ಸೋತ ಆರ್‌ಸಿಬಿಯಿಂದ ಐಪಿಎಲ್ ಇತಿಹಾಸದಲ್ಲೇ ಅತ್ಯಂತ ಹೀನಾಯ ದಾಖಲೆ ನಿರ್ಮಾಣ

Date:

ತವರಿನಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರಿಗೆ ಸತತ ಮೂರನೇ ಸೋಲಾಗಿದೆ. ಮಳೆಯ ಆಟದಲ್ಲಿ ಆರ್‌ಸಿಬಿ ವಿರುದ್ಧ ಪಂಜಾಬ್‌ ಕಿಂಗ್ಸ್‌ 5 ವಿಕೆಟ್‌ಗಳ ಅಂತರದಲ್ಲಿ ಜಯ ಗಳಿಸಿ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೆ ಜಿಗಿದಿದೆ.

- Advertisement -

ಮಳೆಯಿಂದಾಗಿ 7.30ಕ್ಕೆ ಆರಂಭವಾಗಿದ್ದ ಪಂದ್ಯ 2 ಗಂಟೆ ತಡವಾಗಿ 9.45ಕ್ಕೆ ಆರಂಭವಾಯಿತು. ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಆರ್‌ಸಿಬಿ ಆರಂಭದಲ್ಲೇ ವಿಕೆಟ್‌ ಕಳೆದುಕೊಳ್ಳುತ್ತಾ ಸಾಗಿತ್ತು. ಕೊನೆಯಲ್ಲಿ ಟಿಮ್‌ ಡೇವಿಡ್‌ ಅವರ ಸ್ಫೋಟಕ ಅರ್ಧಶತಕದ ನೆರವಿನಿಂದ ಆರ್‌ಸಿಬಿ 9 ವಿಕೆಟ್‌ ನಷ್ಟಕ್ಕೆ 95 ರನ್‌ ಪೇರಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಸುಲಭದ ಸವಾಲನ್ನು ಬೆನ್ನಟ್ಟಿದ ಪಂಜಾಬ್‌ 12.1 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 98 ರನ್‌ ಹೊಡೆದು ಜಯಗಳಿಸಿತು. ಈ ಮೊದಲು ಗುಜರಾತ್‌ ಟೈಟಾನ್ಸ್‌ ಮತ್ತು ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ಪಂದ್ಯವನ್ನು ಸೋತಿತ್ತು. ಈಗ ಮತ್ತೆ ತವರಿನಲ್ಲಿ ಪಂಜಾಬ್‌ ವಿರುದ್ಧ ಪರಾಭವಗೊಂಡಿದೆ.

ಪಂಜಾಬ್‌ ಪರ ನೆಹಾಲ್ ವಧೇರಾ ಔಟಾಗದೇ 33 ರನ್‌ (19 ಎಸೆತ, 3 ಬೌಂಡರಿ, 3 ಸಿಕ್ಸ್‌) ಪ್ರಿಯಾಂಶ್‌ ಆರ್ಯ 16 ರನ್‌, ಪ್ರಭುಸಿಮ್ರಾನ್‌ಸಿಂಗ್‌ 13 ರನ್‌ ಹೊಡೆದು ಜಯವನ್ನು ತಂದುಕೊಟ್ಟರು.

ಈ ಸುದ್ದಿ ಓದಿದ್ದೀರಾ? ಐಪಿಎಲ್ 2025 | ವಂಚಿಸಲು ಹೋಗಿ ಅಂಪೈರ್‌ ಕೈಗೆ ಸಿಕ್ಕಿಬಿದ್ದ ಸುನಿಲ್ ನರೈನ್, ಎನ್ರಿಕ್ ನೋಕಿಯಾ!

ಆರ್‌ಸಿಬಿ ಪರ ಸಾಲ್ಟ್‌ 4 ರನ್‌, ಕೊಹ್ಲಿ 1 ರನ್‌, ನಾಯಕ ಪಾಟೀದರ್‌ 23 ರನ್‌ (18 ಎಸೆತ, 1 ಬೌಂಡರಿ, 1 ಸಿಕ್ಸ್‌ ) ಹೊಡೆದು ಔಟಾದರು. 63 ರನ್‌ಗಳಿಗೆ 9 ವಿಕೆಟ್‌ ಕಳೆದುಕೊಂಡಿದ್ದರೂ ಕೊನೆಯಲ್ಲಿ ಡೇವಿಡ್‌ ಔಟಾಗದೇ ಸ್ಫೋಟಕ 50 ರನ್‌ (26 ಎಸೆತ, 5 ಬೌಂಡರಿ, 3 ಸಿಕ್ಸ್‌) ಹೊಡೆದು ತಂಡದ ಮೊತ್ತವನ್ನು 90 ರನ್‌ಗಳ ಗಡಿಯನ್ನು ದಾಟಿಸಿದರು. ಆರ್ಶ್‌ದೀಪ್‌ ಸಿಂಗ್‌, ಜಾನ್‌ಸೆನ್‌ ಚಹಲ್‌, ಹರ್‌ಪ್ರೀತ್‌ ಬಾರ್‌ ತಲಾ 2 ವಿಕೆಟ್‌ ಪಡೆದರು.

