RCBಯಲ್ಲಿದ್ದ ಯಶ್‌ ದಯಾಳ್ IPLನಿಂದ ಔಟ್!

Date:

ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಭಾಗವಾಗಿದ್ದ ವೇಗಿ ಬೌಲರ್ ಯಶ್‌ ದಯಾಳ್‌, ವೈಯಕ್ತಿಕ ಕಾರಣಗಳಿಂದಾಗಿ 2026ರ ಐಪಿಎಲ್ ಟೂರ್ನಿಯಿಂದ ಹೊರಗುಳಿಯಲಿದ್ದಾರೆ ಎಂದು ಆರ್‌ಸಿಬಿ ಫ್ರಾಂಚೈಸಿ ತಿಳಿಸಿದೆ. ಕಳೆದ ವರ್ಷ ಯಶ್ ದಯಾಳ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬಂದಿತ್ತು. ಟೂರ್ನಿಯಿಂದ ಹೊರಗುಳಿಯಲು ಇದೇ ಕಾರಣವಿರಬಹುದು ಎಂದು ಹೇಳಲಾಗಿದೆ.

- Advertisement -

ಆರ್‌ಸಿಬಿ ಕ್ರಿಕೆಟ್ ನಿರ್ದೇಶಕ ಮೊ ಬೊಬಾಟ್ ಹೇಳುವಂತೆ; “ಯಶ್ ಈ ಬಾರಿ ತಂಡದಲ್ಲಿ ಇರುವುದಿಲ್ಲ. ಅವರು ಪ್ರಸ್ತುತ ವೈಯಕ್ತಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ನಾವು ಯಶ್ ಅವರಿಗೆ ಸಂಪೂರ್ಣ ಬೆಂಬಲ ನೀಡಿದ್ದೇವೆ. ಅದಕ್ಕಾಗಿಯೇ ಆಟಗಾರರನ್ನು ಉಳಿಸಿಕೊಳ್ಳುವ ಅಥವಾ ಬಿಡುಗಡೆ ಮಾಡುವ ಅವಕಾಶವಿದ್ದಾಗ ನಾವು ಅವರನ್ನು ತಂಡದಲ್ಲೇ ಉಳಿಸಿಕೊಂಡಿದ್ದೆವು” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

“ನಾವು ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ. ಈ ಹಂತದಲ್ಲಿ ಅವರು ತಂಡವನ್ನು ಸೇರುವುದು ಅವರ ಅಥವಾ ಫ್ರಾಂಚೈಸಿಯ ಹಿತದೃಷ್ಟಿಯಿಂದ ಸರಿಯಲ್ಲವೆಂದು ನಿರ್ಧರಿಸಲಾಗಿದೆ. ಅವರಿಗೆ ನಮ್ಮ ಬೆಂಬಲ ಮುಂದುವರಿಯಲಿದೆ” ಎಂದು ಹೇಳಿದ್ದಾರೆ.

ಈ ಲೇಖನ ಓದಿದ್ದೀರಾ?: ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಇತ್ತೀಚೆಗಷ್ಟೇ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ಶ್ವೇತಾ ಪುಂಡೀರ್ ಅವರನ್ನು ವಿವಾಹವಾಗಿದ್ದ ದಯಾಳ್, ಹಲವು ವಿವಾದಗಳನ್ನು ಎದುರಿಸುತ್ತಿದ್ದಾರೆ. ಅಪ್ರಾಪ್ತೆಯ ಮೇಲಿನ ಅತ್ಯಾಚಾರ ಆರೋಪದ ಮೇಲೆ ಅವರ ವಿರುದ್ಧ 2025ರ ಜುಲೈನಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಮದುವೆಯ ಆಮಿಷವೊಡ್ಡಿ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು ಆರೋಪಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

1,870 ಕೋಟಿ ರೂ. ದೇಣಿಗೆ ದಂಧೆ ಆರೋಪ: ಗುಜರಾತ್‌ನ 3 ರಾಜಕೀಯ ಪಕ್ಷಗಳ ಅಕ್ರಮ ಬಯಲು

ಗುಜರಾತ್‌ನಲ್ಲಿ ನೋಂದಾಯಿತವಾಗಿದ್ದ, ಆದರೆ ಮಾನ್ಯತೆ ಪಡೆಯದ ಮೂರು ರಾಜಕೀಯ ಪಕ್ಷಗಳು ಆದಾಯ...

ಬೆಳಗಾವಿ | ಸಾವಿನ ಕದ ತಟ್ಟಿ ಬಂದ ರೈತನ ಮಗನಿಗೆ 12 ಚಿನ್ನದ ಪದಕ

ಬದುಕು ಮುಗಿಯಿತು ಎಂದುಕೊಂಡಿದ್ದ ಕ್ಷಣದಿಂದಲೇ ಹೊಸ ಬದುಕಿನತ್ತ ಹೆಜ್ಜೆ ಇಟ್ಟರು. ಸಾವಿನ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ ಮಂಡಳಿಯ ಚಪ್ಪಾಳೆ

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ...

ತಮಗೆ ಬಿಜೆಪಿ‌ ಸೇರುವಂತೆ ಗ್ಯಾನೇಶ್ ಕುಮಾರ್ ಆಹ್ವಾನಿಸಿದ್ದರು: ನಿವೃತ್ತ ಐಎಎಸ್ ಜಿಜಿ ಥಾಮ್ಸನ್

ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರು 2016ರಲ್ಲಿ ಸರ್ಕಾರಿ ಸೇವೆಯಲ್ಲಿದ್ದಾಗ...