11 ಮಂದಿ ಮೃತರ ನೆನಪಿಗಾಗಿ ಆರ್‌ಸಿಬಿಯಿಂದ ಗೌರವಾರ್ಥ ಸ್ಮಾರಕ

Date:

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತನ್ನ ಮೊದಲ ಐಪಿಎಲ್ ಟ್ರೋಫಿ ಗೆಲುವಿನ ಸಂಭ್ರಮದಲ್ಲಿ ಜೂನ್ 4 ರಂದು ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ದುರಂತದಲ್ಲಿ ಮೃತಪಟ್ಟ 11 ಅಭಿಮಾನಿಗಳ ಗೌರವಾರ್ಥವಾಗಿ ಬೆಂಗಳೂರಿನಲ್ಲಿ ಸ್ಮಾರಕವನ್ನು ಸ್ಥಾಪಿಸುವುದಾಗಿ ಸೋಮವಾರ ಘೋಷಿಸಿದೆ.

- Advertisement -

ಆರ್‌ಸಿಬಿ ತನ್ನ “ಆರ್‌ಸಿಬಿ ಕೇರ್ಸ್” ಎಂಬ ಹೊಸ ಸಾಮಾಜಿಕ ಉಪಕ್ರಮದಡಿಯಲ್ಲಿ ಈ ಘೋಷಣೆ ಮಾಡಿದೆ. ಸ್ಮಾರಕವು ಮೃತರ “ಹೆಸರು, ಕಥೆ ಮತ್ತು ಉತ್ಸಾಹ”ವನ್ನು ಶಾಶ್ವತವಾಗಿ ಕಾಪಾಡಲಿದೆ ಎಂದು ತಿಳಿಸಿದೆ. ಆದರೆ, ಸ್ಮಾರಕದ ಸ್ಥಳವನ್ನು ಇನ್ನೂ ಬಹಿರಂಗಪಡಿಸಿಲ್ಲ. ಈ ಘಟನೆಯ ನಂತರ ಆರ್‌ಸಿಬಿಯ ಮೌನಕ್ಕೆ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ, ತಂಡವು ಆರು ಅಂಶಗಳ ಕಾರ್ಯಯೋಜನೆಯನ್ನು ಘೋಷಿಸಿದೆ. ಪ್ರತಿ ದುರಂತಗೊಂಡ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರವನ್ನು ಒದಗಿಸುವ ಭರವಸೆಯನ್ನೂ ನೀಡಿದೆ, ಆದರೆ ಔಪಚಾರಿಕವಾಗಿ ಕ್ಷಮೆಯಾಚನೆ ಇನ್ನೂ ಮಾಡಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಸ್ಮಾರಕದ ಹೊರತಾಗಿ, ಅಭಿಮಾನಿಗಳಿಗೆ ಕ್ರೀಡಾಂಗಣದಲ್ಲಿ ಉದ್ಯೋಗಾವಕಾಶ, ಸ್ಥಳೀಯ ಕ್ರೀಡಾ ಪ್ರತಿಭೆಗಳ ಬೆಳವಣಿಗೆ ಹಾಗೂ ಭವಿಷ್ಯದ ಕ್ರೀಡಾಪಟುಗಳಿಗೆ ಬೆಂಬಲ ನೀಡುವುದಾಗಿ ಆರ್‌ಸಿಬಿ ತಿಳಿಸಿದೆ.

ಇದರ ಜೊತೆಗೆ, ಆರ್‌ಸಿಬಿ ಅಭಿಮಾನಿಗಳ ಸುರಕ್ಷತೆಗಾಗಿ ನೂತನ ನಿಯಮವನ್ನು ರೂಪಿಸಲಿದ್ದು, ಪ್ರತಿವರ್ಷ ತನ್ನ ಸಿಬ್ಬಂದಿಗೆ ಜನಸಂದಣಿ ನಿರ್ವಹಣೆ ಮತ್ತು ತುರ್ತು ಪ್ರತಿಕ್ರಿಯೆ ತರಬೇತಿಯನ್ನು ನೀಡಲಿದೆ.

ಇದನ್ನು ಓದಿದ್ದೀರಾ? ಆನ್‌ಲೈನ್‌ ಜೂಜಾಟ ಕಂಪನಿ ಡ್ರೀಮ್11ನೊಂದಿಗೆ ಸಂಬಂಧ ಕೊನೆಗೊಳಿಸಿದ ಬಿಸಿಸಿಐ

ಆರ್‌ಸಿಬಿಯ ಕಾರ್ಯಯೋಜನೆಯು ಶೀಘ್ರ, ಪಾರದರ್ಶಕ ಮತ್ತು ಸಹಾನುಭೂತಿಯಿಂದ ಕೂಡಿದ ಬೆಂಬಲವನ್ನು ಒದಗಿಸುವ ಭರವಸೆಯನ್ನು ಒಳಗೊಂಡಿದೆ. ಕ್ರೀಡಾಂಗಣದ ಅಧಿಕಾರಿಗಳು, ಕ್ರೀಡಾ ಸಂಸ್ಥೆಗಳು ಮತ್ತು ಲೀಗ್ ಪಾಲುದಾರರೊಂದಿಗೆ ಜನಸಂದಣಿಯ ಸುರಕ್ಷತೆಯನ್ನು ಬಲಪಡಿಸಲು ಆರ್‌ಸಿಬಿ ಕೆಲಸ ಮಾಡಲಿದೆ. ಜನಸಂದಣಿಯ ಸುರಕ್ಷತೆಯ ಕುರಿತು ಸ್ವತಂತ್ರ ಸಂಶೋಧನೆಯನ್ನು ಆರಂಭಿಸಿದ್ದು, ಕರ್ನಾಟಕದ ಗ್ರಾಮೀಣ ಭಾಗದಲ್ಲಿ, ವಿಶೇಷವಾಗಿ ಸಿದ್ದಿ ಸಮುದಾಯದೊಂದಿಗೆ ಸಾಮಾಜಿಕ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತರಲಿದೆ. ಸಿದ್ದಿ ಸಮುದಾಯವು ಕರ್ನಾಟಕದಲ್ಲಿ ಅನುಸೂಚಿತ ಬುಡಕಟ್ಟು ಎಂದು ಗುರುತಿಸಲ್ಪಟ್ಟಿರುವ ಸಮುದಾಯವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತಕ್ಕೆ ಚಿನ್ನ ತಂದ ಮಹಿಳೆಯರು: ಏಷ್ಯನ್‌ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್‌ ಕಲಿಗಳ ಸಾಧನೆ

ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ...

ಏಷ್ಯನ್ ಗೇಮ್ಸ್: ಸ್ಕೀಟ್ ಶೂಟಿಂಗ್, ಸಾಫ್ಟ್ ಟೆನಿಸ್‌ನಲ್ಲಿ ಭಾರತಕ್ಕೆ ಕಂಚು; ಪದಕದತ್ತ ಮೀರಾಬಾಯಿ ದಾಪುಗಾಲು

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ ನಾಲ್ಕನೇ ದಿನವಾದ ಬುಧವಾರ...

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...

ಸೋತರೂ ಎಲ್ಲರ ಹೃದಯ ಗೆದ್ದ ಸುಚಿಕಾ: 700 ಗ್ರಾಂ ಹಿನ್ನಡೆಯಿಂದ ತಪ್ಪಿದ ಚಿನ್ನ

ಮಹಿಳೆಯರ ಸಾಂಪ್ರದಾಯಿಕ 60 ಕೆ.ಜಿ ವಿಭಾಗದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ)...