ಆರ್‌ಸಿಬಿಯಿಂದ ಹೀನಾಯ ದಾಖಲೆ

ಈ ಸೋಲಿನೊಂದಿಗೆ ಐಪಿಎಲ್​ ಇತಿಹಾಸದಲ್ಲೇ ತವರು ಮೈದಾನದಲ್ಲಿ ಅತ್ಯಧಿಕ ಪಂದ್ಯಗಳಲ್ಲಿ ಸೋತ ತಂಡವೆಂಬ ಅಪಕೀರ್ತಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಾಲಾಗಿದೆ. ಇದಕ್ಕೂ ಮುನ್ನ ಇಂತಹದೊಂದು ಹೀನಾಯ ದಾಖಲೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಹೆಸರಿನಲ್ಲಿತ್ತು.

ಡೆಲ್ಲಿ ಕ್ಯಾಪಿಟಲ್ಸ್ ತಂಡವು ತನ್ನ ತವರು ಮೈದಾನ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಈವರೆಗೆ 84 ಪಂದ್ಯಗಳನ್ನಾಡಿದೆ. ಈ ವೇಳೆ ಡಿಸಿ ಪಡೆ 45 ಪಂದ್ಯಗಳಲ್ಲಿ ಪರಾಜಯಗೊಂಡಿದೆ. ಈ ಮೂಲಕ ಐಪಿಎಲ್​ನಲ್ಲಿ ತವರು ಮೈದಾನದಲ್ಲಿ ಅತೀ ಹೆಚ್ಚು ಪಂದ್ಯಗಳನ್ನು ಸೋತ ತಂಡವೆಂಬ ಅನಗತ್ಯ ದಾಖಲೆಯೊಂದು ಡೆಲ್ಲಿ ಕ್ಯಾಪಿಟಲ್ಸ್ ನಿರ್ಮಿಸಿತ್ತು.

ಇದೀಗ ಈ ದಾಖಲೆಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುರಿದೆ. ಆರ್​ಸಿಬಿ ತಂಡವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 94 ಪಂದ್ಯಗಳನ್ನು ಆಡಿದೆ. ಈ ವೇಳೆ ಬರೋಬ್ಬರಿ 46 ಮ್ಯಾಚ್​ಗಳಲ್ಲಿ ಸೋಲನುಭವಿಸಿದೆ. ಈ ಮೂಲಕ ಐಪಿಎಲ್​ ಇತಿಹಾಸದಲ್ಲೇ ತವರು ಮೈದಾನದಲ್ಲಿ ಅತೀ ಹೆಚ್ಚು ಪಂದ್ಯಗಳನ್ನು ಸೋತ ಅಪಕೀರ್ತಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನದಾಗಿಸಿಕೊಂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತಕ್ಕೆ ಚಿನ್ನ ತಂದ ಮಹಿಳೆಯರು: ಏಷ್ಯನ್‌ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್‌ ಕಲಿಗಳ ಸಾಧನೆ

ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ...

ಏಷ್ಯನ್ ಗೇಮ್ಸ್: ಸ್ಕೀಟ್ ಶೂಟಿಂಗ್, ಸಾಫ್ಟ್ ಟೆನಿಸ್‌ನಲ್ಲಿ ಭಾರತಕ್ಕೆ ಕಂಚು; ಪದಕದತ್ತ ಮೀರಾಬಾಯಿ ದಾಪುಗಾಲು

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ ನಾಲ್ಕನೇ ದಿನವಾದ ಬುಧವಾರ...

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...

ಸೋತರೂ ಎಲ್ಲರ ಹೃದಯ ಗೆದ್ದ ಸುಚಿಕಾ: 700 ಗ್ರಾಂ ಹಿನ್ನಡೆಯಿಂದ ತಪ್ಪಿದ ಚಿನ್ನ

ಮಹಿಳೆಯರ ಸಾಂಪ್ರದಾಯಿಕ 60 ಕೆ.ಜಿ ವಿಭಾಗದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ)...