ಡೆಲ್ಲಿ ಕ್ಯಾಪಿಟಲ್ಸ್ ತಂಡವು ಬೆಂಗಳೂರಿನ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೋಲಿಸಿದ್ದಕ್ಕೆ ಪ್ರತಿಯಾಗಿ ಆರ್ಸಿಬಿ ತಂಡವು ಡೆಲ್ಲಿಯನ್ನು ಅವರ ತವರು ಮೈದಾನದಲ್ಲೇ ಸೋಲಿಸುವ ಮೂಲಕ ಸೇಡು ತೀರಿಸಿಕೊಂಡಿದೆ.
ದೆಹಲಿಯ ಅರುಣ್ ಜೈಟ್ಲಿ ಸ್ಟೇಡಿಯಂನಲ್ಲಿ ಇಂದು ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಆರು ವಿಕೆಟ್ಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದೆ.
ಟಾಸ್ ಗೆದ್ದಿದ್ದ ಆರ್ಸಿಬಿ ನಾಯಕ ರಜತ್ ಪಾಟೀದಾರ್ ಬೌಲಿಂಗ್ ಆಯ್ಕೆ ಮಾಡಿಕೊಂಡು, ಡೆಲ್ಲಿ ತಂಡವನ್ನು 162 ರನ್ಗಳಿಗೆ ಕಟ್ಟಿ ಹಾಕುವಲ್ಲಿ ಯಶಸ್ವಿಯಾಗಿದ್ದರು.
ಬಳಿಕ ಗುರಿಯನ್ನು ಬೆನ್ನತ್ತಿದ ಆರ್ಸಿಬಿ ತಂಡವು, 26 ರನ್ ಗಳಿಸುವಷ್ಟರಲ್ಲಿ ಪ್ರಮುಖ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಬಳಿಕ ಕ್ರೀಸ್ನಲ್ಲಿದ್ದ ‘ದೆಹಲಿಯ ಮನೆಮಗ’ ವಿರಾಟ್ ಕೊಹ್ಲಿಯವರಿಗೆ ಜೊತೆಯಾದ ಕೃನಾಲ್ ಪಾಂಡ್ಯ, ಉತ್ತಮ ಜೊತೆಯಾದ ನಡೆಸಿ ತಂಡವನ್ನು ಗೆಲುವಿನ ದಡ ಸೇರಿಸುವಲ್ಲಿ ಸಫಲರಾದರು.
ವಿರಾಟ್ ಕೊಹ್ಲಿ ಹಾಗೂ ಕೃನಾಲ್ ಪಾಂಡ್ಯ ಜೋಡಿಯು 119 ರನ್ಗಳ ಜೊತೆಯಾದ ನಡೆಸಿದರು. ವಿರಾಟ್ ಕೊಹ್ಲಿ 51 ರನ್ ಗಳಿಸಿ, ಮಿಂಚಿದರು. ಕೃನಾಲ್ ಪಾಂಡ್ಯ ಔಟಾಗದೇ 73 ರನ್ ಗಳಿಸಿದರು.
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಇಂದಿನ ಪಂದ್ಯದಲ್ಲಿನ ಭರ್ಜರಿ ಗೆಲುವಿನೊಂದಿಗೆ ಆರ್ಸಿಬಿ ತಂಡವು, 14 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೆ ಏರಿದೆ.