474ಕ್ಕೆ ಆಸೀಸ್‌ ಆಲೌಟ್; ಕಪ್ಪು ಪಟ್ಟಿ ಧರಿಸಿ ಮಾಜಿ ಪ್ರಧಾನಿಗೆ ಗೌರವ ಸಲ್ಲಿಸಿದ ಟೀಂ ಇಂಡಿಯಾ

Date:

ಮೆಲ್ಬೋರ್ನ್​ನಲ್ಲಿ ನಡೆಯುತ್ತಿರುವ ಬಾರ್ಡರ್ – ಗವಾಸ್ಕರ್ ಟ್ರೋಫಿ ಸರಣಿಯ ಬಾಕ್ಸಿಂಗ್ ಡೇ ಟೆಸ್ಟ್‌ ಪಂದ್ಯದಲ್ಲಿ ಆಸೀಸ್‌ ತನ್ನ ಮೊದಲ ಇನಿಂಗ್ಸ್‌ನಲ್ಲಿ 122.4 ಓವರ್‌ಗಳಲ್ಲಿ 474 ರನ್‌ಗಳಿಗೆ ಆಲೌಟ್ ಆಗಿದೆ. 311/6 ರನ್‌ನೊಂದಿಗೆ ಎರಡನೇ ದಿನದಾಟ ಆರಂಭಿಸಿದ ಆಸ್ಟ್ರೇಲಿಯಾ ಸ್ಟೀವನ್‌ ಸ್ಮಿತ್‌ ಅವರ ಆಕರ್ಷಕ ಶತಕದ(140) ನೆರವಿನಿಂದಿಗೆ 470ರ ಗಡಿ ದಾಟಿತು.

- Advertisement -

ಟೀಂ ಇಂಡಿಯಾ ಪರ ಜಸ್‌ಪ್ರೀತ್ ಬುಮ್ರಾ ಮತ್ತೆ ತಮ್ಮ ಕರಾರುವಾಕ್ಕಾದ ಬೌಲಿಂಗ್ ಮೂಲಕ 4 ವಿಕೆಟ್ ಪಡೆದರೆ, ರವೀಂದ್ರ ಜಡೇಜಾ 3 ಆಕಾಶ್ ದೀಪ್ 2, ವಾಷಿಂಗ್ಟನ್ ಸುಂದರ್ 1 ವಿಕೆಟ್ ಪಡೆದು ಆಸೀಸ್‌ ತಂಡವನ್ನು ಆಲೌಟ್‌ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಮೊದಲ ಇನಿಂಗ್ಸ್‌ ಆರಂಭಿಸಿರುವ ಭಾರತ ತಂಡ ನಾಯಕ ರೋಹಿತ್‌ ಶರ್ಮಾ ವಿಕೆಟ್‌ ಕಳೆದುಕೊಂಡು ಆರಂಭಿಕ ಆಘಾತ ಅನುಭವಿಸಿದೆ. ಮೂರು ರನ್‌ ಗಳಿಸಿದ ರೋಹಿತ್‌ ಆಸೀಸ್‌ ನಾಯಕ ಪ್ಯಾಟ್‌ ಕಮ್ಮಿನ್ಸ್ ಬೌಲಿಂಗ್‌ನಲ್ಲಿ ಬೊಲ್ಯಾಂಡ್‌ಗೆ ಕ್ಯಾಚ್‌ ನೀಡಿ ಔಟಾದರು. ಇತ್ತೀಚಿನ ವರದಿಗಳಂತೆ ಟೀಂ ಇಂಡಿಯಾ 11 ಓವರ್‌ಗಳಿಗೆ 1 ವಿಕೆಟ್‌ ಕಳೆದುಕೊಂಡು 44 ರನ್‌ ಗಳಿಸಿದೆ.

ಕಪ್ಪು ಪಟ್ಟಿ ಧರಿಸಿ ಮಾಜಿ ಪ್ರದಾನಿಗೆ ಗೌರವ ಸಲ್ಲಿಸಿದ ಟೀಂ ಇಂಡಿಯಾ

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನಿಧನದ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯನ್ನು ಆಡುತ್ತಿರುವ ಟೀಂ ಇಂಡಿಯಾ ಎರಡನೇ ದಿನದಾಟದಲ್ಲಿ ಮನಮೋಹನ್ ಸಿಂಗ್ ಅವರಿಗೆ ಗೌರವ ಸಲ್ಲಿಸಲು ಕೈಗೆ ಕಪ್ಪು ಪಟ್ಟಿ ಧರಿಸಿ ಕ್ಷೇತ್ರರಕ್ಷಣೆ ಮಾಡಿದರು.

ಈ ಸುದ್ದಿ ಓದಿದ್ದೀರಾ? ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನಿಧನ

ಟೀಂ ಇಂಡಿಯಾದ ಹಲವು ಮಾಜಿ ಆಟಗಾರರು ಸಂತಾಪ ಸೂಚಿಸಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್​ಗಳನ್ನು ಹಂಚಿಕೊಂಡಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಸಂತಾಪ ಸೂಚಿಸಿರುವ ವಿರೇಂದ್ರ ಸೆಹ್ವಾಗ್, ‘ನಮ್ಮ ಮಾಜಿ ಪ್ರಧಾನಿ ಶ್ರೀ ಮನಮೋಹನ್ ಸಿಂಗ್ ಅವರ ನಿಧನಕ್ಕೆ ನನ್ನ ಹೃತ್ಪೂರ್ವಕ ಸಂತಾಪಗಳು ಎಂದು ಬರೆದುಕೊಂಡಿದ್ದಾರೆ.

