ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ; ಆರ್‌ಸಿಬಿ ಆಟಗಾರ ಯಶ್ ದಯಾಳ್‌ ವಿರುದ್ಧ ಪೋಕ್ಸೋ ಪ್ರಕರಣ

Date:

Advertisements

ಅಪ್ರಾಪ್ತೆಯೊಬ್ಬರ ಮೇಲೆ 2‌ ವರ್ಷಗಳಿಂದ ನಿರಂತರ ಅತ್ಯಾಚಾರವೆಸಗಿದ ಆರೋಪದ ಮೇಲೆ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು(ಆರ್‌ಸಿಬಿ) ತಂಡದ ಸ್ಟಾರ್‌ ವೇಗಿ ಯಶ್ ದಯಾಳ್‌ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಲಾಗಿದೆ.

2025ರ ಐಪಿಎಲ್‌ ಮುಕ್ತಾಯಗೊಂಡ ಕೆಲ ದಿನಗಳಿಂದ ಸ್ಟಾರ್‌ ವೇಗಿಗೆ ಮೇಲಿಂದ ಮೇಲೆ ಸಂಕಷ್ಟ ಎದುರಾಗುತ್ತಿದೆ. ಕೆಲ ದಿನಗಳ ಹಿಂದೆಯಷ್ಟೇ ಗಾಜಿಯಾಬಾದ್‌ನ ಯುವತಿಯೊಬ್ಬರು ದಯಾಳ್ ವಿರುದ್ಧ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಆರೋಪಿಸಿ, ದೂರು ದಾಖಲಿಸಿದ್ದರು. ಈ ಸಂಬಂಧ ಪ್ರಕರಣ ಕೂಡ ದಾಖಲಾಗಿತ್ತು. ಇದೀಗ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿರುವ ಆರೋಪದ ಮೇಲೆ ಪೋಕ್ಸೋ ಕೇಸ್‌ ದಾಖಲಾಗಿದೆ.

ಬಾಲಕಿಯೊಬ್ಬಳ ಮೇಲೆ 2 ವರ್ಷಗಳಿಂದ ಅತ್ಯಾಚಾರ ಎಸಗಿರುವ ಆರೋಪದ ಮೇಲೆ ಜೈಪುರದ ಸಂಗನೇರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಭಾವನಾತ್ಮಕವಾಗಿ ನನ್ನನ್ನ ಕಟ್ಟಿಹಾಕಿ, ಕ್ರಿಕೆಟ್‌ ವೃತ್ತಿ ಜೀವನದಲ್ಲಿ ಉತ್ತಮ ಅವಕಾಶ ಕೊಡಿಸುವುದಾಗಿ ಆಮಿಷ ಒಡ್ಡಿದ್ದಾನೆ. ಆಮಿಷ ಒಡ್ಡಿ 2 ವರ್ಷಗಳ ಕಾಲ ಪದೇ ಪದೇ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮಹದಾಯಿ: ನಾಯಕರೇ ನಾಡದ್ರೋಹಿಗಳು

ಕ್ರಿಕೆಟ್‌ ವೃತ್ತಿಜೀವನದ ಬಗ್ಗೆ ಸಲಹೆ ನೀಡುವುದಾಗಿ, ಉತ್ತಮ ಭವಿಷ್ಯ ಕಲ್ಪಿಸುವುದಾಗಿ ಹೇಳಿದ್ದ ದಯಾಳ್‌ ಜೈಪುರದ ಸೀತಾಪುರ ಹೋಟೆಲ್‌ಗೆ ಕರೆದಿದ್ದ. ಅಲ್ಲಿ ಮೊದಲ ಬಾರಿಗೆ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಪ್ರಕರಣ ನಡೆದಾಗ ನನಗೆ 17 ವರ್ಷ ವಯಸ್ಸಾಗಿತ್ತು. ಅಲ್ಲಿಂದ 2 ವರ್ಷಗಳ ಕಾಲ ಪದೇ ಪದೇ ನನ್ನ ಮೇಲೆ ದೌರ್ಜನ್ಯ ಎಸಗಿದ್ದಾನೆ ಎಂದು ಸಂತ್ರಸ್ತೆ ಹೇಳಿಕೊಂಡಿದ್ದಾರೆ. ಈ ಹಿನ್ನೆಲೆ ಪೋಕ್ಸೊ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಕೆಲ ದಿನಗಳ ಹಿಂದಷ್ಟೇ ಗಾಜಿಯಾಬಾದ್‌ನ ಯುವತಿಯೊಬ್ಬರು ಯಶ್ ದಯಾಳ್ ವಿರುದ್ಧ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಆರೋಪಿಸಿ, ದೂರು ದಾಖಲಿಸಿದ್ದರು. ಎಫ್‌ಐಆರ್‌ ಕೂಡ ದಾಖಲಾಗಿತ್ತು. ಈ ನಡುವೆ ಅಲಹಾಬಾದ್‌ ಹೈಕೋರ್ಟ್‌ ದಯಾಳ್‌ ಬಂಧನಕ್ಕೆ ತಡೆ ನೀಡಿತ್ತು. ಇದಾದ ಕೆಲ ದಿನಗಳಲ್ಲೇ ಪೋಕ್ಸೋ ಕೇಸ್‌ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಪ್ಯಾ ಕಪ್ ಫೈನಲ್ : ಪಾಕ್ ವಿರುದ್ಧ ಟೀಮ್ ಇಂಡಿಯಾಗೆ ರೋಚಕ ಜಯ; 9ನೇ ಬಾರಿ ಚಾಂಪಿಯನ್

ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ಸಂಜೆ ನಡೆದ ಏಪ್ಯಾ ಕಪ್ ಫೈನಲ್...

ಬಿಸಿಸಿಐ ನೂತನ ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ ಮಿಥುನ್ ಮನ್ಹಾಸ್ ಆಯ್ಕೆ; ಯಾರಿವರು?

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ನೂತನ ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ...

ಶೀತಲ್ ದೇವಿಗೆ ಐತಿಹಾಸಿಕ ಚಿನ್ನ; ವಿಶ್ವ ಪ್ಯಾರಾ ಆರ್ಚರಿಯಲ್ಲಿ ಭಾರತದ ಹೆಮ್ಮೆ

ದಕ್ಷಿಣ ಕೊರಿಯಾದ ಗ್ವಾಂಗ್ಜುನಲ್ಲಿ ನಡೆದ ವಿಶ್ವ ಪ್ಯಾರಾ ಆರ್ಚರಿ ಚಾಂಪಿಯನ್‌ಶಿಪ್‌ನಲ್ಲಿ ಭಾರತದ...

Asia CUP2025 | ‘ಸೂಪರ್ ಓವರ್’ ಪಂದ್ಯದಲ್ಲಿ ಲಂಕಾ ಮಣಿಸಿ, ಫೈನಲ್‌ಗೆ ಭಾರತ ಲಗ್ಗೆ

ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಶುಕ್ರವಾರ ನಡೆದ ಏಷ್ಯಾ ಕಪ್‌ ಕ್ರಿಕೆಟ್‌...

Download Eedina App Android / iOS

X