IPL-2025 | RCB V/s DC- ಕೊಹ್ಲಿ V/s ರಾಹುಲ್- ಕುತೂಹಲದ ಕಣವಾಗಲಿರುವ ಚಿನ್ನಸ್ವಾಮಿ ಸ್ಟೇಡಿಯಂ

Date:

ಇಂದಿನ ಪಂದ್ಯವನ್ನು ಯಾವ ತಂಡ ಗೆಲ್ಲಲಿದೆ ಎಂಬ ಚರ್ಚೆಗಳು ಶುರುವಾಗಿದ್ದು, ಬಹುತೇಕರು ಆರ್‌ಸಿಬಿ ತಂಡವನ್ನು ಗೆಲ್ಲುವ ಹಾಟ್‌ ಫೆವರಿಟ್‌ ಎಂದಿದ್ದಾರೆ... ಏಕೆ?

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು ಆರ್‌ಸಿಬಿ ಮತ್ತು ಡಿಸಿ ತಂಡಗಳ ನಡುವೆ ಚುಟುಕು ಕ್ರಿಕೆಟ್ ಕಾಳಗ ನಡೆಯಲಿದೆ. ಸತತ ಮೂರು ಪಂದ್ಯಗಳನ್ನು ಗೆದ್ದಿರುವ ಡೆಲ್ಲಿ ಕ್ಯಾಪಿಟಲ್ಸ್, ಗೆಲುವಿನ ನಾಗಾಲೋಟದಲ್ಲಿದೆ. ನಾಲ್ಕು ಪಂದ್ಯಗಳನ್ನಾಡಿ ಒಂದು ಪಂದ್ಯ ಸೋತು ಮೂರು ಗೆದ್ದಿರುವ ರಾಯಲ್ ಚಾಲೆಂಜರ್‍ಸ್ ಬೆಂಗಳೂರು, ತವರಿನಲ್ಲಿ ಗೆಲುವಿನ ಖಾತೆ ತೆರೆಯುವ ತವಕದಲ್ಲಿದೆ.

- Advertisement -

ಈ ಬಾರಿಯ ಐಪಿಎಲ್ ಸೀಸನ್‌ನಲ್ಲಿ ಆರ್‌ಸಿಬಿ ಆಡುತ್ತಿರುವ ರೀತಿ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ. ಕೋಲ್ಕತ್ತದಲ್ಲಿ ಉದ್ಘಾಟನಾ ಪಂದ್ಯ ಗೆದ್ದ ನಂತರ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 17 ವರ್ಷಗಳ ನಂತರ ಅದರ ನೆಲದಲ್ಲೇ ನೆಲಕಚ್ಚಿಸಿದೆ. ತವರಿನಲ್ಲಿ ಗುಜರಾತ್‌ ಟೈಟನ್ಸ್‌ಗೆ ಸೋತರೂ, ರನ್‌ ಹೊಳೆಕಂಡ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮೇಲೆ ರೋಚಕ ಜಯ ಪಡೆದು ಪುಟಿದೇಳುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

36 ವರ್ಷ ವಯಸ್ಸಿನ ವಿರಾಟ್‌ ಕೊಹ್ಲಿ ಅವರು ರನ್ ಸುಗ್ಗಿ ಕಾಣುತ್ತಿರುವುದು ತಂಡದ ಮನೋಬಲ ಹೆಚ್ಚಿಸಿದೆ. ಅವರ ಆಟ ಆರ್‌ಸಿಬಿ ಯಶಸ್ಸಿನಲ್ಲಿ ನಿರ್ಣಾಯಕವಾಗಲಿದೆ. ನಾಯಕ ರಜತ್ ಪಾಟೀದಾರ್ ಕೂಡ ಆಕ್ರಮಣಕಾರಿಯಾಗಿಯೇ ಆಡುತ್ತಿದ್ದಾರೆ. ಹಾಗೆಯೇ ಆಡಿರುವ ಮೂರೂ ಪಂದ್ಯಗಳನ್ನು ಗೆದ್ದಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆಟಗಾರರು ಆತ್ಮವಿಶ್ವಾಸದಲ್ಲಿದ್ದಾರೆ.

