿದ ರಾಜಸ್ಥಾನ

ಚಂಡೀಗಢದ ಮುಲ್ಲನ್‌ಪುರದ ಮಹಾರಾಜ ಯಾದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು...

ಐಪಿಎಲ್ 2024 | ತಲಾ 5 ಬಾರಿ ಕಪ್‌ ಗೆದ್ದಿರುವ ಮುಂಬೈ – ಚನ್ನೈ ನಡುವೆ ಹಣಾಹಣಿ; ಎಲ್ಲರ ಚಿತ್ತ ವಾಂಖೆಡೆಯತ್ತ!

ಐಪಿಎಲ್‌ನ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್‌ (ಸಿಎಸ್‌ಕೆ) ಮತ್ತು ಮುಂಬೈ...

ಐಪಿಎಲ್ | ಕೆ ಎಲ್ ರಾಹುಲ್ ನೇತೃತ್ವದ ಲಕ್ನೋಗೆ ಸೋಲುಣಿಸಿದ ಡೆಲ್ಲಿ ಕ್ಯಾಪಿಟಲ್ಸ್‌

ಲಕ್ನೋ ಇಂಟರ್​ ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ಶುಕ್ರವಾರ ನಡೆದ ಐಪಿಎಲ್‌ನ 26ನೇ...

ಪ್ಯಾರಿಸ್ ಒಲಿಂಪಿಕ್ಸ್‌ನ ಭಾರತದ ಮುಖ್ಯಸ್ಥ ಸ್ಥಾನಕ್ಕೆ ಮೇರಿ ಕೋಮ್ ರಾಜೀನಾಮೆ

ಮುಂಬರುವ ಪ್ಯಾರಿಸ್ ಒಲಿಂಪಿಕ್ಸ್‌ನ ಭಾರತದ ಮುಖ್ಯಸ್ಥ ಸ್ಥಾನಕ್ಕೆ ಒಲಿಂಪಿಕ್ ಪದಕ ವಿಜೇತೆ...