ಬೆಂಗಳೂರಿನಲ್ಲಿ ಆರ್‌ಸಿಬಿ ವಿಜಯೋತ್ಸವ ನಿರ್ವಹಿಸಿದ್ದು ‘DNA’ ಕಂಪನಿ: ₹15 ಕೋಟಿ ಖರ್ಚು?

Date:

ಬೆಂಗಳೂರಿನಲ್ಲಿ ನಡೆದ ಆರ್‌ಸಿಬಿ ವಿಜಯೋತ್ಸವ ಸಮಾರಂಭದ ವೇಳೆ ಕಾಲ್ತುಳಿತ ಸಂಭವಿಸಿ 11 ಮಂದಿ ಸಾವನ್ನಪ್ಪಿದ್ದಾರೆ. 50 ಮಂದಿ ಗಾಯಗೊಂಡಿದ್ದಾರೆ. ಸರ್ಕಾರವು ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ನಡುವೆ, ವಿಧಾನಸೌಧ ಮತ್ತು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ವಿಜಯೋತ್ಸವ ಕಾರ್ಯಕ್ರಮವನ್ನು ಆಯೋಜಿಸಿದ್ದದ್ದು ‘ಡಿಎನ್‌ಎ ಎಂಟರ್‌ಟೈನ್‌ಮೆಂಟ್‌ ನೆಟ್‌ವರ್ಕ್ಸ್‌ ಪ್ರೈವೆಟ್‌ ಲಿಮಿಟೆಡ್‌’ ಕಂಪನಿ. ಈ ಕಂಪನಿಗೆ ಕಾರ್ಯಕ್ರಮ ನಿರ್ವಹಣೆಗಾಗಿ ಸರ್ಕಾರವು 15 ಕೋಟಿ ರೂ. ಪಾವತಿಸಿತ್ತು ಎಂದು ವರದಿಯಾಗಿದೆ.

‘ಡಿಎನ್‌ಎ ಎಂಟರ್‌ಟೈನ್‌ಮೆಂಟ್‌ ನೆಟ್‌ವರ್ಕ್ಸ್‌ ಪ್ರೈವೆಟ್‌ ಲಿಮಿಟೆಡ್‌’ ಕಂಪನಿಯನ್ನು ಡಾ. ಟಿ. ವೆಂಕಟ್ ವರ್ಧನ್ ಅವರು ಆರಂಭಿಸಿದ್ದರು. ಪ್ರಸ್ತುತ ಅವರೇ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರೂ ಆಗಿದ್ದಾರೆ. ಅಲ್ಲದೆ, ಕಂಪನಿಯಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿಯೊಬ್ಬರು ಕುಟುಂಬಸ್ಥರು ಹೂಡಿಕೆ ಮಾಡಿದ್ದಾರೆ ಎಂದೂ ಹೇಳಲಾಗುತ್ತಿದೆ. ಆದರೆ, ಇದಕ್ಕೆ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.

ಕಂಪನಿಯು ಸುಮಾರು 20 ವರ್ಷಗಳಿಂದ ನಾನಾ ರೀತಿಯ ಹೈ-ಪ್ರೊಫೈಲ್ ಕಾರ್ಯಕ್ರಮಗಳನ್ನು ಆಯೋಜಿಸುವ ಮತ್ತು ನಿರ್ವಹಿಸುವ ಗುತ್ತಿಗೆ ಪಡೆಯುತ್ತಿದೆ ಎಂದು ಹೇಳಲಾಗಿದೆ. ಇದೇ ಕಂಪನಿಗೆ ಆರ್‌ಸಿಬಿ ಸಂಭ್ರಮೋತ್ಸವವನ್ನು ಆಯೋಜಿಸಲು ಸರ್ಕಾರವು 15 ಕೋಟಿ ರೂ. ಪಾವತಿಸಿತ್ತು ಎಂಬುದಾಗಿ ಗೊತ್ತಾಗಿದೆ ಎಂದು ‘ಪ್ರಜಾವಾಣಿ’ ವರದಿ ಮಾಡಿದೆ.