ಇದನ್ನು ಓದಿದ್ದೀರಾ?: IPL 2025 | ಹಿರಿಯರ ವಿರುದ್ಧ ದಾಖಲೆಯ ಶತಕ ಸಿಡಿಸಿದ ಕಿರಿಯ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ

ಎರಡೂ ತಂಡಗಳು ಸಮಬಲದಲ್ಲಿವೆ. ಹೀಗಾಗಿ ಸಾವಿರಾರು ಸಂಖ್ಯೆಯಲ್ಲಿ ಆರ್‌ಸಿಬಿ ಅಭಿಮಾನಿಗಳು ಮೈದಾನಕ್ಕೆ ಲಗ್ಗೆ ಇಡಲಿದ್ದಾರೆ. ಈ ಮಧ್ಯೆ ಇಂದಿನ ಪಂದ್ಯವನ್ನು ಯಾವ ತಂಡ ಗೆಲ್ಲಲಿದೆ ಎಂಬ ಚರ್ಚೆಗಳು ಶುರುವಾಗಿದ್ದು, ಬಹುತೇಕರು ಆರ್‌ಸಿಬಿ ತಂಡವನ್ನು ಗೆಲ್ಲುವ ಹಾಟ್‌ ಫೆವರಿಟ್‌ ತಂಡವಾಗಿ ಆಯ್ಕೆ ಮಾಡಿದ್ದಾರೆ. ಏಕೆಂದರೆ, ತವರಿನ ಸ್ಟೇಡಿಯಂನಲ್ಲಿ ಒಂದು ಸಲ ಸೋತಿರುವುದು, ಗೆಲುವಿಗೆ ದಾರಿಯಾಗಲಿದೆ. ಸೋಲಿನ ಕಹಿ ಗೆಲುವಿನ ಸಿಹಿ ತಿನ್ನಿಸಲಿದೆ ಎನ್ನುವುದು ಅಭಿಮಾನಿಗಳ ಅನಿಸಿಕೆಯಾಗಿದೆ.

ಹಾಗಾಗಿ ಈ ಪಂದ್ಯ ಆಸಕ್ತಿಕರವಾಗಿದೆ. ಅದರಲ್ಲೂ ತವರಿನ ಅಂಗಳದಲ್ಲಿ ಆಡುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್‌ ಬ್ಯಾಟಿಂಗ್ ಸ್ಟಾರ್ ಕೆ.ಎಲ್‌.ರಾಹುಲ್ ಅವರ ಪ್ರದರ್ಶನ ಕುತೂಹಲಕ್ಕೆ ಎಡೆಮಾಡಿದೆ.

ಹೌದು, ಕೆಎಲ್‌ ರಾಹುಲ್‌ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ, ಡಿಸಿ ತಂಡದ ಆಟಗಾರನಾಗಿ ಆರ್‌ಸಿಬಿ ವಿರುದ್ಧ ಮೈದಾನಕ್ಕಿಳಿಯಲಿದ್ದಾರೆ. ಕೆಎಲ್‌ ರಾಹುಲ್‌ ಆರ್‌ಸಿಬಿಯಲ್ಲಿರಲಿ ಎಂದು ಬಯಸುವ ಕೋಟ್ಯಂತರ ಅಭಿಮಾನಿಗಳಿಗೆ ಇದು ನಿಜಕ್ಕೂ ಸುಲಭವಾಗಿ ಅರಗಿಸಿಕೊಳ್ಳಲು ಸಾಧ್ಯವಾಗದ ಸಂಗತಿ.

