ಐಪಿಎಲ್ 2025 | ಕಪ್‌ಗೆ ಮುತ್ತಿಕ್ಕಲು ಇನ್ನೊಂದೇ ಹೆಜ್ಜೆ ಬಾಕಿ: ಆರ್‌ಸಿಬಿ ಫೈನಲ್‌ಗೆ

Date:

Advertisements

ಕಳೆದ 18 ವರ್ಷಗಳಿಂದ ಅಭಿಮಾನಿಗಳು ಕಾಯುತ್ತಿರುವ ಕನಸು ನನಸಾಗಲು ಇನ್ನೊಂದೇ ಹೆಜ್ಜೆ ಬಾಕಿ.

ಹೌದು, ಐಪಿಎಲ್‌ನಲ್ಲಿ ಅಭಿಮಾನಿಗಳ ಫೇವರೀಟ್ ತಂಡವಾಗಿ ಗುರುತಿಸಿಕೊಂಡಿರುವ ಆರ್‌ಸಿಬಿ 18ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸಿ 4ನೇ ಬಾರಿಗೆ ಫೈನಲ್ ಪ್ರವೇಶಿಸಿದೆ‌.

ಚಂಡೀಗಡದ ಮೈದಾನದಲ್ಲಿ ಗುರುವಾರ ನಡೆದ ಕ್ವಾಲಿಫೈಯ್ಯರ್- 1 ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಇಳಿದಿದ್ದ ಪಂಜಾಬ್ ಕಿಂಗ್ಸ್ ತಂಡವು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾರಕ ಬೌಲಿಂಗ್ ದಾಳಿಗೆ ಕೇವಲ 101 ರನ್ ಗಳಿಸಲಷ್ಟೇ ಶಕ್ತವಾಗಿತ್ತು. ಈ ಗುರಿಯನ್ನು ಬೆನ್ನತ್ತಿದ ಆರ್‌ಸಿಬಿ, ಎಂಟು ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತು. ಆ ಮೂಲಕ ನಾಲ್ಕನೇ ಬಾರಿಗೆ ಫೈನಲ್ ಪ್ರವೇಶಿಸಿದೆ.

Advertisements

ಈ ಮೊದಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 2009, 2011 ಹಾಗೂ 2016ರಲ್ಲಿ ಫೈನಲ್ ಪ್ರವೇಶಿತ್ತಾದರೂ ಪ್ರಶಸ್ತಿ ಗೆಲ್ಲುವಲ್ಲಿ ವಿಫಲವಾಗಿತ್ತು. ಈ ಬಾರಿ ಅಭಿಮಾನಿಗಳ ಕನಸು ನನಸಾಗಿದ್ದು, ನಾಲ್ಕನೆಯ ಬಾರಿಗೆ ಫೈನಲ್ ಪ್ರವೇಶಿಸಿದೆ. ಚಾಂಪಿಯನ್ ಪಟ್ಟಕ್ಕೇರುವಂತೆ ಅಭಿಮಾನಿಗಳು ಪ್ರಾರ್ಥನೆ ಮಾಡುತ್ತಿದ್ದಾರೆ. ಜೂನ್ 3ರಂದು ಗುಜರಾತಿನ ಅಹ್ಮದಾಬಾದಿನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಫೈನಲ್ ಪಂದ್ಯ ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | 10 ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ಸಾಕ್ಷಿ ದೂರುದಾರ

ಧರ್ಮಸ್ಥಳ ಪ್ರದೇಶದ ಸುತ್ತಮುತ್ತಲಿನ ಹಲವು ಕಡೆಗಳಲ್ಲಿ ಅಕ್ರಮವಾಗಿ ಮೃತದೇಹ ಹೂತು ಹಾಕಲಾಗಿದೆ...

ಧರ್ಮಸ್ಥಳ ಪ್ರಕರಣ | ಎಸ್‌ಐಟಿಯನ್ನು ಸರ್ಕಾರ ರಚಿಸಿದ್ದು ಸತ್ಯ ಹೊರತರಲು : ಗೃಹ ಸಚಿವ ಪರಮೇಶ್ವರ್

"ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂತಿದ್ದೇನೆ ಎಂದಿದ್ದ ವ್ಯಕ್ತಿಯನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ....

ಧರ್ಮಸ್ಥಳ ಪ್ರದೇಶದಲ್ಲಿ ಮೃತದೇಹ ಹೂತು ಹಾಕಿದ ಪ್ರಕರಣ: ಸಾಕ್ಷಿ ದೂರುದಾರನ ಬಂಧನ

ಧರ್ಮಸ್ಥಳ ಪ್ರದೇಶದಲ್ಲಿ ಹಲವು ಕಡೆಗಳಲ್ಲಿ ಅಕ್ರಮವಾಗಿ ಮೃತದೇಹ ಹೂತು ಹಾಕಲಾಗಿದೆ ಎಂಬ...

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

Download Eedina App Android / iOS

X