ಸಂಭ್ರಮಾಚರಣೆ ಕಾರ್ಯಕ್ರಮವನ್ನು ನಿರ್ವಹಿಸುವಲ್ಲಿ ಸರ್ಕಾರ, ಪೊಲೀಸ್‌ ಇಲಾಖೆ, ಆರ್‌ಸಿಬಿ ಫ್ರಾಂಚೈಸಿ, ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಹಾಗೂ ಡಿಎನ್‌ಎ ಸಂಸ್ಥೆಗಳು ಎಡವಿವೆ. ಈ ಎಲ್ಲರ ನಡುವಿನ ಸಂವಹನ ಮತ್ತು ಸಮನ್ವಯದ ಕೊರತೆಯಿಂದ ದುರ್ಘಟನೆ ಸಂಭವಿಸಿದೆ ಎಂದು ಆರೋಪಿಸಲಾಗಿದೆ.

ಈ ವರದಿ ಓದಿದ್ದೀರಾ?: ವ್ಯಕ್ತಿಚಿತ್ರ | ಬೆಂಗಳೂರಿನ ನೂತನ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಎಂಥವರು?

ಕಾಲ್ತುಳಿತ ದುರಂತದ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರ ತಂಡವು ಡಿಎನ್‌ಎ ಕಂಪನಿಯ ಸುನಿಲ್ ಮ್ಯಾಥ್ಯು, ಕಿರಣ್ ಹಾಗೂ ಸುಮಂತ್ ಮತ್ತು ಆರ್‌ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆ ಅವರನ್ನು ಬಂಧಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಬಿ ದಯಾನಂದ್ ಸೇರಿದಂತೆ ಐವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿದೆ. ಆರ್‌ಸಿಬಿ ಫ್ರಾಂಸೈಸಿಯ ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್ ಅವರನ್ನು ವಜಾಗೊಳಿಸಲಾಗಿದೆ. ಗುಪ್ತಚರ ಇಲಾಖೆಯ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಇನ್ನು, ದುರಂತ ಘಟನೆಯ ‘ನೈತಿಕ ಹೊಣೆ’ ಹೊತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್‌ನ (ಕೆಎಸ್‌ಸಿಎ) ಕಾರ್ಯದರ್ಶಿ ಎ ಶಂಕರ್ ಮತ್ತು ಖಜಾಂಚಿ ಇ.ಎಸ್ ಜೈರಾಮ್ ಅವರು ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

[Float-Menu id="1"]

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Advertisements

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು ದುರಂತ | ಕ್ರಿಕೆಟ್‌ ಸಂಸ್ಥೆಯ ಉನ್ನತ ಅಧಿಕಾರಿಗಳ ರಾಜೀನಾಮೆ

ಜೂನ್‌ 4ರಂದು ನಡೆದ ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ...

ಕಾಲ್ತುಳಿತ ಪ್ರಕರಣ; ಆರ್‌ಸಿಬಿ, ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗಿದೆ: ಸಚಿವ ಎಚ್ ಕೆ ಪಾಟಿಲ್

ಆರ್ ಸಿಬಿ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಡೆದ ತಪ್ಪಿನ ಬಗ್ಗೆ ಎನೂ ಕ್ರಮಗಳನ್ನ...

ಕೋವಿಡ್‌ ಅಕ್ರಮ | ನ್ಯಾ. ಜಾನ್ ಮೈಕಲ್ ಕುನ್ಹಾ ಅವರ ವಿಚಾರಣಾ ಆಯೋಗದ ಅವಧಿ ವಿಸ್ತರಣೆ

ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತದ ಪ್ರಕರಣಕ್ಕೆ ಆದ್ಯತೆ ನೀಡಿ ಒಂದು ತಿಂಗಳೊಳಗಾಗಿ ವಿಚಾರಣೆ...

ಹವಾಮಾನ | ಮುಂಗಾರು ಚುರುಕು, ರಾಜ್ಯಾದ್ಯಂತ ಮತ್ತೆ ಮಳೆ ಅಬ್ಬರ ಸಾಧ್ಯತೆ

ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯಾದ್ಯಂತ ಮತ್ತೆ ಅಬ್ಬರಿಸಲಿದೆ ಎಂದು...

Download Eedina App Android / iOS

X