ಭಾರತದ ಮಾಜಿ ಆಲ್ ರೌಂಡರ್ ಯುವರಾಜ್ ಸಿಂಗ್ ಕೂಡ ಸಂತಾಪ ಸೂಚಿಸಿದ್ದು, ‘ಡಾ. ಮನಮೋಹನ್ ಸಿಂಗ್ ಅವರ ನಿಧನದ ದುಃಖದ ಸುದ್ದಿ. ಭಾರತದ ಪ್ರಗತಿಗಾಗಿ ಅವಿರತವಾಗಿ ಶ್ರಮಿಸಿದ ದೂರದೃಷ್ಟಿಯ ನಾಯಕ ಮತ್ತು ನಿಜವಾದ ರಾಜಕಾರಣಿ. ಅವರ ಬುದ್ಧಿವಂತಿಕೆ ಮತ್ತು ನಮ್ರತೆ ಯಾವಾಗಲೂ ನೆನಪಿನಲ್ಲಿ ಉಳಿಯುತ್ತದೆ. ಅವರ ಪ್ರೀತಿಪಾತ್ರರಿಗೆ ನನ್ನ ಹೃತ್ಪೂರ್ವಕ ಸಂತಾಪಗಳು ಎಂದು ಬರೆದುಕೊಂಡಿದ್ದಾರೆ.

ಭಾರತ – ಪಾಕ್‌ ಕ್ರಿಕೆಟ್‌ ಸಂಬಂಧ ಮರುಸ್ಥಾಪಿಸಲು ಯತ್ನಿಸಿದ್ದ ಮನಮೋಹನ್

ಭಾರತ-ಪಾಕಿಸ್ತಾನ ನಡುವಿನ ಕ್ರಿಕೆಟ್ ಸಂಬಂಧವನ್ನು ಮರುಸ್ಥಾಪಿಸಲು ಮಾಜಿ ಪ್ರಧಾನಿ ಮನ್‌ಮೋಹನ್‌ ಸಿಂಗ್‌ ಯತ್ನಿಸಿ ಯಶಸ್ವಿಯಾಗಿದ್ದರು. 2008ರಲ್ಲಿ ಮುಂಬೈ ದಾಳಿ ಬಳಿಕ ಭಾರತ-ಪಾಕ್ ಕ್ರಿಕೆಟ್ ಸಂಬಂಧ ಹಳಸಿತ್ತು.ಆಗ ಪ್ರಧಾನಿಯಾಗಿದ್ದ ಸಿಂಗ್‌ ಅವರು ಪಾಕಿಸ್ತಾನದ ಪ್ರಧಾನಿ ಯೂಸುಫ್ ಗಿಲಾನಿಯನ್ನೇ ಭಾರತಕ್ಕೆ ಆಹ್ವಾನಿಸಿದರು. ಆಹ್ವಾನ ಸ್ವೀಕರಿಸಿ ಯೂಸುಫ್ ಭಾರತಕ್ಕೆ ಆಗಮಿಸಿದರು. ಮೊಹಾಲಿಯಲ್ಲಿ ನಡೆದ ಐತಿಹಾಸಿಕ ಪಂದ್ಯವನ್ನು ಸಿಂಗ್-ಯೂಸುಫ್ ಗಿಲಾನಿ ಒಟ್ಟಿಗೇ ಕೂತು ವೀಕ್ಷಿಸಿದರು. ಬಳಿಕ 2012ರಲ್ಲಿ ಭಾರತ-ಪಾಕ್ ನಡುವೆ ಭಾರತದಲ್ಲಿ ದ್ವಿಪಕ್ಷೀಯ ಸರಣಿ ನಡೆಯಿತು. ಎರಡು ತಂಡಗಳ ನಡುವೆ ದ್ವಿಪಕ್ಷೀಯ ಸರಣಿ ನಡೆದಿದ್ದು ಅದೇ ಕೊನೆ ಬಾರಿ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮನೆಯಲ್ಲಿ ಸ್ಮಾರ್ಟ್‌ಫೋನ್, ಟಿವಿ ಇಲ್ಲ: ಬಡತನ ಮೆಟ್ಟಿ ನಿಂತು ಏಷ್ಯಾಡ್‌ನಲ್ಲಿ ಚಿನ್ನ ಗೆದ್ದ ನೀರು ದಂಡಾ

ಮನೆಯಲ್ಲಿ ಸ್ಮಾರ್ಟ್‌ಫೋನ್, ಟಿವಿ ಸೇರಿದಂತೆ ಯಾವೊಂದು ಸೌಕರ್ಯವೂ ಇಲ್ಲ. ಕೈಯಲ್ಲಿ ಬಿಪಿಎಲ್...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ...

ವಿರಾಟ್ ‘ವಿಶ್ವ’ರೂಪ: 15 ಸಾವಿರ ರನ್ ಗಡಿ ದಾಟಿ ಸಚಿನ್ ದಾಖಲೆ ಹಿಂದಿಕ್ಕಿದ ಕೊಹ್ಲಿ

ಕೇರಳದ ತಿರುವನಂತಪುರದಲ್ಲಿರುವ ಗ್ರೀನ್‌ಫೀಲ್ಡ್‌ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ವೆಸ್ಟ್ ಇಂಡೀಸ್...