ಆರ್‌ಸಿಬಿ-ರಾಜಸ್ಥಾನ್ ಎಲಿಮಿನೇಟರ್ ಪಂದ್ಯ | ಸೋತವರು ಮನೆಗೆ; ಗೆದ್ದವರಿಗೆ ಮತ್ತೊಂದು ಅಗ್ನಿಪರೀಕ್ಷೆ

Date:

ಒಂದೆಡೆ ಯಾರೂ ನಿರೀಕ್ಷಿಸದ ರೀತಿಯಲ್ಲಿ ಅದ್ಭುತ ‘ಕಮ್‌ಬ್ಯಾಕ್‌’ ಮೂಲಕ ಸತತ 6 ಪಂದ್ಯಗಳಲ್ಲಿ ಗೆದ್ದಿರುವ ಫಾಫ್ ಡು ಪ್ಲೆಸಿಸ್ ನೇತೃತ್ವದ ಆರ್‌ಸಿಬಿ. ಮತ್ತೊಂದೆಡೆ ಸತತ 4 ಪಂದ್ಯಗಳ ಸೋಲಿನೊಂದಿಗೆ ಕುಗ್ಗಿ ಹೋಗಿರುವ ಸಂಜು ಸ್ಯಾಮ್ಸನ್ ನೇತೃತ್ವದ ಮಾಜಿ ಚಾಂಪಿಯನ್‌ ರಾಜಸ್ಥಾನ ರಾಯಲ್ಸ್‌ ತಂಡ. ಈ ಎರಡೂ ತಂಡಗಳು ಇಂದು(ಮೇ 22) ಬುಧವಾರ 17ನೇ ಆವೃತ್ತಿ ಐಪಿಎಲ್‌ನ ಎಲಿಮಿನೇಟರ್‌ನಲ್ಲಿ ಸೆಣಸಾಡಲಿವೆ.

- Advertisement -

ಗೆಲ್ಲುವ ತಂಡ ಎರಡನೇ ಕ್ವಾಲಿಫೈಯರ್‌ ಪಂದ್ಯಕ್ಕೆ ಅರ್ಹತೆ ಗಿಟ್ಟಿಸಿಕೊಳ್ಳಲಿದ್ದು, ಸೋಲುವ ತಂಡ ಟೂರ್ನಿಯಿಂದಲೇ ಹೊರಬೀಳಲಿದೆ. ಎರಡನೇ ಕ್ವಾಲಿಫೈಯರ್‌ ಪಂದ್ಯವಯ ಸನ್‌ರೈಸರ್ಸ್‌ ಹೈದರಾಬಾದ್ ವಿರುದ್ಧ ಚೆನ್ನೈಯಲ್ಲಿ ಮೇ 24ರಂದು ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಟೂರ್ನಿಯ ಆರಂಭಿಕ ಎಂಟು ಪಂದ್ಯಗಳ ಪೈಕಿ ಏಳರಲ್ಲಿ ಸೋತಿದ್ದ ಆರ್‌ಸಿಬಿ ಪ್ಲೇ-ಆಫ್‌ ಪ್ರವೇಶಿಸಿದ್ದೇ ಎಲ್ಲರನ್ನೂ ಅಚ್ಚರಿಗೊಳಗಾಗುವಂತೆ  ಆಶ್ಚರ್ಯ. ಅತ್ತ ರಾಜಸ್ಥಾನ ಮೊದಲಾರ್ಧದಲ್ಲಿ ಅಬ್ಬರಿಸಿದ್ದರೂ, ಸದ್ಯ ಮಂಕಾಗಿದೆ. ಲೀಗ್‌ ಹಂತದ ಕೊನೆ ಪಂದ್ಯ ಮಳೆಗಾಹುತಿಯಾಗಿದ್ದು ಗಾಯದ ಮೇಲೆ ಬರೆ ಎಳೆದಂತಾಗಿದೆ.