ಆರ್‌ಸಿಬಿ ಅಭಿಮಾನಿಗಳಿಗೆ ಒಂದು ಕಡೆ ತಮ್ಮ ನೆಚ್ಚಿನ ತಂಡ ಗೆಲ್ಲಲಿ ಎಂಬ ಬಯಕೆ. ಆದರೆ ಮತ್ತೊಂದು ಕಡೆ ಕನ್ನಡದ ಹುಡುಗ ಕೆಎಲ್‌ ರಾಹುಲ್‌ನನ್ನು ಎದುರಾಳಿ ಪಾಳೆಯದಲ್ಲಿ ನೋಡುವ ಅನಿವಾರ್ಯತೆ. ಆರ್‌ಸಿಬಿ ಅಭಿಮಾನಿಗಳು ನಿಜಕ್ಕೂ ಸಂದಿಗ್ಧ ಪರಿಸ್ಥಿತಿಯಲ್ಲಿ ಸಿಲುಕಿದ್ದಾರೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ.

ಒಟ್ಟಿನಲ್ಲಿ ಹೇಳುವುದಾದರೆ, ಕನ್ನಡದ ಈ ಹುಡುಗ ಕೆಎಲ್‌ ರಾಹುಲ್‌ ಅವರನ್ನು ಆರ್‌ಸಿಬಿ ತಂಡದ ವಿರುದ್ಧ, ಅದರಲ್ಲೂ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಡುವುದನ್ನು ನೋಡುವುದು ತುಸು ಕಷ್ಟದ ವಿಚಾರವೇ.

ಈ ಆವೃತ್ತಿಯಲ್ಲಿ ಈ ಹಿಂದಿನ ಪಂದ್ಯಗಳಲ್ಲಿ ಬೆಂಗಳೂರಿನ ಆರಂಭಿಕ ಬೌಲರ್‌ಗಳಾದ ಜೋಶ್ ಹ್ಯಾಜಲ್‌ವುಡ್ ಮತ್ತು ಭುವನೇಶ್ವರ ಕುಮಾರ್ ಅವರು ಪವರ್‌ ಪ್ಲೇ ಅವಧಿಯಲ್ಲಿ ಎದುರಾಳಿಗಳನ್ನು ನಿಯಂತ್ರಿಸಿದ್ದಾರೆ. ಇಲ್ಲಿನ ಪರಿಸ್ಥಿತಿಯನ್ನು ಚೆನ್ನಾಗಿ ಬಲ್ಲ ಡೆಲ್ಲಿ ತಂಡದ ಕೀಪರ್–ಬ್ಯಾಟರ್‌ ಕೆ.ಎಲ್‌.ರಾಹುಲ್ ಅವರನ್ನು ಕಟ್ಟಿಹಾಕುವ ಸವಾಲು ಈ ಬೌಲರ್‌ಗಳ ಮುಂದಿದೆ. 

ಪಂದ್ಯ ಆರಂಭ: ರಾತ್ರಿ 7.30, ನೇರ ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್‌ ಮತ್ತು ಜಿಯೊಸ್ಟಾರ್ ಆ್ಯಪ್.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಸ್ಕೀಟ್ ಶೂಟಿಂಗ್, ಸಾಫ್ಟ್ ಟೆನಿಸ್‌ನಲ್ಲಿ ಭಾರತಕ್ಕೆ ಕಂಚು; ಪದಕದತ್ತ ಮೀರಾಬಾಯಿ ದಾಪುಗಾಲು

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ ನಾಲ್ಕನೇ ದಿನವಾದ ಬುಧವಾರ...

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...

ಸೋತರೂ ಎಲ್ಲರ ಹೃದಯ ಗೆದ್ದ ಸುಚಿಕಾ: 700 ಗ್ರಾಂ ಹಿನ್ನಡೆಯಿಂದ ತಪ್ಪಿದ ಚಿನ್ನ

ಮಹಿಳೆಯರ ಸಾಂಪ್ರದಾಯಿಕ 60 ಕೆ.ಜಿ ವಿಭಾಗದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ)...

ಏಷ್ಯನ್ ಗೇಮ್ಸ್ 2026: ಶೂಟಿಂಗ್‌ನಲ್ಲಿ ಭಾರತಕ್ಕೆ ಬೆಳ್ಳಿ, 3ಕ್ಕೇರಿದ ಪದಕಗಳ ಸಂಖ್ಯೆ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2026ರ ಕ್ರೀಡಾಕೂಟದಲ್ಲಿ ಭಾರತದ ಪದಕ...