ಆರ್‌ಸಿಬಿ ಪರ ಟೂರ್ನಿಯುದ್ದಕ್ಕೂ ಅಬ್ಬರಿಸಿರುವ ವಿರಾಟ್‌ ಕೊಹ್ಲಿ ಮೇಲೆ ಹೆಚ್ಚಿನ ಭಯ ಇದ್ದರೂ, ಕಳೆದ ಕೆಲವು ಪಂದ್ಯಗಳಲ್ಲಿ ತಂಡದ ಸಂಘಟಿತ ಹೋರಾಟ ಎದುರಾಳಿಗಳನ್ನು ಕಂಗೆಟ್ಟಿಸಿದೆ. ಭಾರೀ ಟೀಕೆಗಳನ್ನು ಎದುರಿಸಿದ್ದ ಆರ್‌ಸಿಬಿ ಬೌಲಿಂಗ್‌ ಪಡೆ, ಈಗ ಬಲಿಷ್ಠ ಬ್ಯಾಟಿಂಗ್‌ ಪಡೆಯನ್ನೇ ಕಟ್ಟಿಹಾಕಬಲ್ಲ ಸಾಮರ್ಥ್ಯ ಹೊಂದಿರುವುದನ್ನು ಕಳೆದ ಸಿಎಸ್‌ಕೆ ವಿರುದ್ಧದ ನಾಕೌಟ್ ಪಂದ್ಯದಲ್ಲಿ ಸಾಬೀತುಪಡಿಸಿದೆ.

ಬೌಲಿಂಗ್‌ ವಿಭಾಗವೂ ಬಲಿಷ್ಠವಾಗಿ ಕಳೆದ 4 ಪಂದ್ಯಗಳ ಪೈಕಿ 3ರಲ್ಲಿ ಎದುರಾಳಿ ತಂಡವನ್ನು ಆಲೌಟ್‌ ಮಾಡಿದೆ. ಅಹಮದಾಬಾದ್‌ನಲ್ಲಿ ಈ ಬಾರಿ ನಡೆದ 12 ಇನ್ನಿಂಗ್ಸ್‌ಗಳ ಪೈಕಿ ಕೇವಲ 2ರಲ್ಲಿ 200+ ಮೊತ್ತ ದಾಖಲಾಗಿದ್ದು, ಶಿಸ್ತುಬದ್ಧ ದಾಳಿ ನಡೆಸಿದರೆ ಆರ್‌ಸಿಬಿಗೆ ಗೆಲುವು ಸುಲಭವಾಗಲಿದೆ.

ಇದನ್ನು ಓದಿದ್ದೀರಾ? ಎಲಿಮಿನೇಟರ್ ಪಂದ್ಯ | ಆರ್‌ಸಿಬಿ ವಿರುದ್ಧ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ರಾಜಸ್ಥಾನ್ ರಾಯಲ್ಸ್‌

ನಿರ್ಣಾಯಕ ಘಟ್ಟದಲ್ಲಿ ಫಾರ್ಮ್‌ಗೆ ಮರಳಿರುವ ಆಸ್ಟ್ರೇಲಿಯಾ ತಾರೆಗಳಾದ ಕ್ಯಾಮರೂನ್‌ ಗ್ರೀನ್‌ ಹಾಗೂ ಗ್ಲೆನ್‌ ಮ್ಯಾಕ್ಸ್‌ವೆಲ್‌ ಅವರ ಪ್ರದರ್ಶನ ತಂಡದ ಗೆಲುವು-ಸೋಲನ್ನು ನಿರ್ಧರಿಸಲಿದೆ. ದಿನೇಶ್‌ ಕಾರ್ತಿಕ್‌ ತಮ್ಮ ನೈಜ ಫಿನಿಶಿಂಗ್‌ ಹುದ್ದೆಯನ್ನು ಮಹತ್ವದ ಪಂದ್ಯದಲ್ಲಿ ಸಮರ್ಥವಾಗಿ ನಿಭಾಯಿಸಬಲ್ಲರೇ ಎಂಬ ಕುತೂಹಲವಿದೆ.

ಆರ್‌ಸಿಬಿಗೆ ಹೋಲಿಸಿದರೆ ರಾಜಸ್ಥಾನದ ಆತ್ಮವಿಶ್ವಾಸ ಸಂಪೂರ್ಣ ಕುಗ್ಗಿದೆ. ಲೀಗ್‌ ಹಂತದಲ್ಲಿ ಆರ್‌ಸಿಬಿ ವಿರುದ್ಧ ಶತಕ ಬಾರಿಸಿ ತಂಡಕ್ಕೆ ಗೆಲುವು ತಂದುಕೊಟ್ಟಿದ್ದ ಜೋಸ್‌ ಬಟ್ಲರ್‌ ಕೂಡಾ ಈ ಪಂದ್ಯಕ್ಕೆ ಲಭ್ಯರಿಲ್ಲ. ಇದು ರಾಜಸ್ಥಾನಕ್ಕೆ ಹಿನ್ನಡೆಯುಂಟು ಮಾಡಿದರೂ ಅಚ್ಚರಿ ಇಲ್ಲ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...